HomeKarnatakaಮಲೆನಾಡು, ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ: ಎರಡು ದಿನ ಯೆಲ್ಲೋ ಅಲರ್ಟ್

ಮಲೆನಾಡು, ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ: ಎರಡು ದಿನ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ 6ರಿಂದ 15 ಸೆಂ.ಮೀ. ವರೆಗೆ ಮಳೆಯಾಗುವ ಸಾಧ್ಯತೆಯಿದ್ದು, ಜುಲೈ 1 ಮತ್ತು 2 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ರಾಜ್ಯದಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಲೆನಾಡು ಭಾಗದಲ್ಲಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಗಾಳಿ ಬೀಸುವ ಸಂಭವವಿದೆ. ಕರಾವಳಿಯಲ್ಲಿ 35 ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular