BREAKING: ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಪ್ರತಿಭಟನೆ: 11 ಜನರ ವಿರುದ್ಧ FIR ದಾಖಲು

ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ರೈತರು ನಡೆಸಿದ್ದ ಪ್ರತಿಭಟನೆ ಹಿನ್ನೆಲೆಯಲ್ಲಿ 11ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ತುಮಕೂರು ಜಿಲ್ಲೆಯ ಗುಬ್ಬಿ ಪೊಲೀಸ್ ಠಾಣೆಯಲ್ಲಿ 11ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ನಿನ್ನೆ ತುಮಕೂರಿನ ಗುಬ್ಬಿ ಬಳಿ ರೈತರು ರಾಷ್ಟ್ರೀಯ ಹೆದ್ದಾರಿ ತಡೆದು, ಟೈರ್ ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಗೆ ಜನಪ್ರತಿನಿಧಿಗಳು, ಮಠಾಧೀಶರು ಬೆಂಬಲ ನೀಡಿದ್ದರು. ಇದೀಗ ಹೋರಾಟದಲ್ಲಿ ಭಾಗಿಯಾಗಿದ್ದ 11ಜನರ ವಿರುದ್ಧ ಎಫ್ ಐ ಆರ‍್ ದಾಖಲಾಗಿದೆ.

ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಹಲ್ಲೆ, ಸಾರ್ವಜನಿಕರಿಗೆ ತೊಂದರೆ, ಸರ್ಕಾರಿ ವಾಹನಗಳಿಗೆ ಹಾನಿ, ರಾಷ್ಟ್ರೀಯ ಹೆದ್ದಾರಿ ಬ್ಲಾಕ್ ಮಾಡಿ ತೊಂದರೆ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಪ್ರತಿಭಟನೆ ವೇಳೆ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಲಾಗಿದ್ದು, ಈ ವೇಳೆ ಸಿಪಿಐ, ಪಿಎಸ್ ಐ, ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ. ಹಿಟಾಚಿಯಿಂದ ಪೈಪ್ ಮುಚ್ಚುವ ವೇಳೆ ಎಸ್ ಪಿ ಕೈಗೆ ಗಾಯವಾಗಿದೆ. ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪ್ರತಿಭಟನೆ ನಡೆಸಲಾಗಿದೆ ಎಂದು ಕೇಸ್ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read