HomeLatest Newsಗಮನಿಸಿ: ರಾಜ್ಯದಲ್ಲಿ ಗುಡುಗು, ಮಿಂಚು, ಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ: 17 ಜಿಲ್ಲೆಗಳಿಗೆ 'ಯೆಲ್ಲೋ...

ಗಮನಿಸಿ: ರಾಜ್ಯದಲ್ಲಿ ಗುಡುಗು, ಮಿಂಚು, ಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ: 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’

ಬೆಂಗಳೂರು: ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಗುಡುಗು, ಮಿಂಚು, ಗಾಳಿ ಸಹಿತ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.

ಕಳೆದ ಎರಡು ಮೂರು ದಿನಗಳಿಂದ ರಾಜ್ಯದ ಹಲವು ಮುಂಗಾರು ಪೂರ್ವ ಮಳೆ ಅಬ್ಬರ ಜೋರಾಗಿದ್ದು, ಇನ್ನೂ ಒಂದು ವಾರ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ

ಇಂದು ಮತ್ತು ನಾಳೆ ರಾಜ್ಯದ 17 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾವೇರಿ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅದೇ ರೀತಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular