BREAKING: ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ: ಕಟ್ಟೆಚ್ಚರ ಸೂಚನೆ: ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ

ಮಂಡ್ಯ: ಭಾರಿ ಮಳೆ ಹಿನ್ನೆಲೆಯಲ್ಲಿ ಕಾವೇರಿ ನದಿ ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿದ್ದು, ನದಿ ಪಾತ್ರದ ಪ್ರದೇಶಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಕೆ.ಆರ್.ಎಸ್. ಡ್ಯಾಂ ಕೆಳಗಿನ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಆತಂಕ ಹಿನ್ನೆಲೆಯಲ್ಲಿ ಜನರು ನದಿ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ.

ಮುಂಜಾಗೃತಾ ಕ್ರಮವಾಗಿ ಶ್ರೀರಂಗಪಟ್ಟಣದ ಪ್ರವಾಸಿ ತಾಣಗಳಾದ ಬಲಮುರಿ, ಎಡಮುರಿ, ಸ್ನಾನಘಟ್ಟ, ಸಂಗಮ, ನಿಮಿಷಾಂಬ ದೇವಸ್ಥಾನ, ಘೋಸಾಯ್ ಘಾಟ್ ಪ್ರದೇಶಗಳಿಗೆ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ.

ಇನ್ನು ಕಾವೆರಿ ನದಿ ಪಾತ್ರದಲ್ಲಿ ನಡೆಯುವ ಧಾರ್ಮಿಕ ಪಿಂಡ ಪ್ರಧಾನ ಪೂಜೆಗೂ ನಿರ್ಬಂಧ ವಿಧಿಸಲಾಗಿದೆ. ನದಿ ತೀರದ ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಕಾಅನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read