HomeKarnatakaRain alert : ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆ : 17 ಜಿಲ್ಲೆಗಳಿಗೆ...

Rain alert : ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆ : 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ


ಬೆಂಗಳೂರು : ರಾಜ್ಯದ ಜನತೆಗೆ ಬಿಸಿಲಿನ ಬೇಗೆಯಿಂದ ಮುಕ್ತಿ ಸಿಗುವ ಮುನ್ಸೂಚನೆ ಸಿಕ್ಕಿದ್ದು, ಇಂದು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಒಟ್ಟು 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.

ಹಲವು ದಿನಗಳ ಒಣಹವೆಯ ನಂತರ, ಇಂದು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಗುಡುಗು ಹಾಗೂ ಸಿಡಿಲು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಹವಾಮಾನ ಬದಲಾವಣೆಯ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಬೀದರ್ ವರೆಗಿನ ಒಟ್ಟು 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

ಎಲ್ಲೆಲ್ಲಿ ಮಳೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೀದರ್, , ರಾಯಚೂರು, ಬಾಗಲಕೋಟೆ, ಕೊಪ್ಪಳ, ಕಲಬುರ್ಗಿ, ಯಾದಗಿರಿ, ಬಿಜಾಪುರ ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ರಾಮನಗರ, ಕೋಲಾರ, , ಹಾಸನ, ಕೊಡಗು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.

ಬೆಂಗಳೂರಿನಲ್ಲಿ ತಾಪಮಾನದಲ್ಲಿ ಅಲ್ಪ ಸುಧಾರಣೆಯಾಗಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಇನ್ನೂ ಕೆಲವು ದಿನಗಳ ಕಾಲ ಒಣಹವೆ ಮುಂದುವರಿಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular