ಕಾಶ್ಮೀರದ ಪಹಲ್ಗಾಮದಲ್ಲಿ ಉಗ್ರರ ದಾಳಿಯಿಂದ ಕನ್ನಡಿಗರಿಬ್ಬರು ಸಾವಿಗೀಡಾಗಿರುವುದು ವಿಷಾದನೀಯ ಸಂಗತಿ. ಆದ್ದರಿಂದ ಜಮ್ಮು-ಕಾಶ್ಮೀರದ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ರಾಜ್ಯಕ್ಕೆ ಮರಳಿ ತರಲು ರಾಜ್ಯ ಸರ್ಕಾರವು ಪ್ರಯತ್ನಿಸುತ್ತಿದೆ.
ಕರ್ನಾಟಕದಲ್ಲಿ ಪ್ರವಾಸ ನಿರ್ವಹಿಸುತ್ತಿರುವ ಪ್ರವಾಸಿ ಕಾರ್ಯಾಚರಣೆದಾರರು (Tour Operators & Travel Agents) ತಮ್ಮ ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಈ ಕೆಳಕಂಡ ಸಹಾಯವಾಣಿಗೆ ನೀಡಬೇಕೆಂದು ಕೋರಿದೆ.
ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರವಾಸಿಗರ ಸಂಬಂಧಿಕರು ಅಥವಾ ಪರಿಚಯಸ್ಥರು ಪ್ರವಾಸಕ್ಕೆ ತೆರಳಿರುವವರ ವಿವರಗಳನ್ನು 080-43344334, 080-43344335, 080-43344336, 080-43344342 ಈ ಸಹಾಯವಾಣಿಗೆ ಮಾಹಿತಿ ನೀಡಬೇಕು ಎಂದು ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು ಕೋರಿದ್ದಾರೆ.
You Might Also Like
TAGGED:ಜಮ್ಮು-ಕಾಶ್ಮೀರ ಪ್ರವಾಸ