BIGG NEWS : ರಾಜ್ಯದ ಹಲವಡೆ ಭಾರೀ ಮಳೆ : ಇಂದು ಸಂಜೆ ಜಿಲ್ಲಾಧಿಕಾರಿಗಳ ಜೊತೆಗೆ ಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದ ಹಾನಿ ಹಿನ್ನೆಲೆಯಲ್ಲಿ ಜುಲೈ 26 ರ ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.

ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಲಿದ್ದಾರೆ. ಮಳೆ ಹಾನಿ, ಬೆಳೆ ಪರಿಸ್ಥಿತಿಯ ಬಗ್ಗೆ ಸಿಎಂ ಮಾಹಿತಿ ಪಡೆಯಲಿದ್ದಾರೆ. ರಾಜ್ಯದ ಕರಾವಳಿ, ಮಲೆನಾಡು ಸೇರಿ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯ ಕಾರಣ ರಸ್ತೆ, ಸೇತುವೆ, ಬೆಳೆ, ಜೀವಹಾನಿ ಆಗಿದ್ದು, ಸಿಎಂ ಜಿಲ್ಲಾಡಳಿತಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದು ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಸೂಚನೆ ನೀಡಲಿದ್ದಾರೆ.

ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಹಠಾತ್‌ ಪ್ರವಾಹ ಸಂಭವಿಸಬಹುದೆಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಎಂದಿದ್ದಾರೆ.

ಸಂಭವನೀಯ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ಸರ್ವಸನ್ನದ್ಧವಾಗಿದೆ. ಅತಿವೃಷ್ಟಿ ಮತ್ತು ಪ್ರವಾಹದ ಮುನ್ಸೂಚನೆ ಇರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಈಗಾಗಲೇ ಶಾಲೆ-ಕಾಲೇಜುಗಳಿಗೆ ರಜೆ ಸಾರಿದ್ದಾರೆ. ತಂದೆ-ತಾಯಿಗಳು ಮತ್ತು ವಿದ್ಯಾರ್ಥಿಗಳು ಕಟ್ಟುನಿಟ್ಟಾಗಿ ಜಿಲ್ಲಾಧಿಕಾರಿಯವರ ಆದೇಶಗಳನ್ನು ಪಾಲನೆ ಮಾಡಬೇಕೆಂದು‌ ಮನವಿ ಮಾಡಿದ್ದಾರೆ.

https://twitter.com/CMofKarnataka/status/1683904424987754496

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read