HomeKarnatakaರಾಜ್ಯದ 14 ಜಿಲ್ಲೆಗಳಲ್ಲಿ 5 ದಿನ ಗುಡಗು ಸಹಿತ ಭಾರಿ ಮಳೆ ಸಾಧ್ಯತೆ: 'ಯೆಲ್ಲೋ ಅಲರ್ಟ್'

ರಾಜ್ಯದ 14 ಜಿಲ್ಲೆಗಳಲ್ಲಿ 5 ದಿನ ಗುಡಗು ಸಹಿತ ಭಾರಿ ಮಳೆ ಸಾಧ್ಯತೆ: ‘ಯೆಲ್ಲೋ ಅಲರ್ಟ್’

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಪೂರ್ವ ಮುಂಗಾರು ಚುರುಕುಗೊಳ್ಳುವ ಲಕ್ಷಣ ಕಂಡುಬಂದಿದ್ದು, ಮುಂದಿನ ಐದು ದಿನಗಳಲ್ಲಿ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

ರಾಜ್ಯದಲ್ಲಿ ಪೂರ್ವ ಮುಂಗಾರು ಉತ್ತಮವಾಗಿದ್ದು, ಈಗಾಗಲೇ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. ಮುಂದಿನ ಐದು ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾವೇರಿ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular