HomeLatest Newsಟ್ರಾಫಿಕ್ ಕಿರಿಕಿರಿಗೆ ಕೊಂಚ ಬ್ರೇಕ್: ಸುಗಮ ಸಂಚಾರಕ್ಕಾಗಿ ಹೆಬ್ಬಾಳ ಮೇಲ್ಸೇತುವೆ ಎರಡನೇ ಲೂಪ್ ಉದ್ಘಾಟನೆ

ಟ್ರಾಫಿಕ್ ಕಿರಿಕಿರಿಗೆ ಕೊಂಚ ಬ್ರೇಕ್: ಸುಗಮ ಸಂಚಾರಕ್ಕಾಗಿ ಹೆಬ್ಬಾಳ ಮೇಲ್ಸೇತುವೆ ಎರಡನೇ ಲೂಪ್ ಉದ್ಘಾಟನೆ

ಬೆಂಗಳೂರು: ಸಂಚಾರ ದಟ್ಟಣೆಯಿಂದ ಸಂಕಷ್ಟಕ್ಕೀಡಾಗಿದ್ದ ವಾಹನ ಸವಾರರಿಗೆ ಸಮಾಧಾನಕರ ಸುದ್ದಿ. ಸುಗಮ ಸಂಚಾರಕ್ಕಾಗಿ ಹೆಬ್ಬಾಳ ಮೇಲ್ಸೇತುವೆ ಎರಡನೇ ಲೂಪ್ ಉದ್ಘಾಟನೆಯಾಗಿದೆ.

ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಇಂದು ಹೆಬ್ಬಾಳ ಮೇಲ್ಸೇತುವೆ ಎರಡನೇ ಲೂಪ್ ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಡಿಸಿಎಂ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬೆಂಗಳೂರಿನ ಉತ್ತರ ಭಾಗದ ಜನರ ಸುಗಮ ವಾಹನ ಸಂಚಾರಕ್ಕಾಗಿ ಹೆಬ್ಬಾಳ ಮೇಲ್ಸೇತುವೆಯ ಎರಡನೇ ಲೂಪ್ ಅನ್ನು ಉದ್ಘಾಟನೆ ಮಾಡಿದ್ದೇವೆ. ಈ ಭಾಗದ ಜನರು ಹೆಬ್ಬಾಳ ಮೇಲ್ಸೇತುವೆ ಬಳಿ ಸಂಚಾರ ದಟ್ಟಣೆ ದೂರು ಹೇಳುತ್ತಿದರು. ಹೀಗಾಗಿ ನಾವು ತ್ವರಿತ ಗತಿಯಲ್ಲಿ ಪರಿಹಾರ ಕಂಡು ಹಿಡಿದಿದ್ದೇವೆ. ಆಮೂಲಕ ಸಂಚಾರ ದಟ್ಟಣೆ ನಿವಾರಿಸಿದ್ದೇವೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಈ ವರ್ಷ ಐವತ್ತನೇ ವಸಂತಕ್ಕೆ ಕಾಲಿಟ್ಟಿದ್ದು, ನನ್ನ ರಾಜಕೀಯ ಜೀವನದಲ್ಲಿ ಹಿಂದೆಂದೂ ಮಾಡಲಾಗದ ಐತಿಹಾಸಿಕ ಯೋಜನೆಗಳನ್ನು ಹಮ್ಮಿಕೊಂಡಿದೆ. 120 ಕಿ.ಮೀ ಉದ್ದದ ಬೆಂಗಳೂರು ಬಿಸಿನೆಸ್ ಕಾರಿಡಾರ್ (ಬಿಬಿಸಿ) ಅನ್ನು ಕಾರ್ಯರೂಪಕ್ಕೆ ತರಲು ರೈತರ ಬಳಿ ಭೂಸ್ವಾಧೀನ ಮಾಡಿಕೊಳ್ಳಲಾಗುತ್ತಿದೆ. ಇದಕ್ಕೆ 35% ವಾಣಿಜ್ಯ ಭೂಮಿಯನ್ನು ರೈತರಿಗೆ ಪರಿಹಾರವಾಗಿ ನೀಡಲಾಗುತ್ತಿದೆ. ಜತೆಗೆ ಸಣ್ಣ ಟೌನ್ ಶಿಪ್ ನಿರ್ಮಾಣಕ್ಕೆ ರೈತರಿಗೆ ಉತ್ತಮ ಪರಿಹಾರ ನೀಡುತ್ತಿದ್ದೇವೆ ಎಂದರು.

ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಒಂದೂವರೇ ಕಿ.ಮೀ ಟನಲ್ ರಸ್ತೆ ಬರಲಿದೆ. ಮೇಕ್ರಿ ವೃತ್ತದ ಬಳಿ ಮೇಲ್ಸೇತುವೆ ಸಾಗಲಿದೆ. ಇದನ್ನು ಮೂರು ಭಾಗವಾಗಿ ಕಟ್ಟಲಾಗುವುದು. ಇನ್ನು ತುಮಕೂರು ರಸ್ತೆಯಿಂದ ಕೆ.ಆರ್ ಪುರದ ವರೆಗೆ ಮೇಲ್ಸೇತುವೆ ಮೂಲಕ ಹೊರ ವರ್ತುಲ ರಸ್ತೆ (ಒಆರ್ ಆರ್) ಮಾಡಲು ಮುಂದಾಗಿದ್ದೇವೆ ಎಂದು ವಿವರಿಸಿದರು.

ನೈಸ್ ಸಂಸ್ಥೆಯ ಕೆಲವು ಕೆಐಎಡಿಬಿ ಜಾಗವನ್ನು ತೆಗೆದುಕೊಳ್ಳಲು ನಿರ್ಧರಿಸಿದ್ದೆವು. ಇದಕ್ಕೆ ಅವರು ತಕರಾರು ಎತ್ತಿದ್ದಾರೆ. ನೈಸ್ ನವರು ತಾವು ಸರ್ಕಾರಕ್ಕಿಂತ ದೊಡ್ಡವರು ಎಂದು ಭಾವಿಸಿದ್ದಾರೆ. ಹೀಗಾಗಿ ಬೇರೆ ದಾರಿ ಹುಡುಕುತ್ತೇವೆ. ಅವರಿಗೆ ಹೇಗೆ ಪಾಠ ಕಲಿಸಬೇಕು ಎಂಬುದು ಗೊತ್ತಿದೆ. ಹೀಗಾಗಿ ಸ್ಕೈಡೆಕ್ ಗಾಗಿ ನಾವು ಬೇರೆ ಕಡೆ ಬಿಡಿಎ ಜಾಗ ಗುರುತಿಸಿದ್ದೇವೆ. ವಿಮಾನ ಹಾರಾಟದ ಟವರ್ ಸಮಸ್ಯೆ ಇರುವ ಕಾರಣ, ಇದನ್ನು ಸೂಕ್ತ ಜಾಗದಲ್ಲಿ ನಿರ್ಮಿಸುತ್ತೇವೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular