HomeLatest NewsBREAKING : ಭಾರಿ ಮಳೆ ಹಿನ್ನೆಲೆ : ಚಿತ್ರದುರ್ಗ ಜಿಲ್ಲೆಯ ಶಾಲೆಗಳಿಗೆ ಇಂದು ರಜೆ ಘೋಷಣೆ...

BREAKING : ಭಾರಿ ಮಳೆ ಹಿನ್ನೆಲೆ : ಚಿತ್ರದುರ್ಗ ಜಿಲ್ಲೆಯ ಶಾಲೆಗಳಿಗೆ ಇಂದು ರಜೆ ಘೋಷಣೆ |School Holiday

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಕಾರಣ ವಿದ್ಯಾರ್ಥಿಗಳ ಸುರಕ್ಷತೆ ಹಿತದೃಷ್ಟಿಯಿಂದ ಚಿತ್ರದುರ್ಗ ಜಿಲ್ಲೆಯ ಸರ್ಕಾರಿ/ಅನುದಾನಿತ/ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ.

ಚಿತ್ರದುರ್ಗ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆ ಹಿತದೃಷ್ಟಿಯಿಂದ ಚಿತ್ರದುರ್ಗ ಜಿಲ್ಲೆಯ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ದಿನಾಂಕ:18/08/2025ರಂದು ರಜೆ ನೀಡಲು ಉಲ್ಲೇಖದನ್ವಯ ಮಾನ್ಯ ಅಪರ ಜಿಲ್ಲಾಧಿಕಾರಿಗಳು ಸೂಚನೆ ನೀಡಿರುತ್ತಾರೆ.

ಮಾನ್ಯ ಅಪರ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಹಾಗೂ ವಿದ್ಯಾರ್ಥಿಗಳ ಸುರಕ್ಷತೆ ಹಿತದೃಷ್ಟಿಯಿಂದ ಚಿತ್ರದುರ್ಗ ಜಿಲ್ಲೆಯ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ದಿನಾಂಕ:18/08/2025ರಂದು ರಜೆ ಘೋಷಿಸಿ ಆದೇಶಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದರಿ ರಜಾ ಅವಧಿಯ ತರಗತಿಗಳನ್ನು ದಿನಾಂಕ:23/08/2025 ಮತ್ತು 30/08/2025ರ ಶನಿವಾರಗಳಂದು ಪೂರ್ಣದಿನದ ಅವಧಿಯ ತರಗತಿಗಳನ್ನು ನಡೆಸುವ ಮೂಲಕ ಸರಿದೂಗಿಸಲು ಸೂಚಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular