HomeKarnatakaಮುಂದಿನ ಎರಡು ದಿನ ರಾಜ್ಯದ ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ

ಮುಂದಿನ ಎರಡು ದಿನ ರಾಜ್ಯದ ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತೆ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸೆಪ್ಟೆಂಬರ್ 2ರಂದು ಉತ್ತರ ಕನ್ನಡ, ಕಲಬುಗಿ, ಬೀದರ್, ವಿಜಯಪುರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಚಿಕ್ಕಮಗಳೂರು, ದಾವಣಗೆರೆ, ಬಳ್ಳಾರಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಸೆಪ್ಟೆಂಬರ್ 3ರಂದು ಕೂಡ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular