HomeLatest NewsRain alert Karnataka : ರಾಜ್ಯಾದ್ಯಂತ ಮುಂದಿನ 1 ವಾರ ಗುಡುಗು ಸಹಿತ ಭಾರಿ...

Rain alert Karnataka : ರಾಜ್ಯಾದ್ಯಂತ ಮುಂದಿನ 1 ವಾರ ಗುಡುಗು ಸಹಿತ ಭಾರಿ ಮಳೆ : ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯಾದ್ಯಂತ ಮುಂದಿನ ಒಂದು ವಾರ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ನಾಲ್ಕು ದಿನಗಳು ಎಲ್ಲ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.

ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿಯೂ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಯ ಹಲವೆಡೆ ಭಾರಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಬಾಗಲಕೋಟೆ, ಗದಗ, ವಿಜಯಪುರ, ದಕ್ಷಿಣ ಕನ್ನಡ, ಧಾರವಾಡ, ವಿಜಯಪುರ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular