HomeLatest Newsರಾಜ್ಯದಲ್ಲಿ ಮತ್ತೆ ಭಾರಿ ಮಳೆ ಮುನ್ಸೂಚನೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಮತ್ತೆ ಭಾರಿ ಮಳೆ ಮುನ್ಸೂಚನೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಶುಕ್ರವಾರ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಮುಂದಿನ ಐದಾರು ದಿನ ರಾಜ್ಯದ ಹಲವು ಕಡೆ ಧಾರಾಕಾರ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 48 ಗಂಟೆ ಕಾಲ ಹಾಸನ, ಮಂಡ್ಯ ಮೈಸೂರಿನಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೇ 4ರಂದು ರಾಮನಗರ, ತುಮಕೂರಿನಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದೆ. ಚಿಕ್ಕಮಗಳೂರಿನಲ್ಲಿ ಮೇ 3 ರಿಂದ 9ರ ವರೆಗೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಕೆಲವು ಸಂದರ್ಭದಲ್ಲಿ 40 ಕಿ.ಮೀ. ವೇಗದ ಗಾಳಿ ಬೀಸಲಿದೆ. ಮೇ 3ರಿಂದ 9ರವರೆಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರದಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular