HomeKarnatakaಮಾ. 31 ರಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮುಖ್ಯ ಮಾಹಿತಿ; ಸಹಾಯವಾಣಿ ಆರಂಭ

ಮಾ. 31 ರಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮುಖ್ಯ ಮಾಹಿತಿ; ಸಹಾಯವಾಣಿ ಆರಂಭ

ಬೆಂಗಳೂರು: ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಸಹಾಯವಾಣಿ ಆರಂಭಿಸಲಾಗಿದೆ.

ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರಲ್ಲಿ ಯಾವುದೇ ಸಂದೇಹ, ಗೊಂದಲ, ಆತಂಕ ಪರಿಹರಿಸಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸಹಾಯವಾಣಿ ಆರಂಭಿಸಲಾಗಿದೆ. ಮಾರ್ಚ್ 20 ರಿಂದ 28 ರವರೆಗೆ ರಜಾ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಮಧ್ಯಾಹ್ನ 3 ಗಂಟೆಯಿಂದ ಸಂಜೆ 7:30ರ ವರೆಗೆ ಹಾಗೂ ಮಾರ್ಚ್ 26ರಂದು ಬೆಳಗ್ಗೆ 11 ಗಂಟೆಯಿಂದ 6 ಗಂಟೆಯವರೆಗೆ ಸಹಾಯವಾಣಿ ಕಾರ್ಯನಿರ್ವಹಿಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್.ಎಸ್.ಎಲ್.ಸಿ. ಪರೀಕ್ಷೆ ಕುರಿತಾದ ಯಾವುದೇ ಗೊಂದಲ ಮಾಹಿತಿಗೆ 080 -23310075/76 ಸಂಪರ್ಕಿಸಬಹುದಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular