ಕರ್ನಾಟಕದಾದ್ಯಂತ ಮುಂದಿನ ಮೂರು ದಿನಗಳ ಕಾಲ ವರುಣನ ಅಬ್ಬರ ಮುಂದುವರಿಯಲಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಸುಮಾರು 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಮತ್ತು ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲೂ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ಕೊಡಗು, ಚಿಕ್ಕಮಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಒಟ್ಟು 13 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ. ಗಂಟೆಗೆ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಈ ಭಾಗಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
2. ಜಿಲ್ಲಾವಾರು ಮಳೆ ಮುನ್ಸೂಚನೆ:
- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಒಣ ಹವೆ ಮುಂದುವರಿಯಲಿದೆ.ಮೇ 7 ಮತ್ತು 8 ರಂದು ಬೆಳಗಾವಿ, ಧಾರವಾಡ ಹಾಗೂ ಹಾವೇರಿಯಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಬೀದರ್, ಕಲಬುರ್ಗಿ ಮತ್ತು ರಾಯಚೂರಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
3. ಮೈಸೂರಿನಲ್ಲಿ ಮಳೆ ಹಾನಿ: ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಮಳೆ ಹಾಗೂ ಗಾಳಿಯ ಆರ್ಭಟಕ್ಕೆ ಬೃಹತ್ ಮರವೊಂದು ರಸ್ತೆಗೆ ಉರುಳಿದೆ. ಇದರಿಂದ ಮೈಸೂರು-ಹುಣಸೂರು ಮುಖ್ಯ ರಸ್ತೆಯ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಸಾರ್ವಜನಿಕರು ತೀವ್ರ ಪರದಾಡುವಂತಾಗಿದೆ.
ಮುಂದಿನ ಎರಡು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಇಲಾಖೆ ತಿಳಿಸಿದೆ.

