ಬೆಂಗಳೂರು: ರಾಜ್ಯದ ವಿವಿಧೆಡೆ ಮುಂದಿನ ಎಂಟು ದಿನ ಗುಡುಗು, ಮಿಂಚು, ಬಿರುಗಾಳಿ ಸಹಿತ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 7 ರಿಂದ 15 ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವ ಇದೆ. ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಕೋಲಾರ, ಹಾಸನ, ಮಂಡ್ಯ, ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ. ಉತ್ತರ ಒಳನಾಡು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

