ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಇಂದು ( ಜುಲೈ 30) ರಂದು ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಮಳೆ ಆರ್ಭಟ ತಿಂಗಳಾಂತ್ಯದವರೆಗೂ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಲೆನಾಡು, ಕರಾವಳಿ ಪ್ರದೇಶದಲ್ಲಿ ಭಾರಿ ಮಳೆ ಆಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಚಿಕ್ಕಮಗಳೂರು, ಕೊಡಗು, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಜುಲೈ30ರವರೆಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.