ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ (ಆಗಸ್ಟ್ 27) ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಗಸ್ಟ್ 27ರಿಂದ 3-4 ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ದಾವಣಗೆರೆ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯನಗರ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲಿಯೂ ಮಳೆಯಾಗಲಿದೆ.

