ನಿಮ್ಮ ʼರೋಗ ನಿರೋಧಕʼ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಇಲ್ಲಿವೆ ಕೆಲ ಸಲಹೆ

ಚಳಿಗಾಲದಲ್ಲಿ ಶೀತ, ಕೆಮ್ಮು ಸಾಮಾನ್ಯವಾಗಿ ಎಲ್ಲರನ್ನೂ ಕಾಡುತ್ತದೆ. ವಾತಾವರಣದಲ್ಲಿನ ಬದಲಾವಣೆ ದೇಹದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

ನಮ್ಮಲ್ಲಿ ರೋಗ ನಿರೋಧಕ ಶಕ್ತಿ ಜಾಸ್ತಿ ಇದ್ದರೆ ಇಂತಹ ತೊಂದರೆಗಳು ಕಾಡುವುದು ಕಡಿಮೆ. ಈ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಇಲ್ಲಿದೆ ಕೆಲವು ಮನೆ ಮದ್ದುಗಳು.

  • *ಕಾಳು ಮೆಣಸು ಇದರಲ್ಲಿ ವಿಟಮಿನ್ ಸಿ ಜಾಸ್ತಿ ಇರುತ್ತದೆ. ನೈಸರ್ಗಿಕವಾಗಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗೇ ಇದನ್ನು ಸೇವಿಸುವುದರಿಂದ ದೇಹದಲ್ಲಿರುವ ಟಾಕ್ಸಿನ್ ಅನ್ನು ಕಡಿಮೆ ಮಾಡುತ್ತದೆ. ಕೆಮ್ಮು ಶೀತವಾದಾಗ ಕಾಳು ಮೆಣಸಿನ ಕಷಾಯ ಮಾಡಿಕೊಂಡು ಕುಡಿದರೆ ಬೇಗ ವಾಸಿಯಾಗುತ್ತದೆ.

*ಬೆಳ್ಳುಳ್ಳಿ ಇದು ಬ್ಯಾಕ್ಟೀರಿಯಾದ ವಿರುದ್ಧ ಹೋರಾಡುವ ಗುಣ ಹೊಂದಿದೆ. ಹಾಗೇ ಕಾಡುವ ಶೀತ, ಕೆಮ್ಮಿನ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಅಡುಗೆಯಲ್ಲಿ ಇದನ್ನು ಜಾಸ್ತಿ ಬಳಸುವುದರಿಂದ ರೋಗನಿರೋಧಕ ಶಕ್ತಿ ಕೂಡ ಹೆಚ್ಚುತ್ತದೆ.

*ಶುಂಠಿ ಇದರಲ್ಲಿ ಆ್ಯಂಟಿ-ಇನ್ ಫ್ಲಾಮೆಟರಿ ಪ್ರಾಪರ್ಟಿಸ್ ಇದೆ. ಗಂಟಲು ಕೆರೆತಕ್ಕೆ ಇದು ಹೇಳಿ ಮಾಡಿಸಿದ ಮದ್ದು. ಶುಂಠಿ ಕಷಾಯ ಮಾಡಿಕೊಂಡು ಕುಡಿದರೆ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

* ಲಿಂಬೆಯಲ್ಲಿನ ಆ್ಯಂಟಿ ಫಂಗಲ್, ಹಾಗೂ ಆ್ಯಂಟಿಸೆಪ್ಟಿಕ್ ಗುಣವು ಶೀತವಾಗದಂತೆ ಕಾಪಾಡುತ್ತದೆ. ಇದರಲ್ಲಿ ವಿಟಮಿನ್ ಸಿ ಹೇರಳವಾಗಿದೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.

*ಅರಿಶಿಣದಲ್ಲಿ ಆ್ಯಂಟಿ ಬ್ಯಾಕ್ಟಿರಿಯಲ್ ಪ್ರಾಪರ್ಟಿಸ್ ಇದೆ. ಬ್ಯಾಕ್ಟೀರಿಯಾ ಹಾಗೂ ವೈರಸ್ ನಿಂದ ದೇಹದ ಆರೋಗ್ಯವನ್ನು ಕಾಪಾಡುತ್ತದೆ. ಬಿಸಿ ಹಾಲಿಗೆ ಚಿಟಿಕೆ ಅರಿಶಿಣ ಹಾಕಿಕೊಂಡು ಕುಡಿಯುವುದರಿಂದ ಒಣಕೆಮ್ಮು ನಿವಾರಣೆಯಾಗುತ್ತದೆ.

* ಜೇನುತುಪ್ಪ ಬದಲಾಗುತ್ತಿರುವ ಹವಾಮಾನದಿಂದ ಉಂಟಾಗುವ ಅನಾರೋಗ್ಯ ಸಮಸ್ಯೆಯನ್ನು ನಿವಾರಿಸುತ್ತದೆ. ಇದನ್ನು ಸೇವಿಸುವುದರಿಂದ ಅಲರ್ಜಿಯನ್ನು ಕೂಡ ಕಡಿಮೆ ಮಾಡಿಕೊಳ್ಳಬಹುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read