BIG NEWS : ಇನ್ಮುಂದೆ `ಅತ್ತೆಗೊಂದು, ಸೊಸೆಗೊಂದು ರೇಷನ್ ಕಾರ್ಡ್’ ಸಿಗಲ್ಲ : `ಕಾರ್ಡ್ ವಿಭಜನೆ’ ತಡೆಗೆ ಮಹತ್ವದ ಕ್ರಮ!

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಈಗಾಗಲೇ ನಾಲ್ಕು ಗ್ಯಾರಂಟಿ ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಈ ನಡುವೆ ಸುಳ್ಳು ಮಾಹಿತಿ ನೀಡಿ ಯೋಜನೆಗಳ ಲಾಭ ಪಡೆಯುತ್ತಿರುವ ಅರ್ಹರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದೆ.

ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಮುಖ್ಯವಾದ ಮನೆಯ ಯಜಮಾನಿಯರಿಗೆ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ ಸರ್ಕಾರದಿಂದ ಗ್ಯಾರೆಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ.  1.26 ಕೋಟಿ ಮಹಿಳೆಯರಿಗೆ ಗೃಹಲಕ್ಷೀ ಯೊಜನೆ ಜಾರಿ ಮಾಡಲಾಗಿದೆ. ಇದರಲ್ಲಿ 1.10 ಕೋಟಿ ಜನರಿಗೆ ತಲಾ ರೂ.2000 ಹಣವನ್ನು ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ಇನ್ನೂ 16 ಲಕ್ಷ ಜನರಿಗೆ ಬ್ಯಾಂಕ್ ಖಾತೆ ಹಾಗೂ ಆಧಾರ್ ಜೋಡಣೆ ತೊಂದರೆಯಿಂದ ಹಣ ಜಮೆ ಆಗಿರುವುದಿಲ್ಲ. ಶಕ್ತಿ ಯೋಜನೆಯಡಿ  50 ರಿಂದ 60 ಲಕ್ಷ ಮಹಿಳೆಯರು ಪ್ರತಿನಿತ್ಯ ಉಚಿತವಾಗಿ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಪಡಿತರ ಕುಟುಂಬದ ಸದಸ್ಯರಿಗೆ ತಲಾ ಒಂದು 10 ಕೆ.ಜಿ. ಅಕ್ಕಿ ನೀಡಲು ತೀರ್ಮಾನಿಸಲಾಗಿದೆ. ಸದ್ಯ 5 ಕೆ.ಜಿ. ಅಕ್ಕಿ ನೀಡುತ್ತಿದ್ದು, ಉಳಿದ 5 ಕೆ.ಜಿ. ಅಕ್ಕಿ ಬದಲಿಗೆ ಹಣ ನೀಡಲಾಗುತ್ತಿದೆ.

ಈ ಯೋಜನೆಗಳ ಪೈಕಿ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮೀ ಯೋಜನೆಗೆ ರೇಷನ್ ಕಾರ್ಡ್ ಮುಖ್ಯವಾಗಿ ಅವಶ್ಯವಾಗಿದೆ. ಹೀಗಾಗಿ ಯೋಜನೆಯ ಲಾಭ ಪಡೆಯಲು ಒಂದೇ ಕುಟುಂಬದಲ್ಲಿ ರೇಷನ್ ಕಾರ್ಡ್ ಬೇರೆ ಬೇರೆ ಮಾಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಅನರ್ಹ ಪಡಿತರ ಚೀಟಿದಾರರ ಪಟ್ಟಿ ಮಾಡಿ ಕಾರ್ಡ್ ಗಳನ್ನು ರದ್ದು ಮಾಡಿದೆ.

ರಾಜ್ಯ ಸರ್ಕಾರದ ಯೋಜನೆಗೆ ಹೆಚ್ಚಿನ ಫಲಾನುಭವಿಗಳು ಸೇರ್ಪಡೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ  ಒಂದೇ ಕುಟುಂಬದಲ್ಲಿ ಎರಡು, ಮೂರು ರೇಷನ್ ಕಾರ್ಡ್ ವಿಭಜನೆಗೆ ಅವಕಾಶ ನೀಡದಂತೆ ಹಣಕಾಸು ಇಲಾಖೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯನ್ನು ಒತ್ತಾಯಿಸಿದೆ. ಈ ಮೂಲಕ ಅತ್ತೆಗೊಂದು ರೇಷನ್ ಕಾರ್ಡ್, ಸೊಸೆಗೊಂದು ರೇಷನ್ ಕಾರ್ಡ್ ಪ್ರತ್ಯೇಕ ಮಾಡಿಸಿ ಸೌಲಭ್ಯ ಪಡೆಯುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್ ಎದುರಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read