ಲಾಸ್ ಎಂಜಲೀಸ್ ನಲ್ಲಿ ಹೆಲಿಕಾಪ್ಟರ್ ಪತನಗೊಂಡಿರುವ ಘಟನೆ ನಡೆದಿದೆ. ಅವಘಡದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಲಾಸ್ ಏಂಜಲೀಸ್ ನಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಆಗಸದಲ್ಲಿ ಇದ್ದಕ್ಕಿದ್ದಂತೆ ಗಿರಕಿ ಹೊಡೆಯಲು ಆರಂಭಿಸಿದೆ. ಏಕಾಏಕಿ ಗಿರಕಿಹೊಡೆಯುತ್ತಾ ನಿಯಂತ್ರಣ ಕಳೆದುಕೊಂಡ ಹೆಲಿಕಾಪ್ಟರ್ ಬಳಿಕ ನೆಲಕ್ಕೆ ಅಪ್ಪಳಿಸಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಯಾವುದೇ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ.