HomeLatest NewsRain alert Karnataka : ರಾಜ್ಯಾದ್ಯಂತ ಇಂದಿನಿಂದ 3-4 ದಿನ ಭಾರಿ ಮಳೆ :...

Rain alert Karnataka : ರಾಜ್ಯಾದ್ಯಂತ ಇಂದಿನಿಂದ 3-4 ದಿನ ಭಾರಿ ಮಳೆ : ಯೆಲ್ಲೋ, ಆರೆಂಜ್ ಅಲರ್ಟ್ ಘೋಷಣೆ.!

ಬೆಂಗಳೂರು : ಇಂದಿನಿಂದ 3-4 ದಿನ ರಾಜ್ಯಾದ್ಯಂತ ಭಾರಿ ಮಳೆಯಾಗಲಿದ್ದು, ಯೆಲ್ಲೋ, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಹೌದು. ನಾಳೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಾದ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಗದಗ, ಬೆಳಗಾವಿ, ಧಾರವಾಡ, ಹಾವೇರಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಮುಂದಿನ ಎರಡು ದಿನಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಹವಾಮಾನದಲ್ಲಿ ಉಂಟಾಗಿರುವ ನಿರಂತರ ವೈಪರೀತ್ಯಗಳ ಪ್ರಭಾವದಿಂದ ಕರ್ನಾಟಕದ ಒಳನಾಡು ಜಿಲ್ಲೆಗಳು, ಕರಾವಳಿ ಜಿಲ್ಲೆಗಳು ಹಾಗೂ ಆಂಧ್ರ ಪ್ರದೇಶ, ತಮಿಳುನಾಡು, ಕೇರಳ ಭಾಗದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ. ಕರ್ನಾಟಕದ ಧಾರವಾಡ, ಹಾವೇರಿ ಸೇರಿ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular