ಬೆಂಗಳೂರು: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮ್ರಿತಪಟ್ಟಿರುವ ಘಟನೆ ಬೆಂಂಗಳೂರಿನ ಹೆಬ್ಬಾಳ-ಕೆ.ಆರ್.ಪುರಂ ಮುಖ್ಯರಸ್ತೆಯಲ್ಲಿ ನಡೆದಿದೆ.
ಅತಿ ವೇಗವಾಗಿ ಬಂದ ಕಾರು ಹಿಂದಿನಿಂದ ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಾರು ಪಲ್ಟಿಯಾಗಿ ಬಿದ್ದಿದ್ದು, ಕಾರಿನ ಚಾಲಕನ ಸ್ಥಿತಿ ಗಂಭೀರವಾಗಿದೆ.
ಘಟನಾ ಸ್ಥಳಕ್ಕೆ ಹೆಬ್ಬಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳು ಕಾರು ಚಾಲಕನ್ನು ಆಸ್ಪತ್ರೆಗೆ ದಾಅಖಲಿಸಲಾಗಿದೆ. ಕಾರುಚಾಲಕನ ಅತಿ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

