HomeLatest Newsರಾಜ್ಯದಲ್ಲಿ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ರಾಜ್ಯದಲ್ಲಿ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಶನಿವಾರ ಮಳೆಯಾಗಿದ್ದು, ಇನ್ನೂ ಒಂದು ವಾರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಸಿಡಿಲಿನ ಆರ್ಭಟ ಜೋರಾಗಿರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಏಪ್ರಿಲ್ 27, 28 ರಂದು ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಲಿದ್ದು, ಕೆಲವೆಡೆ ಆಲಿಕಲ್ಲು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಸಿಡಿಲಿನ ಆಘಾತ ಅಧಿಕವಾಗಿರುವುದರಿಂದ ಮರದ ಕೆಳಗೆ ನಿಲ್ಲಬಾರದು, ಮಳೆ ಬರುವ ಮುನ್ಸೂಚನೆ ಕಂಡ ಕೂಡಲೇ ಮನೆಯೊಳಗೆ ಇರಬೇಕು. ಮನೆಯ ಕಿಟಕಿ ಬಾಗಿಲುಗಳನ್ನು ಮುಚ್ಚಬೇಕು. ಕಾಂಕ್ರೀಟ್ ಮಹಡಿಗಳ ಮೇಲೆ ಮಲಗಬಾರದು. ವಿದ್ಯುತ್ ವಸ್ತುಗಳನ್ನು ಅನ್ ಪ್ಲಗ್ ಮಾಡಬೇಕು. ನೀರಿನಲ್ಲಿದ್ದರೆ ತಕ್ಷಣ ಹೊರಬರಬೇಕು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular