HomeLatest NewsBIG NEWS: ಹೇಮಾವತಿ ನದಿಗೆ ಉರುಳಿ ಬಿದ್ದ ಕಾರು: ಇಬ್ಬರು ದುರ್ಮರಣ; ಮತ್ತಿಬ್ಬರು ಕಣ್ಮರೆ

BIG NEWS: ಹೇಮಾವತಿ ನದಿಗೆ ಉರುಳಿ ಬಿದ್ದ ಕಾರು: ಇಬ್ಬರು ದುರ್ಮರಣ; ಮತ್ತಿಬ್ಬರು ಕಣ್ಮರೆ

ಹಾಸನ: ಹೇಮಾವತಿ ನದಿಗೆ ಕಾರೊಂದು ಉರುಳಿ ಬಿದ್ದ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ.

ತಡರಾತ್ರಿ ಕಾರೊಂದು ನಾಲೆಗೆ ಉರುಳಿ ಬಿದ್ದಿದ್ದು, ಕಾರಿನಲ್ಲಿದ್ದ ಇಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಮತ್ತಿಬ್ಬರು ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಓರ್ವ ಪುರುಷ ಹಾಗೂ ಓರ್ವ ಮಹಿಳೆಯ ಶವ ಪತ್ತೆಯಾಗಿದೆ.

ಹೊಳೆನರಸೀಪುರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular