HomeKarnatakaಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಈ ತಿಂಗಳೂ ಭಾರಿ ಮಳೆ ಮುನ್ಸೂಚನೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಈ ತಿಂಗಳೂ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ದೇಶಾದ್ಯಂತ ಸೆಪ್ಟೆಂಬರ್ ನಲ್ಲಿ ವಾಡಿಕೆಗಿಂತಲೂ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಹಿನ್ನೆಲೆಯಲ್ಲಿ ಈ ತಿಂಗಳ ಆರಂಭದಲ್ಲಿ ರಾಜ್ಯದಲ್ಲಿ ಎರಡು ದಿನ ಹೆಚ್ಚಿನ ಮಳೆಯಾಗಲಿದ್ದು, ಹಲವು ಜಿಲ್ಲೆಗಳಿಗೆ ಆರೆಂಜ್ ಮತ್ತು ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸೆಪ್ಟಂಬರ್ 1, 2, 3ರಂದು ಕರಾವಳಿ, ಮಲೆನಾಡು, ಮಧ್ಯ ಕರ್ನಾಟಕದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಕರ್ನಾಟಕ ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೆಪ್ಟಂಬರ್ ತಿಂಗಳಿಡೀ ಪ್ರತಿ ವಾರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದೆ. ಇದರ ಪರಿಣಾಮ ದೇಶದ ಬಹುತೇಕ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ದಕ್ಷಿಣ ಭಾರತದ ಬಹುತೇಕ ರಾಜ್ಯಗಳು, ಉತ್ತರ ಪ್ರದೇಶ, ಬಿಹಾರ, ಈಶಾನ್ಯ ರಾಜ್ಯಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular