HomeKarnatakaBREAKING NEWS: ಭಾರಿ ಮಳೆಗೆ ಮನೆ ಗೋಡೆ ಕುಸಿತ: ಮಗಳ ಮನೆಗೆ ಬಂದಿದ್ದ ವ್ಯಕ್ತಿ ದುರಂತ...

BREAKING NEWS: ಭಾರಿ ಮಳೆಗೆ ಮನೆ ಗೋಡೆ ಕುಸಿತ: ಮಗಳ ಮನೆಗೆ ಬಂದಿದ್ದ ವ್ಯಕ್ತಿ ದುರಂತ ಅಂತ್ಯ

ಕಲಬುರಗಿ: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಭಾರಿ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕುರುಕುಂಟಾದಲ್ಲಿ ನಡೆದಿದೆ.

ರಾಜೇಂದ್ರ ಪಾಟೀಲ್ (62) ಮೃತ ದುರ್ದೈವಿ. ರಾಜೇಂದ್ರ ಪಾಟೀಲ್, ಮಗಳ ಮನೆಗೆಂದು ಬಂದಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ. ಮಗಳ ಮನೆಯಲ್ಲಿ ಮಲಗಿದ್ದ ವೇಳೆ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದಿದೆ. ಮಣ್ಣಿನಡಿ ಸಿಲುಕಿದ ರಾಜೇಂದ್ರ ಪಾಟೀಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕುರುಕುಂಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular