HomeIndiaRain Alert : ಕರ್ನಾಟಕ, ಕೇರಳ ಸೇರಿದಂತೆ 20 ಕ್ಕೂ ಹೆಚ್ಚು ರಾಜ್ಯಗಳಲ್ಲಿ ಭಾರಿ ಮಳೆ...

Rain Alert : ಕರ್ನಾಟಕ, ಕೇರಳ ಸೇರಿದಂತೆ 20 ಕ್ಕೂ ಹೆಚ್ಚು ರಾಜ್ಯಗಳಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ಮುಂದಿನ ಕೆಲವು ದಿನ ಕರ್ನಾಟಕ, ಕೇರಳ ಸೇರಿದಂತೆ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಜೂನ್ 29ರವರೆಗೂ ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರ, ರಾಜಸ್ಥಾನ, ಒಡಿಶಾ, ಕೇರಳ, ಮೇಘಾಲಯ, , ಪಂಜಾಬ್, ಜಮ್ಮು ಮತ್ತು ಕಾಶ್ಮೀರ, ಪಶ್ಚಿಮ ಬಂಗಾಳ, ಜಾರ್ಖಂಡ್ ಹಿಮಾಚಲಪ್ರದೇಶ, ಉತ್ತರಾಖಂಡ, ದೆಹಲಿ ಹಾಗೂ ಅರುಣಾಚಲಪ್ರದೇಶ, ಕರ್ನಾಟಕ, ಅಸ್ಸಾಂನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಜೂನ್ 26 ರಂದು ಒಡಿಶಾದಲ್ಲಿ ಭಾರಿ ಮಳೆಯಾಗಲಿದೆ, ಜೂನ್ 28 ಮತ್ತು ಜೂನ್ 29 ರಂದು ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರಿ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕದಲ್ಲಿ ಭಾರಿ ಮಳೆ

ಕರ್ನಾಟಕದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜೂ.26 ರಿಂದ 29ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಈಗಾಗಲೇ ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ 5 ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಮುಂಜಾಗೃತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಜೂನ್ 30ರವರೆಗೆ ಕರಾವಳಿಯಲ್ಲಿ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡು ಜಿಲ್ಲೆ ಬೀದರ್, ಬಾಗಲಕೋಟೆ, ಬೆಳಗಾವಿ, ಕಲಬುರ್ಗಿ, ರಾಯಚೂರು, ವಿಜಯಪುರ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ತಿಳಿಸಿದೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular