HomeTourismಚಿಕ್ಕಮಗಳೂರು ಪ್ರವಾಸ: ಜನರಿಗೆ ಮಹತ್ವದ ಮಾಹಿತಿ

ಚಿಕ್ಕಮಗಳೂರು ಪ್ರವಾಸ: ಜನರಿಗೆ ಮಹತ್ವದ ಮಾಹಿತಿ

ಮಾರ್ಚ್ ತಿಂಗಳ ಮೊದಲ ವಾರ ಚಿಕ್ಕಮಗಳೂರು ಪ್ರವಾಸ ಕೈಗೊಳ್ಳುವ ಜನರಿಗೆ ಮಹತ್ವದ ಮಾಹಿತಿ ಒಂದಿದೆ. ವಾರ್ಷಿಕ ಉರುಸ್ ಕಾರ್ಯಕ್ರಮದ ಹಿನ್ನಲೆಯಲ್ಲಿ ಶ್ರೀ ಗುರುದತ್ತಾತ್ರೇಯ ಬಾಬಾಬುಡನ್‌ ಸ್ವಾಮಿ ದರ್ಗಾದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಚಿಕ್ಕಮಗಳೂರು ಜಿಲ್ಲಾ ಪೊಲೀಸರು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಆದೇಶವನ್ನು ಉಲ್ಲೇಖಿಸಿ ಈ ಕುರಿತು ಫೇಸ್‌ಬುಕ್‌ ಪೋಸ್ಟ್ ಹಾಕಿದ್ದಾರೆ. ದಿನಾಂಕ 4/3/2026 ರಿಂದ 6/3/2026ರ ತನಕ ನಡೆಯುವ ವಾರ್ಷಿಕ ಉರುಸ್‌ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಶ್ರೀ ಗುರುದತ್ತಾತ್ರೇಯ ಬಾಬಾಬುಡನ್‌ ಸ್ವಾಮಿ ದರ್ಗಾ ಸಂಸ್ಥೆ ಐಡಿ ಪೀಠಕ್ಕೆ ತೆರಳುವ ಮಾರ್ಗದಲ್ಲಿ ಲಾಂಗ್‌ ಚಾಸಿಸ್‌ ಮತ್ತು ಮಲ್ಟಿ ಆಕ್ಸೆಲ್‌ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ.

ಜಿಲ್ಲಾಧಿಕಾರಿಗಳ ಆದೇಶ; ನಾಗರಾಜ.ಎನ್.ಎಂ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ಚಿಕ್ಕಮಗಳೂರು ಜಿಲ್ಲೆ, ಚಿಕ್ಕಮಗಳೂರು ಆದ ನಾನು ಕೇಂದ್ರ ಮೋಟಾರು ಕಾಯ್ದೆ 1988ರ ಕಲಂ 115 ಮತ್ತು ಕರ್ನಾಟಕ ಮೋಟಾರು ನಿಯಮಾವಳಿಗಳು 1989ರ ನಿಯಮ 221 (ಎ) (5) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದಿನಾಂಕ 04-03-2026 ರಿಂದ ದಿನಾಂಕ 06-03-2026 ರವರೆಗೆ ಮೂರು ದಿವಸಗಳ ಕಾಲ ಚಿಕ್ಕಮಗಳೂರು ತಾಲ್ಲೂಕು ಶ್ರೀ ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಸಂಸ್ಥೆ, ಐ.ಡಿ. ಪೀಠಕ್ಕೆ ತೆರಳುವ ಮಾರ್ಗದಲ್ಲಿ ಲಾಂಗ್ ಚಾಸಿಸ್ ಹಾಗೂ ಮಲ್ಟಿ ಎಕ್ಸೆಲ್‌ ವಾಹನಗಳ ಸಂಚಾರವನ್ನು (ಕೆ.ಎಸ್.ಆರ್.ಪಿ ಮತ್ತು ಕೆ.ಎಸ್.ಆರ್.ಟಿ.ಸಿ. ವಾಹನಗಳನ್ನು ಹೊರತುಪಡಿಸಿ) ನಿಷೇಧಿಸಿ ಆದೇಶಿಸಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ವಾರ ಜಿಲ್ಲಾಧಿಕಾರಿಗಳು, ಪೊಲೀಸ್ ಅಧೀಕ್ಷಕರು, ಸಿಇಓ ಜಿಲ್ಲಾ ಪಂಚಾಯಿತಿ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಅಲ್ಲಂಪುರದಿಂದ ಶ್ರೀ ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಐಡಿ ಪೀಠ ಸಂಸ್ಥೆವರೆಗಿನ ರಸ್ತೆ, ಪಾರ್ಕಿಂಗ್ ಮತ್ತು ಚೆಕ್ ಪೋಸ್ಟ್ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular