HomeKarnatakaRain alert : ಇಂದಿನಿಂದ 3 ದಿನ ರಾಜ್ಯದ 18 ಜಿಲ್ಲೆಯಲ್ಲಿ ಗುಡುಗು ಸಹಿತ ಭಾರಿ...

Rain alert : ಇಂದಿನಿಂದ 3 ದಿನ ರಾಜ್ಯದ 18 ಜಿಲ್ಲೆಯಲ್ಲಿ ಗುಡುಗು ಸಹಿತ ಭಾರಿ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಮುಂದಿನ ಕೆಲ ದಿನಗಳ ಕಾಲ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಮಳೆಯ ಅಬ್ಬರ ಮುಂದುವರಿಕೆ

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಕರಾವಳಿ ಕರ್ನಾಟಕದಲ್ಲಿ ಜುಲೈ 31ರವರೆಗೆ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಜುಲೈ , 30 ಮತ್ತು 31, ಆಗಸ್ಟ್ 1 ರಂದು ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿಯೂ ಭಾರೀ ಮಳೆಯ ಜೊತೆಗೆ ಗಂಟೆಗೆ 40–50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆ ಹಾಗೂ ಆಗಸ್ಟ್ 1 ರವರೆಗೆ ಅಲ್ಲಲ್ಲಿ ಭಾರಿ ಮಳೆ & ಮಲೆನಾಡು ಜಿಲ್ಲೆಗಳಲ್ಲಿ ಜುಲೈ 30 & 31 ರಂದು ಅಲ್ಲಲ್ಲಿ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆ ಸ್ವಲ್ಪ ಹೆಚ್ಚಿರಬಹುದು. ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ 2ರಿಂದ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.

ಎಚ್ಚರಿಕೆ ವಹಿಸಲು ಸೂಚನೆ

ನದಿ ತೀರದ ಪ್ರದೇಶಗಳು, ತಗ್ಗು ಪ್ರದೇಶಗಳಲ್ಲಿ ವಾಸಿಸುವವರು ಹಾಗೂ ಗುಡ್ಡಗಾಡು ಪ್ರದೇಶಗಳ ನಿವಾಸಿಗಳು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಗುಡುಗು, ಮಿಂಚು ಮತ್ತು ಬಲವಾದ ಗಾಳಿಯಿಂದ ಮರಗಳು ಉರುಳುವ ಹಾಗೂ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆ ಇರುವುದರಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಸಾರ್ವಜನಿಕರಿಗೆ ಸಲಹೆ

  • ಅನಗತ್ಯವಾಗಿ ಪ್ರವಾಸ ಮತ್ತು ದೂರ ಪ್ರಯಾಣ ತಪ್ಪಿಸಿ.
  • ನದಿ, ಹೊಳೆ ಹಾಗೂ ಜಲಾಶಯಗಳ ಬಳಿ ತೆರಳದಿರಿ.
  • ಹವಾಮಾನ ಇಲಾಖೆಯ ಅಧಿಕೃತ ಸೂಚನೆಗಳನ್ನು ನಿರಂತರವಾಗಿ ಗಮನಿಸಿ.
  • ಮೀನುಗಾರರು ಸಮುದ್ರಕ್ಕೆ ತೆರಳುವ ಮೊದಲು ಸ್ಥಳೀಯ ಎಚ್ಚರಿಕೆಗಳನ್ನು ಪಾಲಿಸಬೇಕು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular