ಬೆಂಗಳೂರು: ರಾಜ್ಯದಲ್ಲಿ ಮಳೆ ಆರ್ಭಟ ತಿಂಗಳಾಂತ್ಯದವರೆಗೂ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಲೆನಾಡು, ಕರಾವಳಿ ಪ್ರದೇಶದಲ್ಲಿ ಭಾರಿ ಮಳೆ ಆಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಚಿಕ್ಕಮಗಳೂರು, ಕೊಡಗು, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಜುಲೈ 28 ರಿಂದ 30ರವರೆಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನ ಕೆಲವು ಕಡೆ ಹಗುರದಿಂದ ಕೂಡಿದ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
You Might Also Like
TAGGED:ಮಳೆ