ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಕಾರಣ ವಿದ್ಯಾರ್ಥಿಗಳ ಸುರಕ್ಷತೆ ಹಿತದೃಷ್ಟಿಯಿಂದ ಚಿತ್ರದುರ್ಗ ಜಿಲ್ಲೆಯ ಸರ್ಕಾರಿ/ಅನುದಾನಿತ/ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ.
ಚಿತ್ರದುರ್ಗ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆ ಹಿತದೃಷ್ಟಿಯಿಂದ ಚಿತ್ರದುರ್ಗ ಜಿಲ್ಲೆಯ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ದಿನಾಂಕ:18/08/2025ರಂದು ರಜೆ ನೀಡಲು ಉಲ್ಲೇಖದನ್ವಯ ಮಾನ್ಯ ಅಪರ ಜಿಲ್ಲಾಧಿಕಾರಿಗಳು ಸೂಚನೆ ನೀಡಿರುತ್ತಾರೆ.
ಮಾನ್ಯ ಅಪರ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಹಾಗೂ ವಿದ್ಯಾರ್ಥಿಗಳ ಸುರಕ್ಷತೆ ಹಿತದೃಷ್ಟಿಯಿಂದ ಚಿತ್ರದುರ್ಗ ಜಿಲ್ಲೆಯ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ದಿನಾಂಕ:18/08/2025ರಂದು ರಜೆ ಘೋಷಿಸಿ ಆದೇಶಿಸಿದೆ.
ಸದರಿ ರಜಾ ಅವಧಿಯ ತರಗತಿಗಳನ್ನು ದಿನಾಂಕ:23/08/2025 ಮತ್ತು 30/08/2025ರ ಶನಿವಾರಗಳಂದು ಪೂರ್ಣದಿನದ ಅವಧಿಯ ತರಗತಿಗಳನ್ನು ನಡೆಸುವ ಮೂಲಕ ಸರಿದೂಗಿಸಲು ಸೂಚಿಸಿದೆ.
