HomeKarnatakaಬೆಂಗಳೂರಿಗರೇ ಗಮನಿಸಿ : ಸಂಚಾರ ಸಮಸ್ಯೆ ನಿವಾರಣೆಗೂ ಸಹಾಯವಾಣಿ ಆರಂಭ

ಬೆಂಗಳೂರಿಗರೇ ಗಮನಿಸಿ : ಸಂಚಾರ ಸಮಸ್ಯೆ ನಿವಾರಣೆಗೂ ಸಹಾಯವಾಣಿ ಆರಂಭ

ಬೆಂಗಳೂರು: ಕಳ್ಳತನ, ಸುಲಿಗೆ, ಕಿರುಕುಳ, ರೋಡ್ ರೋಮಿಯೋಗಳು ಸೇರಿದಂತೆ ಅಪರಾಧ ಪ್ರಕರಣಗಳು ನಡೆದರೆ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮಾಹಿತಿ ನೀಡಬಹುದಿತ್ತು. ಇನ್ಮುಂದೆ ಟ್ರಾಫಿಕ್ ಸಮಸ್ಯೆಗಳು ಎದುರಾದಾಗಲೂ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಬಹುದಾಗಿದೆ.

ಟ್ರಾಫಿಕ್ ಜಾಮ್, ಒನ್ ವೇ ಡ್ರೈವಿಂಗ್, ನೋ ಪಾರ್ಕಿಂಗ್ ನಲ್ಲಿ ವಾಹನ ನಿಲುಗಡೆ, ಸಿಗ್ನಲ್ ಗಳಲ್ಲಿ ಗಲಾಟೆ ಹೀಗೆ ಸಂಚಾರಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳು ಆದರೆ 112 ಈ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ನಾಗರಿಕರೊಬ್ಬರು ಜನಸಂಪರ್ಕ ಸಭೆಯಲ್ಲಿ ಸೂಚಿಸಿದಂತೆ ಈಗ ಸಂಚಾರ ವಿಭಾಗದ ಸಮಸ್ಯೆಗಳನ್ನು ಕೂಡ 112 ಮೂಲಕ ದಾಖಲಿಸಲು ಮತ್ತು ಪರಿಹಾರ ಕಂಡುಕೊಳ್ಳಲು ಅನುವು ಮಾಡಿಕೊಡಲಾಗಿದೆ. ಈ ರೀತಿ ಸಂಚಾರ ಸಮಸ್ಯೆಗಳನ್ನು ಹೊಯ್ಸಳ ಬದಲಾಗಿ ದ್ವಿಚಕ್ರವಾಹನ ಮೇಲಿನ ಸಂಚಾರಿ ಪೊಲಿಸ್ ವಿಭಾಗದ ಸಿಬ್ಬಂದಿಗಳು (ಕೋಬ್ರಾ)ನಿರ್ವಹಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರೆ ಮಾಡಿದ ಕೆಲವೇ ಕ್ಷಣಗಳಲ್ಲಿ ಕೋಬ್ರಾ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಸಮಸ್ಯೆ ಬಗೆಹರಿಸಲಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular