HomeLatest NewsBREAKING : ರಾಜ್ಯದಲ್ಲಿ ಇಂದಿನಿಂದ 6 ದಿನ ಗುಡುಗು- ಮಿಂಚು ಸಹಿತ ಭಾರಿ ಮಳೆ :...

BREAKING : ರಾಜ್ಯದಲ್ಲಿ ಇಂದಿನಿಂದ 6 ದಿನ ಗುಡುಗು- ಮಿಂಚು ಸಹಿತ ಭಾರಿ ಮಳೆ : ಈ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದಲ್ಲಿ ಇಂದಿನಿಂದ 6 ದಿನ ಗುಡುಗು- ಮಿಂಚು ಸಹಿತ ಭಾರಿ ಮಳೆಯಾಗಲಿದ್ದು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ವ್ಯಾಪಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಮೇ 29ರಂದು ರೆಡ್ ಅಲರ್ಟ್ ನೀಡಲಾಗಿದೆ. ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಧಾರವಾಡ, ಬೀದರ್, ಹಾವೇರಿ, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಮೇ 30ರಂದು ರೆಡ್ ಅಲರ್ಟ್ ನೀಡಲಾಗಿದೆ. ಉಡುಪಿ, ದಾವಣಗೆರೆ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ತುಮಕೂರು, ಮಂಡ್ಯ, ಚಿತ್ರದುರ್ಗ, ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಮೇ 31 ರಂದು ಕರಾವಳಿಯ ಎಲ್ಲಾ ಜಿಲ್ಲೆಗಳು ಕೊಡಗು, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಶಿವಮೊಗ್ಗ, ಮಂಡ್ಯ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular