ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು, ಸಿಡಿಲು ಮತ್ತು ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಮತ್ತು ಒಳನಾಡಿನ ವಿವಿಧ ಭಾಗಗಳಲ್ಲಿ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಎಚ್ಚರಿಕೆ ನೀಡಲಾಗಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.ಭಾರತೀಯ ಹವಾಮಾನ ಇಲಾಖೆ (IMD) ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ಬಿರುಗಾಳಿ ಸಹಿತ ಗುಡುಗು ಮಳೆಯಾಗುವ ಮುನ್ಸೂಚನೆ ನೀಡಿದೆ.
ಮಳೆಯ ಮುನ್ಸೂಚನೆ: ಬಳ್ಳಾರಿ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬಿರುಗಾಳಿ ಎಚ್ಚರಿಕೆ: ಮಳೆಯ ಜೊತೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಮತ್ತು ಸಿಡಿಲಿನ ಸಾಧ್ಯತೆ ಇರುವುದರಿಂದ, ಮಳೆ ಬರುವ ಸಮಯದಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವುದು ಮತ್ತು ಅನಗತ್ಯ ಪ್ರಯಾಣವನ್ನು ತಪ್ಪಿಸುವುದು ಸೂಕ್ತ.

