ಶಾಲೆಯಲ್ಲಿ ಕೋಳಿ ಕುಕ್ಕಿ ವಿದ್ಯಾರ್ಥಿಗೆ ಗಾಯ: ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪೆದ್ದನಪಾಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ಮಗುವಿಗೆ ಕೋಳಿ ಕುಕ್ಕಿ ಗಾಯಗೊಳಿಸಿದೆ.

ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಎಸ್.ಡಿ.ಎಂ.ಸಿ. ಪದಾಧಿಕಾರಿಗಳು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ. ಶಾಲೆಯ ಜಾಗದಲ್ಲಿ ಕೆಲವರು ಹಸು, ಕರುಗಳನ್ನು ಕಟ್ಟುತ್ತಿದ್ದಾರೆ. ಕೋಳಿ ಸಾಕುತ್ತಿದ್ದಾರೆ. ಬುಧವಾರ ವಿದ್ಯಾರ್ಥಿಗೆ ಕೋಳಿ ಕುಕ್ಕಿ ಗಾಯಗೊಳಿಸಿದೆ. ಇದರಿಂದಾಗಿ ಮಕ್ಕಳ ಸುರಕ್ಷತೆಗೆ ತೊಂದರೆಯಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಶಾಲೆಯ ಹೆಸರಿನಲ್ಲಿ ಜಾಗ ಇರುವ ಬಗ್ಗೆ ಸೂಕ್ತ ದಾಖಲಾತಿ ಇಲ್ಲದ ಕಾರಣ ಶಾಲೆಗೆ ಜಾಗ ನೀಡಿದ ವ್ಯಕ್ತಿ ಅದನ್ನು ಮರುವಶಪಡಿಸಿಕೊಳ್ಳಲು ಮುಂದಾಗಿದ್ದು, ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳು ಸಮಸ್ಯೆ ಬಗೆಹರಿಸಬೇಕು. ಅದುವರೆಗೂ ಶಾಲೆ ಬೀಗ ತೆಗೆಯುವುದಿಲ್ಲ ಎಂದು ಗ್ರಾಮಸ್ಥರು, ಎಸ್.ಡಿ.ಎಂ.ಸಿ. ಪದಾಧಿಕಾರಿಗಳು ಹೇಳಿದ್ದಾರೆ. ಶಾಲೆಗೆ ಭೇಟಿ ನೀಡಿದ ಶಿಕ್ಷಣ ಅಧಿಕಾರಿಗಳು ಪರಿಶೀಲನೆ ನಡೆಸಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read