HomeKarnatakaರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಗಾಳಿ ಗುಡುಗು ಸಹಿತ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಗಾಳಿ ಗುಡುಗು ಸಹಿತ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಗುಡುಗು ಬಿರುಗಾಳಿ ಸಹಿತ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 16, 17, 18 ರಂದು ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ. ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಕೋಲಾರ, ರಾಮನಗರ, ಮಂಡ್ಯ ಸೇರಿ ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್, ಕೊಪ್ಪಳ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಅಲ್ಲಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಂಭವ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಯಾದಗಿರಿ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಬೆಂಗಳೂರು ಗ್ರಾಮಾಂತರ ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular