HomeLatest Newsರಾಜ್ಯದಲ್ಲಿ ಗುಡುಗು, ಸಿಡಿಲು, ಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆ ಮುನ್ಸೂಚನೆ: ಮೇ 21ರವರೆಗೆ 'ಯೆಲ್ಲೋ...

ರಾಜ್ಯದಲ್ಲಿ ಗುಡುಗು, ಸಿಡಿಲು, ಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆ ಮುನ್ಸೂಚನೆ: ಮೇ 21ರವರೆಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮೇ 21 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈಗಾಗಲೇ ಅನೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇನ್ನೂ ಒಂದು ವಾರ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ಕೊಡಗು, ಹಾಸನ, ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಳೆಯೊಂದಿಗೆ ಗಾಳಿ, ಗುಡುಗು, ಸಿಡಿಲಿನ ಆರ್ಭಟವೂ ಹೆಚ್ಚಾಗಲಿದ್ದು, ಅಲ್ಲಲ್ಲಿ ಆಲಿಕಲ್ಲು ಮಳೆ ಆಗುವ ಸಂಭವ ಇದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular