HomeKarnatakaಕರಾವಳಿ ಪ್ರದೇಶದಲ್ಲಿ ಭಾರಿ ‘ಮಳೆ’ ಮುನ್ನೆಚ್ಚರಿಕೆ : ಮೀನುಗಾರರಿಗೆ ಮಹತ್ವದ ಸೂಚನೆ

ಕರಾವಳಿ ಪ್ರದೇಶದಲ್ಲಿ ಭಾರಿ ‘ಮಳೆ’ ಮುನ್ನೆಚ್ಚರಿಕೆ : ಮೀನುಗಾರರಿಗೆ ಮಹತ್ವದ ಸೂಚನೆ

ದುರ್ಬಲಗೊಂಡಿದ್ದ ಕರಾವಳಿ ಪ್ರದೇಶದಲ್ಲಿ ಭಾರಿ ‘ಮಳೆ’ ( Heavy Rain) ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮೀನುಗಾರರು ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಿದೆ.

ಇಂದಿನಿಂದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದ್ದು, ಉತ್ತರ ಒಳನಾಡಿನ ಹಲವು ಪ್ರದೇಶಗಳಲ್ಲಿ ಸಾಧಾರಣ ಮಳೆ ಬರಲಿದೆ. ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ. ಗಾಳಿಯ ವೇಗವು 30 ರಿಂದ 40 ಕಿಮೀ ವೇಗದಲ್ಲಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಪ್ರವಾಸಿಗರಿಗೂ ಸಮುದ್ರ ತೀರದಲ್ಲಿ ಓಡಾಡುವುದು, ಆಟವಾಡುವುದನ್ನು ನಿರ್ಬಂಧಿಸಲಾಗಿದೆ. ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಐದು ದಿನ ಉತ್ತಮ ಮಳೆಯಾಗುವ ಸಂಭವ ಇದೆ. ಮುಂದಿನ ಐದು ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular