ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಸ್ಥಳ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ ಸಂಭವಿಸಿದೆ.. ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.
ಏಮ್ಸ್ ರಿಷಿಕೇಶದ ಹೆಲಿಕಾಪ್ಟರ್‌ನ ಹಿಂಭಾಗಕ್ಕೆ ಹಾನಿಯಾಗಿ ಕೇದಾರನಾಥದಲ್ಲಿ ಅಪಘಾತಕ್ಕೀಡಾಯಿತು. ಹೆಲಿಕಾಪ್ಟರ್‌ನಲ್ಲಿದ್ದ ಮೂವರು ಪ್ರಯಾಣಿಕರು (ಒಬ್ಬ ವೈದ್ಯರು, ಒಬ್ಬ ಕ್ಯಾಪ್ಟನ್ ಮತ್ತು ವೈದ್ಯಕೀಯ ಸಿಬ್ಬಂದಿ) ಸುರಕ್ಷಿತವಾಗಿದ್ದಾರೆ ಎಂದು ಗರ್ವಾಲ್ ಆಯುಕ್ತ ವಿನಯ್ ಶಂಕರ್ ಪಾಂಡೆ ತಿಳಿಸಿದ್ದಾರೆ.

