ಬೆಂಗಳೂರು: ಶುಕ್ರವಾರ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಮುಂದಿನ ಐದಾರು ದಿನ ರಾಜ್ಯದ ಹಲವು ಕಡೆ ಧಾರಾಕಾರ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 48 ಗಂಟೆ ಕಾಲ ಹಾಸನ, ಮಂಡ್ಯ ಮೈಸೂರಿನಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೇ 4ರಂದು ರಾಮನಗರ, ತುಮಕೂರಿನಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದೆ. ಚಿಕ್ಕಮಗಳೂರಿನಲ್ಲಿ ಮೇ 3 ರಿಂದ 9ರ ವರೆಗೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕೆಲವು ಸಂದರ್ಭದಲ್ಲಿ 40 ಕಿ.ಮೀ. ವೇಗದ ಗಾಳಿ ಬೀಸಲಿದೆ. ಮೇ 3ರಿಂದ 9ರವರೆಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರದಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹೇಳಲಾಗಿದೆ.