HomeKarnatakaಭಾರಿ ಮಳೆ ಹಿನ್ನೆಲೆ ವಿವಿಧ ಜಿಲ್ಲೆಗಳಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ವಿವಿಧ ಜಿಲ್ಲೆಗಳಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧೆಡೆ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿವಿಧ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಜು. 24 ರಂದು ಶಿವಮೊಗ್ಗ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸದರಿ ರಜೆಯನ್ನು ಮುಂದಿನ ರಜಾ ದಿನದಲ್ಲಿ ತರಗತಿ ನಡೆಸುವ ಮೂಲಕ ಶಾಲಾ ದಿನಗಳನ್ನು ಮರು ಹೊಂದಾಣಿಕೆ ಮಾಡಿಕೊಳ್ಳಲು ಶಾಲಾ ಮುಖ್ಯ ಶಿಕ್ಷಕರಿಗೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು(ಆಡಳಿತ) ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ನಾಳೆ ರಜೆ ನೀಡಿ ಪ್ರಭುಲಿಂಗ ಕವಲಿಕಟ್ಟಿ ಆದೇಶಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಖಾನಾಪುರ, ಕಿತ್ತೂರು, ಬೆಳಗಾವಿ ನಗರ ಮತ್ತು ಗ್ರಾಮಾಂತರ ತಾಲೂಕುಗಳ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದ ಕಾರಣ ಸೋಮವಾರ ರಜೆ ನೀಡಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಮಳೆ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಮೂರು ತಾಲೂಕಿನ ಶಾಲೆಗಳಿಗೆ ಸೋಮವಾರ ಒಂದು ದಿನ ರಜೆ ನೀಡಲಾಗಿದೆ.

ಹಾಸನ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು, ಹಾಸನ ತಾಲೂಕಿನದ್ಯಂತ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. 5 ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆ, ಅಂಗನವಾಡಿಗಳಿಗೆ ರಜೆ ನೀಡಲಾಗಿದೆ. ಹಾಸನ ಜಿಲ್ಲಾಧಿಕಾರಿ ಸತ್ಯಭಾಮಾ ಅವರು ನಾಳೆ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿಯೂ ನಾಳೆ ಶಾಲೆಗಳಿಗೆ ರಜೆ ನೀಡಲಾಗಿದೆ. ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ನಾಳೆ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular