ಬೆಂಗಳೂರು: ರಾಜ್ಯದ ಹಲವು ಕಡೆ ಮತ್ತೆ ಮಳೆಯಾಗುತ್ತಿದ್ದು,ಅ.9 ರವರೆಗೂ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್. ಗದಗ, ಹಾವೇರಿ, ಕೊಪ್ಪಳ, ಯಾದಗಿರಿಯಲ್ಲಿ ಭಾರಿ ಮಳೆಯಾಗಲಿದೆ ಕರ್ನಾಟಕದ ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ವರುಣಾರ್ಭಟಕ್ಕೆ ತತ್ತರಿಸಿ ಹೋಗಿದ್ದು, ಕರಾವಳಿ ಜಿಲ್ಲೆಗಳಲ್ಲಿಯೂ ಕೆಲ ದಿನಗಳಿಂದ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.