HomeIndiaBREAKING ನ. 26ರಂದು ಜಾರ್ಖಂಡ್ ಮುಖ್ಯಮಂತ್ರಿಯಾಗಿ 4 ನೇ ಬಾರಿಗೆ ಹೇಮಂತ್ ಸೋರೆನ್ ಪ್ರಮಾಣ ವಚನ

BREAKING ನ. 26ರಂದು ಜಾರ್ಖಂಡ್ ಮುಖ್ಯಮಂತ್ರಿಯಾಗಿ 4 ನೇ ಬಾರಿಗೆ ಹೇಮಂತ್ ಸೋರೆನ್ ಪ್ರಮಾಣ ವಚನ

ರಾಂಚಿ: ಜೆಎಂಎಂ ನಾಯಕ ಹೇಮಂತ್ ಸೊರೆನ್ ಅವರು ನವೆಂಬರ್ 26 ರಂದು ನಾಲ್ಕನೇ ಬಾರಿಗೆ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ I.N.D.I.A ಬ್ಲಾಕ್‌ನ ಹಲವಾರು ವಿರೋಧ ಪಕ್ಷದ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.

ಕಾಂಗ್ರೆಸ್ ನಾಯಕ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಟಿಎಂಸಿ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಸಿಪಿಐ(ಎಂಎಲ್) ನಾಯಕ ದೀಪಂಕರ್ ಭಟ್ಟಾಚಾರ್ಯ ಸೇರಿದಂತೆ ಪ್ರಮುಖ ನಾಯಕರು ಇತರರು ಪಾಲ್ಗೊಳ್ಳುವ ಸಾಧ್ಯತೆಯಿದೆ.

ಹೊಸ ಸರ್ಕಾರದ ರಚನೆಯನ್ನು ಅಂತಿಮಗೊಳಿಸಲು ಸೋರೆನ್ ಕಾಂಗ್ರೆಸ್ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಕ್ಯಾಬಿನೆಟ್‌ನಲ್ಲಿ ಸಿಎಂ ಹೊರತುಪಡಿಸಿ ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ಕೋಟಾದ ಆರು ಸಚಿವರು, ಕಾಂಗ್ರೆಸ್‌ನ ನಾಲ್ವರು ಮತ್ತು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ಒಬ್ಬರನ್ನು ಸೇರಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

81 ಸದಸ್ಯ ಬಲದ ವಿಧಾನಸಭೆಯಲ್ಲಿ 56 ಸ್ಥಾನಗಳನ್ನು ಗೆಲ್ಲುವ ಮೂಲಕ JMM ನೇತೃತ್ವದ ಒಕ್ಕೂಟವು ಶನಿವಾರ ಜಾರ್ಖಂಡ್‌ನಲ್ಲಿ ಸತತ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದಿದೆ.

ಜೆಎಂಎಂ 34 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದರೆ, ಮೈತ್ರಿಕೂಟದ ಪಾಲುದಾರರಾದ ಕಾಂಗ್ರೆಸ್ ಮತ್ತು ಆರ್‌ಜೆಡಿ ಕ್ರಮವಾಗಿ 16 ಮತ್ತು ನಾಲ್ಕು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಸಿಪಿಐ(ಎಂಎಲ್) ಲಿಬರೇಷನ್ ಎರಡು ಸ್ಥಾನಗಳನ್ನು ಪಡೆದುಕೊಂಡಿದೆ. ಎನ್‌ಡಿಎ ಕೇವಲ 24 ಸ್ಥಾನಗಳಿಗೆ ತೃಪ್ತಿಪಟ್ಟಿದೆ. ಬಿಜೆಪಿ 21 ಗೆದ್ದರೆ, ಅದರ ಮೂರು ಪಾಲುದಾರರಾದ ಅಜ್ಸು ಪಾರ್ಟಿ, ಲೋಕ ಜನಶಕ್ತಿ ಪಕ್ಷ(ರಾಮ್ ವಿಲಾಸ್) ಮತ್ತು ಜೆಡಿಯು ತಲಾ ಒಂದು ಸ್ಥಾನ ಗಳಿಸಿದೆ. 2019ರ ಚುನಾವಣೆಯಲ್ಲಿ ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟ 47 ಸ್ಥಾನಗಳಲ್ಲಿ ಜಯಭೇರಿ ಬಾರಿಸಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular