HomeLatest NewsBIG NEWS: ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಪ್ರತಿಭಟನೆ: ಇಬ್ಬರು ಸ್ವಾಮೀಜಿಗಳ ವಿರುದ್ಧವೂ FIR ದಾಖಲು

BIG NEWS: ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಪ್ರತಿಭಟನೆ: ಇಬ್ಬರು ಸ್ವಾಮೀಜಿಗಳ ವಿರುದ್ಧವೂ FIR ದಾಖಲು

ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ರೈತರು, ಮಠಾಧೀಶರು, ಜನಪ್ರತಿನಿಧಗಳು ಸೇರಿ ನಡೆಸಿದ್ದ ಪ್ರತಿಭಟನೆ ಸಂಬಂಧ ಸ್ವಾಮೀಜಿಗಳು ಸೇರಿ 11 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ತುಮಕೂರು ಜಿಲ್ಲೆಯ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಇಬ್ಬರು ಸ್ವಾಮೀಜಿಗಳು ಸೇರಿದಂತೆ ಒಟ್ಟು 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ಇಬ್ಬರು ಸ್ವಾಮೀಜಿಗಳು ಯಾರೆಂದು ಹೆಸರು ಉಲ್ಲೇಖ ಮಾಡಲಾಗಿಲ್ಲ. ನಿನ್ನೆ ತುಮಕೂರಿನ ಗುಬ್ಬಿ ಬಳಿ ರೈತರು ರಾಷ್ಟ್ರೀಯ ಹೆದ್ದಾರಿ ತಡೆದು, ಟೈರ್ ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಗೆ ಜನಪ್ರತಿನಿಧಿಗಳು, ಮಠಾಧೀಶರು ಬೆಂಬಲ ನೀಡಿದ್ದರು. ಇದೀಗ ಹೋರಾಟದಲ್ಲಿ ಭಾಗಿಯಾಗಿದ್ದ 11ಜನರ ವಿರುದ್ಧ ಎಫ್ ಐ ಆರ‍್ ದಾಖಲಾಗಿದೆ.

ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಹಲ್ಲೆ, ಸಾರ್ವಜನಿಕರಿಗೆ ತೊಂದರೆ, ಸರ್ಕಾರಿ ವಾಹನಗಳಿಗೆ ಹಾನಿ, ರಾಷ್ಟ್ರೀಯ ಹೆದ್ದಾರಿ ಬ್ಲಾಕ್ ಮಾಡಿ ತೊಂದರೆ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಪ್ರತಿಭಟನೆ ವೇಳೆ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಲಾಗಿದ್ದು, ಈ ವೇಳೆ ಸಿಪಿಐ, ಪಿಎಸ್ ಐ, ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ. ಹಿಟಾಚಿಯಿಂದ ಪೈಪ್ ಮುಚ್ಚುವ ವೇಳೆ ಎಸ್ ಪಿ ಕೈಗೆ ಗಾಯವಾಗಿದೆ. ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪ್ರತಿಭಟನೆ ನಡೆಸಲಾಗಿದೆ ಎಂದು ಕೇಸ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular