HomeLive NewsBIG UPDATE : ಹಿಮಾಚಲ ಪ್ರದೇಶದಲ್ಲಿ ಮಳೆ ಅಬ್ಬರ.. 157 ಮಂದಿ ಸಾವು, ಭಾರೀ ಹಾನಿ...

BIG UPDATE : ಹಿಮಾಚಲ ಪ್ರದೇಶದಲ್ಲಿ ಮಳೆ ಅಬ್ಬರ.. 157 ಮಂದಿ ಸಾವು, ಭಾರೀ ಹಾನಿ |WATCH VIDEO

ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ, ಪ್ರವಾಹ ಹಾಗೂ ಭೂಕುಸಿತದಿಂದ ಭಾರೀ ಪ್ರಮಾಣದ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ. ರಾಜ್ಯದಾದ್ಯಂತ ಮಳೆಯ ಆರ್ಭಟದಿಂದ ಪರಿಸ್ಥಿತಿ ಗಂಭೀರವಾಗಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ತೀವ್ರಗೊಳಿಸಲಾಗಿದೆ.

ಭಾರೀ ಪ್ರಮಾಣದ ಪ್ರಾಣಹಾನಿ
ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಅಂಕಿಅಂಶಗಳ ಪ್ರಕಾರ, ಜೂನ್ 30ರಿಂದ ಆಗಸ್ಟ್ 9ರವರೆಗೆ ಸಂಭವಿಸಿದ ಪ್ರವಾಹ ಮತ್ತು ಭೂಕುಸಿತಗಳಿಂದ 68 ಮಂದಿ ಮೃತಪಟ್ಟಿದ್ದಾರೆ. ಮಳೆಯಿಂದ ಉಂಟಾದ ರಸ್ತೆ ಅಪಘಾತಗಳಲ್ಲಿ 89 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದರಿಂದ ಒಟ್ಟು ಮೃತರ ಸಂಖ್ಯೆ 157ಕ್ಕೆ ಏರಿಕೆಯಾಗಿದೆ. ಈ ವಿಪತ್ತಿನಲ್ಲಿ ಸುಮಾರು 257 ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಮೂಲಸೌಕರ್ಯಕ್ಕೆ ಭಾರೀ ಹಾನಿ.. ₹886 ಕೋಟಿ ನಷ್ಟ
ಮಳೆಯ ಪರಿಣಾಮ ಮೂಲಸೌಕರ್ಯ ಮತ್ತು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೇಲೂ ತೀವ್ರ ಪರಿಣಾಮ ಬೀರಿದೆ. ಧಾರಾಕಾರ ಮಳೆಯಿಂದ ಸುಮಾರು 900 ಸರ್ಕಾರಿ ಮತ್ತು ಖಾಸಗಿ ಆಸ್ತಿಗಳು ಹಾನಿಗೊಳಗಾಗಿವೆ. ಇದರಿಂದ ಅಂದಾಜು ₹886 ಕೋಟಿ ಆರ್ಥಿಕ ನಷ್ಟ ಸಂಭವಿಸಿದೆ.ಭೂಕುಸಿತದಿಂದ ಸುಮಾರು 259 ರಸ್ತೆಗಳು ಸಂಪೂರ್ಣ ಹಾನಿಗೊಳಗಾಗಿ ಸಂಚಾರ ಸ್ಥಗಿತಗೊಂಡಿದೆ. ವಿದ್ಯುತ್ ಟ್ರಾನ್ಸ್ಫಾರ್ಮರ್ಗಳು ಹಾನಿಗೊಳಗಾದ ಪರಿಣಾಮ ಹಲವು ಜಿಲ್ಲೆಗಳಲ್ಲಿ ವಿದ್ಯುತ್ ಪೂರೈಕೆಗೆ ತೀವ್ರ ಅಡಚಣೆ ಉಂಟಾಗಿದೆ. ಇದರ ಜೊತೆಗೆ ಕುಡಿಯುವ ನೀರಿನ ಪೂರೈಕೆ ಯೋಜನೆಗಳಿಗೂ ಹಾನಿಯಾಗಿದ್ದು, ಜನರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಹಿಮಾಚಲ ಪ್ರದೇಶ ಸರ್ಕಾರ ಹಾಗೂ ಎನ್ಡಿಆರ್ಎಫ್ (NDRF) ಪಡೆಗಳು ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆಗಳನ್ನು ಚುರುಕುಗೊಳಿಸಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular