ಡಿಜಿಟಲ್ ಡೆಸ್ಕ್ : ರಾಜ್ಯದ ಹಲವು ಕಡೆ ಧಾರಾಕಾರ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಇಂದು (ಜುಲೈ 25) ಹಲವು ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಕಾಲೇಜು ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ. ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಇಂದು ರಜೆ ಘೋಷಣೆ ಮಾಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರದಲ್ಲಿ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ತಹಶೀಲ್ದಾರ್ ರಜೆ ಘೋಷಣೆ ಮಾಡಿದ್ದಾರೆ.
ಕೊಡಗು ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ .
ತೀರ್ಥಹಳ್ಳಿ ತಾಲೂಕಿನ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪರೀಕ್ಷೆ ನಡೆಯುವ ಶಾಲೆಗಳಿಗೆ ರಜೆ ಘೋಷಿಸಿಲ್ಲ ಎನ್ನಲಾಗಿದೆ.
ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ.ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಹಾಸನ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಮಳೆಯ ಅಬ್ಬರ ಜೋರಾಗಲಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಜಿಲ್ಲೆಗಳಲ್ಲಿಯೂ ಧಾರಾಕಾರ ಮಳೆಯಾಗುತ್ತಿದೆ.