HomeLatest NewsKARNATAKA BUDGET 2026 : CM ಸಿದ್ದರಾಮಯ್ಯ ಮಂಡಿಸಿದ 'ಬಜೆಟ್' ಹೈಲೆಟ್ಸ್ ಹೀಗಿದೆ.!

KARNATAKA BUDGET 2026 : CM ಸಿದ್ದರಾಮಯ್ಯ ಮಂಡಿಸಿದ ‘ಬಜೆಟ್’ ಹೈಲೆಟ್ಸ್ ಹೀಗಿದೆ.!

ಬೆಂಗಳೂರು: “ಧನಶೀಲ ಮನಶೀಲ ತನುಶೀಲ… ಸರ್ವಮಯ ದೃಕ್ಕಿಂಗೆ ಕಾಂಬುದೆಲ್ಲವು ಶೀಲ” ಎಂಬ ವಚನಕಾರ್ತಿ ಅಕ್ಕಮ್ಮನವರ ವಚನದ ಸಾಲುಗಳನ್ನು ಉಲ್ಲೇಖಿಸುತ್ತಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಆಯವ್ಯಯವನ್ನು ಮಂಡಿಸಿದ್ದಾರೆ.

ʻಸರ್ವೋದಯವಾಗಲಿ ಸರ್ವರಲಿʼ ಎಂಬ ಕವಿವಾಣಿಯು ನಮ್ಮ ಸಮಗ್ರ ಅಭಿವೃದ್ಧಿಯ ದೀಕ್ಷೆಯೂ ಆಗಿದೆ. ಕರ್ನಾಟಕವು ರಾಷ್ಟ್ರೀಯ, ಅಂತಾರಾಷ್ಟ್ರೀಯ ವಾಣಿಜ್ಯ ರಂಗದಲ್ಲಿ ಅದ್ವಿತೀಯ ಪಾತ್ರ ವಹಿಸುತ್ತಿದೆ. ಕೃತಕ ಬುದ್ಧಿಮತ್ತೆಯ (AI) ಕ್ರಾಂತಿಕಾರಕ ಬೆಳವಣಿಗೆಗಳಿಂದ ಜಾಗತಿಕ ಉತ್ಪಾದನಾ ವಿಧಾನಗಳು ದಿನ ದಿನಕ್ಕೂ ಬದಲಾಗುತ್ತಿವೆ. ವಿಜ್ಞಾನ-ತಂತ್ರಜ್ಞಾನಗಳಲ್ಲಿನ ಹೊಸತನಗಳು ರಾಜ್ಯದ ಸ್ಥಿತಿ-ಗತಿಗಳನ್ನು ನಿರ್ಧರಿಸುವ ನಿರ್ಣಾಯಕ ಸಂಗತಿಗಳಾಗಿವೆ. ಈ ಸಂದರ್ಭದಲ್ಲಿ ನಾವು ಬೆಂಕಿಯನ್ನು ಬೆಳಕಾಗಿಸಿಕೊಳ್ಳುವ ಸಂಕಲ್ಪ ಹೊತ್ತು ಮುನ್ನಡೆಯಬೇಕಾಗಿದೆ ಎಂಬ ಎಚ್ಚರದಿಂದಲೆ ಈ ಆಯವ್ಯಯವನ್ನು ಮಂಡಿಸುತ್ತಿದ್ದೇನೆ ಎಂದು ಸಿಎಂ ಹೇಳಿದ್ದಾರೆ.

ಸಿದ್ದರಾಮಯ್ಯ ಬಜೆಟ್ ನ ಹೈಲೆಟ್ಸ್ ಹೀಗಿದೆ,

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

1) ಕೃಷಿ ಕ್ಷೇತ್ರಕ್ಕೆ

• ʻರೈತ ಸಮೃದ್ಧನಾದರೆ ಕರ್ನಾಟಕ ಸಮೃದ್ಧವಾಗುತ್ತದೆʼಎಂಬದೃಢ ನಂಬಿಕೆಯಿಂದ ಪ್ರೇರಿತವಾಗಿ ನಮ್ಮ ಸರ್ಕಾರವು ಬಿತ್ತನೆಯಿಂದ ಮಾರಾಟದವರೆಗೆ ರೈತರಿಗೆ ಸಮಗ್ರ ಬೆಂಬಲ ನೀಡುವ ನಾಲ್ಕು ಆಧಾರಸ್ತಂಭಗಳ ಮೇಲೆ ಕೃಷಿ ಅಭಿವೃದ್ಧಿ ತಂತ್ರವನ್ನು ರೂಪಿಸಿದೆ. ಮೊದಲನೆಯ ಆಧಾರಸ್ತಂಭ ರೈತರಿಗೆ ವೈಜ್ಞಾನಿಕ ಕೃಷಿ ಮಾರ್ಗದರ್ಶನ, ಎರಡನೆಯದು ರೈತರಿಗೆ ಹಣಕಾಸು ನೆರವು, ಮೂರನೆಯದು ಉತ್ತಮ ಗುಣಮಟ್ಟದ ಕೃಷಿಪರಿಕರಗಳನ್ನು ಒದಗಿಸುವುದು ಮತ್ತು ಬೆಳೆಗಳ ನಿರ್ವಹಣೆ ಹಾಗೂ ನಾಲ್ಕನೆಯದು ಕೊಯ್ಲೋತ್ತರ ಸಂಗ್ರಹಣೆ, ಸಂಸ್ಕರಣೆ ಮತ್ತು ಮಾರುಕಟ್ಟೆ ಸಂಪರ್ಕಗಳ ವಿಸ್ತರಣೆ. ಇದರಿಂದ ಪ್ರತಿಯೊಬ್ಬ ರೈತರ ಸಮೃದ್ಧಿ ಮತ್ತು ಆರ್ಥಿಕ ಸ್ವಾವಲಂಬನೆಯನ್ನು ಸಾಧಿಸಲು ಸರ್ಕಾರ ದೃಢಸಂಕಲ್ಪ ತೊಟ್ಟಿದೆ.


• ಕಳೆದ ಮೂರು ವರ್ಷಗಳಲ್ಲಿ ನಮ್ಮ ಸರ್ಕಾರವು ರೈತರ ಅಭ್ಯುದಯಕ್ಕಾಗಿ ಈ ಕೆಳಕಂಡ ಕ್ರಮಗಳನ್ನು ಕೈಗೊಂಡಿದೆ.
• 40 ಲಕ್ಷ ರೈತರಿಗೆ 468 ಕೋಟಿ ರೂ. ಮೊತ್ತದಲ್ಲಿ ಬಿತ್ತನೆ ಬೀಜಗಳಿಗೆ ಸಹಾಯಧನ ವಿತರಣೆ.
• 2,825 ಕೋಟಿ ವೆಚ್ಚ ಭರಿಸಿ 7 ಲಕ್ಷ ರೈತರಿಗೆ ಹನಿನೀರಾವರಿ ಘಟಕ ಸ್ಥಾಪನೆ ಹಾಗೂ3.41 ಲಕ್ಷ ರೈತರಿಗೆ ಕೃಷಿ ಯಂತ್ರೋಪಕರಣಗಳ ವಿತರಣೆ.

• 363 ಕೋಟಿ ರೂ. ಮೊತ್ತದಲ್ಲಿ 32,138 ಕೃಷಿ ಹೊಂಡಗಳ ನಿರ್ಮಾಣ.
• 51 ಲಕ್ಷ ರೈತರಿಗೆ 6,213 ಕೋಟಿ ಬೆಳೆ ವಿಮೆ ಪರಿಹಾರ.
• 36 ಲಕ್ಷ ನೀರಾವರಿ ಪಂಪ್ಸೆಟ್ಗಳಿಗೆ 48,000 ಕೋಟಿ ರೂ. ಉಚಿತ ವಿದ್ಯುತ್ ಸಹಾಯಧನ.
• 83 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 70 ಸಾವಿರ ಕೋಟಿ ರೂ. ಕೃಷಿ ಸಾಲ ವಿತರಣೆ.
• ಉತ್ಪಾದನೋತ್ತರ ಕೃಷಿ ಚಟುವಟಿಕೆಗಳಾದ ಸಂಸ್ಕರಣೆ, ಮೌಲ್ಯವರ್ಧನೆ, ಮೌಲ್ಯ ಸರಪಳಿ ಅಭಿವೃದ್ಧಿ, ಕೃಷಿ ತ್ಯಾಜ್ಯಗಳ ಮರುಬಳಕೆ ಹಾಗೂ ಮಾರುಕಟ್ಟೆ ಸಂಪರ್ಕಗಳನ್ನು ಸಮಗ್ರವಾಗಿ ಬಲಪಡಿಸುವ ಮೂಲಕ ಗ್ರಾಮೀಣ ರೈತರಿಗೆ ಸ್ಥಿರ ಮತ್ತು ಹೆಚ್ಚುವರಿ ಆದಾಯದ ಮೂಲಗಳನ್ನು ಸೃಜಿಸುವ ಉದ್ದೇಶದಿಂದ ʻಮುಖ್ಯಮಂತ್ರಿ ಕೃಷಿ ವಿಸ್ತಾರʼ ಯೋಜನೆಯನ್ನು ಮುಂದಿನ ಮೂರು ವರ್ಷಗಳಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.

• ರಾಜ್ಯದಲ್ಲಿ ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳನ್ನು ಉತ್ತೇಜಿಸಲು ನಿರ್ಮಿಸಲಾಗುತ್ತಿರುವ ʻಮಿಲೆಟ್ ಹಬ್ʼ ಅನ್ನು ರೈತರು, ಗ್ರಾಮೀಣ ಯುವಕರು ಮತ್ತು ನವ ಉದ್ಯಮಿಗಳಿಗೆ ತಾಂತ್ರಿಕ ಸಹಾಯ, ಸಂಸ್ಕರಣಾ ಸೌಲಭ್ಯ, ಗುಣಮಟ್ಟ ಪ್ರಮಾಣೀಕರಣ ಮತ್ತು ಮಾರುಕಟ್ಟೆ ಸಂಪರ್ಕಗಳನ್ನು ಒಂದೇ ಸೂರಿನಡಿ ಕಲ್ಪಿಸುವ ಏಕಗವಾಕ್ಷಿ ವ್ಯವಸ್ಥೆಯೊಂದಿಗೆ ಸ್ವಾವಲಂಬಿ ಸಂಸ್ಥೆಯನ್ನಾಗಿಸಲಾಗುವುದು.

• ರೈತರಿಗೆ ಮಣ್ಣು, ನೀರು, ಬೀಜ ಹಾಗೂ ರಸಗೊಬ್ಬರ ಪರೀಕ್ಷೆಗಳಲ್ಲಿ ನಿಖರ ಫಲಿತಾಂಶಗಳನ್ನು ಒದಗಿಸಿ ಕೃಷಿ ಉತ್ಪಾದಕತೆ ಹೆಚ್ಚಿಸಲು ಇಲಾಖೆಯ ಎಲ್ಲಾ ಪ್ರಯೋಗಾಲಯಗಳಿಗೆ NABLಮಾನ್ಯತೆ ಪಡೆದು ವಿಶ್ವಾಸಾರ್ಹ ಹಾಗೂ ವೈಜ್ಞಾನಿಕ ಪರೀಕ್ಷಣಾ ಸೇವೆಗಳನ್ನು ಒದಗಿಸಲಾಗುವುದು.

• ನೂತನ ದ್ವಿದಳಧಾನ್ಯ ತಳಿಗಳ ಬಿತ್ತನೆ ಬೀಜಗಳ ಬಳಕೆಯನ್ನು ರೈತರಲ್ಲಿ ಪ್ರೇರೇಪಿಸಲು ನೀಡುತ್ತಿರುವ ಸಹಾಯಧನವನ್ನು ಹೆಚ್ಚಿಸಲಾಗುವುದು.

• ಮಣ್ಣಿನ ಸಾವಯವ ಇಂಗಾಲ ಹಾಗೂ ಅದರ ಭೌತಿಕ, ರಾಸಾಯನಿಕ ಮತ್ತು ಜೈವಿಕ ಗುಣಮಟ್ಟವನ್ನು ಹೆಚ್ಚಿಸುವ ಮೂಲಕ ಪರಿಸರ ಸ್ನೇಹಿ ಮತ್ತು ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸಲು ʻವಸುಧಾಮೃತʼ ಕಾರ್ಯಕ್ರಮವನ್ನು ಮುಂದಿನ ಮೂರು ವರ್ಷಗಳಲ್ಲಿ ಜಾರಿಗೊಳಿಸಲಾಗುವುದು.

• ಬೆಳೆಗಳಲ್ಲಿ ಕೀಟ ಹಾಗೂ ರೋಗಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಇವುಗಳನ್ನು ನಿಯಂತ್ರಿಸಲು ಅಗತ್ಯವಿರುವ ಪರಿಸರ ಸ್ನೇಹಿ ಜೈವಿಕ ಪೀಡೆನಾಶಕ/ಜೈವಿಕ ಕೀಟನಾಶಕಗಳ ಜೊತೆ ಇತರೆ ಸುರಕ್ಷಿತ ನಿರ್ವಹಣಾ ಕ್ರಮಗಳ ಶಿಫಾರಸ್ಸುಗಳನ್ನು ರೈತರಿಗೆ ಸಕಾಲದಲ್ಲಿ ಒದಗಿಸಲು ʻಸಸ್ಯ ಸಂಜೀವಿನಿ’ ಯೋಜನೆಯನ್ನು ಮುಂದಿನ ಮೂರು ವರ್ಷಗಳಲ್ಲಿ ಅನುಷ್ಠಾನಗೊಳಿಸಲಾಗುವುದು.

• ರೈತರಿಗೆ ಒಂದೇ ಸೂರಿನಡಿ ಹವಾಮಾನ, ಮಾರುಕಟ್ಟೆ, ಕೃಷಿ ತಾಂತ್ರಿಕತೆ ಮತ್ತು ಇಲಾಖಾ ಮಾಹಿತಿಯನ್ನು ತ್ವರಿತವಾಗಿ ಒದಗಿಸಲು ಕೃಷಿ ಇಲಾಖೆಯ ʻರೈತ ಕರೆ ಕೇಂದ್ರʼವನ್ನು AI ತಂತ್ರಜ್ಞಾನದಿಂದ ಉನ್ನತೀಕರಿಸಲಾಗುವುದು.

• ಚಿತ್ರದುರ್ಗ ಜಿಲ್ಲೆಯ ಬಬ್ಬೂರಿನ ಜಿಲ್ಲಾ ಕೃಷಿ ತರಬೇತಿ ಕೇಂದ್ರವನ್ನು ರಾಜ್ಯಮಟ್ಟದ ʻಕೃಷಿ ಉದ್ದಿಮೆ ತರಬೇತಿ ಕೇಂದ್ರʼವನ್ನಾಗಿ ಉನ್ನತೀಕರಿಸಲಾಗುವುದು.

• ಕೃಷಿ ಚಟುವಟಿಕೆಯಲ್ಲಿ ರೈತರ ಸಮಯ ಹಾಗೂ ಶ್ರಮ ತಗ್ಗಿಸುವುದರೊಂದಿಗೆ ಉತ್ಪಾದನಾ ವೆಚ್ಚವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ನಿಖರ ಬಿತ್ತನೆ ಮತ್ತು ನಾಟಿ ಯಂತ್ರಗಳನ್ನು ಹೈಟೆಕ್ಹಾರ್ವೆಸ್ಟರ್ಹಬ್ಯೋಜನೆಯಡಿ ಸೇರ್ಪಡೆಗೊಳಿಸಲಾಗುವುದು.

• ಕೃಷಿ ಸಂಬಂಧಿತ ಕಸುಬುಗಳನ್ನು ಮತ್ತು ಸ್ಥಳೀಯ ಗುಡಿ ಕೈಗಾರಿಕೆಗಳನ್ನು ಪ್ರೋತ್ಸಾಹಿಸಲು ಹಾಗೂ ಸಣ್ಣ, ಅತೀ ಸಣ್ಣ ರೈತರಿಗೆ ಸ್ಥಳೀಯವಾಗಿ ಅಗತ್ಯವಿರುವ ಎತ್ತು ಚಾಲಿತ ಹಾಗೂ ಕೈಚಾಲಿತ ಉಪಕರಣಗಳನ್ನು ಕೃಷಿ ಯಾಂತ್ರೀಕರಣ ಯೋಜನೆಯಡಿ ಒದಗಿಸಲಾಗುವುದು.

• ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕನ್ನು ಸಂಪೂರ್ಣ ಸಾವಯವ ತಾಲ್ಲೂಕನ್ನಾಗಿ ಪರಿವರ್ತಿಸಲು ಅಧಿಕೃತ ಸಾವಯವ ಪ್ರಮಾಣೀಕರಣ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು.

• ಹವಾಮಾನ ಬದಲಾವಣೆಗೆ ಹೊಂದಾಣಿಕೆ ಹಾಗೂ ತಗ್ಗಿಸುವಿಕೆಯ ರಾಜ್ಯದ ಪ್ರಯತ್ನಗಳನ್ನು ಬಲಪಡಿಸಿ ಕೃಷಿಯನ್ನು ಸುಸ್ಥಿರ ಹಾಗೂ ಪರಿಸರ ಸ್ನೇಹಿಯಾಗಿಸಲು ಭತ್ತದ ಕೃಷಿಯಲ್ಲಿ ನೀರಿನ ಬಳಕೆಯ ದಕ್ಷತೆಯನ್ನು ಹೆಚ್ಚಿಸುವ ಪರ್ಯಾಯ ತೇವ–ಒಣಗಿಸುವ (Alternate Wetting & Drying) ವಿಧಾನಗಳನ್ನು ಉತ್ತೇಜಿಸಲಾಗುವುದು.

• ರೈತರಿಗೆ ಉತ್ತಮ ಗುಣಮಟ್ಟದ ಕೃಷಿ ಪರಿಕರಗಳನ್ನು ಕೈಗೆಟುಕುವ ದರದಲ್ಲಿ ಲಭ್ಯವಾಗಿಸುವುದರ ಜೊತೆಗೆ ಮಾರುಕಟ್ಟೆಯ ಅನಿಶ್ಚಿತತೆಯನ್ನು ನಿವಾರಿಸುವ ಉದ್ದೇಶದಿಂದ ಬಿತ್ತನೆ ಬೀಜಗಳು, ಕೀಟನಾಶಕಗಳು, ರಸಗೊಬ್ಬರಗಳು ಹಾಗೂ ಕೃಷಿ ಯಂತ್ರೋಪಕರಣಗಳು ಒಂದೇ ಸೂರಿನಡಿ ದೊರಕಿಸಲು ಪ್ರಾಯೋಗಿಕವಾಗಿ ಕೋಲಾರ ಜಿಲ್ಲೆಯ ಪ್ರತಿಯೊಂದು ತಾಲ್ಲೂಕಿನಲ್ಲಿ MSIL ವತಿಯಿಂದ ರೈತ ಮಾಲ್ಗಳನ್ನು ಸ್ಥಾಪಿಸಲಾಗುವುದು.

• ರೈತರಿಗೆ ಕಳಪೆ, ಅಸುರಕ್ಷಿತ, ದೋಷಪೂರಿತ ಬೀಜಗಳು ಮತ್ತು ಕೀಟನಾಶಕಗಳನ್ನು ಪೂರೈಸುವುದನ್ನು ಹಾಗೂ ಕೃಷಿ ಪರಿಕರಗಳನ್ನು ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧ್ಯಯನ ಮಾಡಿ ಸೂಕ್ತ ಶಿಫಾರಸ್ಸುಗಳನ್ನು ಸಲ್ಲಿಸಲು ರಾಜ್ಯ ಮಟ್ಟದ ಸಲಹಾ ಸಮಿತಿಯನ್ನು ರಚಿಸಲಾಗುವುದು.

• ತಜ್ಞರ ಕಾರ್ಯಸಾಧ್ಯತಾ ವರದಿಯ ಶಿಫಾರಸ್ಸಿನಂತೆ ಅಥಣಿಯಲ್ಲಿ ಕೃಷಿ ಕಾಲೇಜನ್ನು ಸ್ಥಾಪಿಸಲು ಅಗತ್ಯವಿರುವ ಪ್ರಥಮ ಹಂತದ ಮೂಲಸೌಕರ್ಯ ಒದಗಿಸಲಾಗುವುದು.

ತೋಟಗಾರಿಕೆ
• ತೋಟಗಾರಿಕೆಯನ್ನು ರೈತರ ಆದಾಯ ವೃದ್ಧಿಯ ಪ್ರಮುಖ ಇಂಜಿನ್ ಆಗಿ ರೂಪಿಸುವ ಉದ್ದೇಶದಿಂದ ನಮ್ಮ ಸರ್ಕಾರವು ಉತ್ಕೃಷ್ಟ ಗುಣಮಟ್ಟ, ಅಧಿಕ ಮೌಲ್ಯದ, ಹವಾಮಾನ
ಸ್ಥಿತಿ-ಸ್ಥಾಪಕ ಮತ್ತು ಮಾರುಕಟ್ಟೆ ಆಧಾರಿತ ತೋಟಗಾರಿಕೆ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ತೋಟಗಾರಿಕೆ ಬೆಳೆಗಳ ಅಭಿವೃದ್ಧಿಗಾಗಿ ಈ ಕೆಳಕಂಡ ಕ್ರಮಗಳನ್ನು ಕೈಗೊಂಡಿದೆ:
• ಹೊಸದಾಗಿ 89,000 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾಬೇಸಾಯ ಅಳವಡಿಕೆ;
• 2.23 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹನಿನೀರಾವರಿ ಅಳವಡಿಸಿ 2.36 ಲಕ್ಷ ರೈತರಿಗೆ ಅನುಕೂಲ;
• ಬೆಳೆ ವಿಮೆ ಯೋಜನೆಯಡಿ 11 ಲಕ್ಷ ರೈತರಿಗೆ 2,378 ಕೋಟಿ ರೂ.ಗಳ ಬೆಳೆ ವಿಮೆ ಪರಿಹಾರ;
• 21,360 ಫಲಾನುಭವಿಗಳಿಗೆ 9,800 ಕೊಯ್ಲೋತ್ತರ ಘಟಕಗಳ ನಿರ್ಮಾಣ.
• ತೋಟಗಾರಿಕೆ ಇಲಾಖೆಯ ಕ್ಷೇತ್ರಗಳು ಮತ್ತು ನರ್ಸರಿಗಳಲ್ಲಿ ಲಭ್ಯವಿರುವ ಜಮೀನನ್ನು ಉಪಯೋಗಿಸಿ ಉತ್ಕೃಷ್ಟ ಮೌಲ್ಯದ ತೋಟಗಳ ಅಭಿವೃದ್ಧಿ, ಕೊಯ್ಲೋತ್ತರ ಸೌಲಭ್ಯಗಳು ಹಾಗೂ ತೋಟಗಾರಿಕೆ ಆಧಾರಿತ ಕೈಗಾರಿಕೆಗಳನ್ನು PPP ಮಾದರಿಯಲ್ಲಿ ಸ್ಥಾಪಿಸಲಾಗುವುದು.
• ಅಡಿಕೆ ಬೆಳೆಯ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳ ಮತ್ತು ತೆಂಗು ಬೆಳೆಯ ಕಪ್ಪು ತಲೆ ಹುಳು ಹಾಗೂ ಬಿಳಿ ನೊಣಗಳ ನಿಯಂತ್ರಣಕ್ಕಾಗಿ ವಿಶ್ವವಿದ್ಯಾಲಯಗಳು ಹಾಗೂ ಕೃಷಿ ವಿಜ್ಞಾನ ಕೇಂದ್ರಗಳ ಸಹಯೋಗದೊಂದಿಗೆ ಸಮುದಾಯ ಆಧಾರಿತ ರೋಗ–ಕೀಟ ನಿಯಂತ್ರಣ ಕ್ರಮಗಳನ್ನು 10 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುವುದು.
• ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆಗಾಗಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕು ಮತ್ತು ವಿಜಯಪುರ ಜಿಲ್ಲೆಯ ತೊರವಿಯಲ್ಲಿ ಒಟ್ಟು 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಎರಡು ಶೀತಲಗೃಹಗಳನ್ನು 64 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಎಲ್ಲಾ ಕೃಷಿ ಮಾರುಕಟ್ಟೆಗಳಲ್ಲಿ ಶೀತಲಗೃಹಗಳನ್ನು ಹಂತ ಹಂತವಾಗಿ ನಿರ್ಮಿಸಲಾಗುವುದು.
• ಹೆಚ್ಚಿನ ಪ್ರವಾಸಿಗರನ್ನು ಹಾಗೂ ಪರಿಸರ ಪ್ರೇಮಿಗಳನ್ನು ಆಕರ್ಷಿಸುವ ದೃಷ್ಟಿಯಿಂದ ಮೈಸೂರಿನ ಲಿಂಗಾಂಬುಧಿ ಸಸ್ಯ ತೋಟವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು.
• ನೀರಿನ ಸಂರಕ್ಷಣೆ ಮತ್ತು ಮಣ್ಣಿನಿಂದ ಹರಡುವ ರೋಗಗಳನ್ನು ತಡೆಗಟ್ಟಲು ಹೈಡ್ರೋಪೊನಿಕ್ಸ್ (Hydroponics) ಹಾಗೂ ಕೋಕೋಪೀಟ್ (Coco peat) ಆಧಾರಿತ ಮಣ್ಣಿಲ್ಲದ ಕೃಷಿಯನ್ನು ಪ್ರೋತ್ಸಾಹಿಸಲಾಗುವುದು.
• ತಜ್ಞರ ಕಾರ್ಯಸಾಧ್ಯತಾ ವರದಿಯ ಶಿಫಾರಸ್ಸಿನಂತೆ ಡಂಬಳದಲ್ಲಿ ತೋಟಗಾರಿಕೆ ಕಾಲೇಜನ್ನು ಸ್ಥಾಪಿಸಲು ಅಗತ್ಯವಿರುವ
ಪ್ರಥಮ ಹಂತದ ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.

ರೇಷ್ಮೆ
• ಭಾರತದ ರೇಷ್ಮೆ ಉತ್ಪಾದನೆಯಲ್ಲಿ ಶೇ.46ರಷ್ಟು ಪಾಲು ಹೊಂದಿರುವ ಕರ್ನಾಟಕವು ದೇಶದ ರೇಷ್ಮೆ ರಾಜಧಾನಿಯಾಗಿದೆ. ರಾಜ್ಯದ ಅಭಿವೃದ್ಧಿಗೆ ಅಗತ್ಯವಿರುವ ರೀಲಿಂಗ್ ಶೆಡ್ ನಿರ್ಮಾಣ, ಹನಿ ನೀರಾವರಿ ಘಟಕ ಮುಂತಾದ ಚಟುವಟಿಕೆಗಳಿಗೆ ಕಳೆದ ಮೂರು ವರ್ಷಗಳಲ್ಲಿ 531 ಕೋಟಿ ರೂ. ಮೊತ್ತದ ಸಹಾಯಧನವನ್ನು 2 ಲಕ್ಷ ಫಲಾನುಭವಿಗಳಿಗೆ ಒದಗಿಸಲಾಗಿದೆ
• ಪ್ರಮುಖ 15 ರೇಷ್ಮೆಗೂಡು ಮಾರುಕಟ್ಟೆಗಳಲ್ಲಿ ಸಂಪೂರ್ಣ
ನಗದುರಹಿತ, ಡಿಜಿಟಲ್ ವಹಿವಾಟು, ಇ-ಹರಾಜು,
ಇ-ಪೇಮೆಂಟ್ ಮತ್ತು ಇ-ಪಾವತಿ ವ್ಯವಸ್ಥೆಯನ್ನು ಆರಂಭಿಸಿದ ದೇಶದ ಮೊದಲ ಮತ್ತು ಏಕೈಕ ರಾಜ್ಯ ಕರ್ನಾಟಕ ಎಂಬುದು ಹೆಮ್ಮೆಯ ವಿಷಯವಾಗಿದೆ.
• ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಉತ್ಪಾದಿಸುವ ರೇಷ್ಮೆಗೂಡನ್ನು ಸರ್ಕಾರದ ಯಾವುದೇ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಪ್ರತಿ ಕೆ.ಜಿ. ಗೂಡಿಗೆ ಇರುವ 10 ರೂ. ಸಾಗಾಣಿಕಾ ವೆಚ್ಚವನ್ನು 20 ರೂ. ಗೆ ಹೆಚ್ಚಿಸಲಾಗುವುದು.
• ರಾಮನಗರ, ಶಿಡ್ಲಘಟ್ಟ, ಹಾವೇರಿ, ತಾಂಡವಪುರ (ಮೈಸೂರು) ಹಾಗೂ ಕಲಬುರಗಿಯಲ್ಲಿ ಸಿಲ್ಕ್ ಪಾರ್ಕ್ಗಳ ಸ್ಥಾಪನೆಗೆ ಕ್ರಮವಹಿಸಲಾಗುವುದು.
• ರೇಷ್ಮೆ ಇಲಾಖೆಯ ಆಯ್ದ ಕ್ಷೇತ್ರಗಳಲ್ಲಿ ಲಭ್ಯವಿರುವ ಜಮೀನಿನಲ್ಲಿ ರೈತ ಉದ್ಯಮಿ ಹಾಗೂ ರೈತ ಉತ್ಪಾದಕ ಸಂಸ್ಥೆಗಳ ಸಹಯೋಗದೊಂದಿಗೆ ಚಾಕಿ ಸಾಕಾಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

ಪಶುಸಂಗೋಪನೆ
• ನಮ್ಮ ಸರ್ಕಾರದ ಪ್ರಾರಂಭದ ಅವಧಿಯಲ್ಲಿ ಪ್ರತಿದಿನ 8.75 ಲಕ್ಷ ಹಾಲು ಉತ್ಪಾದಕರಿಂದ 81.78 ಲಕ್ಷ ಲೀಟರ್ ಹಾಲು ಸಂಗ್ರಹಣೆಯಾಗುತ್ತಿತ್ತು. ಪ್ರಸ್ತುತ ಪ್ರತಿದಿನ 9.07 ಲಕ್ಷ ಹಾಲು ಉತ್ಪಾದಕರಿಂದ ಸರಾಸರಿ ಒಂದು ಕೋಟಿ ಲೀಟರ್ ಹಾಲು ಸಂಗ್ರಹಣೆಯಾಗುತ್ತಿದೆ. ಹಾಲು ಪೂರೈಕೆದಾರರಿಗೆ ಬಾಕಿ ಇದ್ದ 609 ಕೋಟಿ ರೂ. ಪ್ರೋತ್ಸಾಹಧನವನ್ನು ಒಳಗೊಂಡಂತೆ, ಇದುವರೆಗೂ ಒಟ್ಟಾರೆ 4,523 ಕೋಟಿ ರೂ. ಪ್ರೋತ್ಸಾಹಧನವನ್ನು ನೀಡಲಾಗಿದೆ.
• ಅನುಗ್ರಹ ಯೋಜನೆಯಡಿ ಕುರಿ/ಮೇಕೆಗಳ ಮತ್ತು ರಾಸುಗಳ ಆಕಸ್ಮಿಕ ಸಾವಿಗೆ ನೀಡುವ ಪರಿಹಾರ ಧನವನ್ನು ಹೆಚ್ಚಿಸಿ, ಇದುವರೆಗೂ 1.70 ಲಕ್ಷ ಫಲಾನುಭವಿಗಳಿಗೆ 101 ಕೋಟಿ ರೂ. ವಿತರಿಸಲಾಗಿದೆ.
• ʻಕರ್ನಾಟಕ ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ (ಕ್ಷೇಮಾಭಿವೃದ್ಧಿ ಕ್ರಮಗಳು ಮತ್ತು ದೌರ್ಜನ್ಯಗಳ ವಿರುದ್ಧ ರಕ್ಷಣೆ) ಅಧಿನಿಯಮ, 2025ʼ ನ್ನು ಜಾರಿಗೆ ತರಲಾಗಿದೆ. ಇಲ್ಲಿಯವರೆಗೆ 6,702 ಕುರಿಗಾಹಿಗಳಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಗಿದೆ.
• ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ 300 ಪಶುವೈದ್ಯ ಸಂಸ್ಥೆಗಳಿಗೆ ನೂತನ ಕಟ್ಟಡಗಳನ್ನು ನಿರ್ಮಿಸಲು ಕ್ರಮವಹಿಸಲಾಗಿದೆ. 2026-27ನೇ ಸಾಲಿನಲ್ಲಿ ನಬಾರ್ಡ್ ಸಹಯೋಗದೊಂದಿಗೆ ಹೊಸದಾಗಿ 100 ಕಟ್ಟಡಗಳನ್ನು ನಿರ್ಮಿಸಲಾಗುವುದು.
• ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು ಪ್ರೋತ್ಸಾಹಿಸಲು ಆಯ್ದ 10,000 ಫಲಾನುಭವಿಗಳಿಗೆ ಶೇ.25ರಷ್ಟು ಸಹಾಯಧನದಲ್ಲಿ ಕುರಿ/ಮೇಕೆ ಘಟಕಗಳನ್ನು ಸ್ಥಾಪಿಸುವ ಯೋಜನೆಯನ್ನು ರೂಪಿಸಲಾಗಿದೆ. ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಆಯ್ದ 10,000 ಫಲಾನುಭವಿಗಳಿಗೆ ಶೇ.25ರಷ್ಟು ಸಹಾಯಧನದಲ್ಲಿ ಹಸು/ಎಮ್ಮೆ ಖರೀದಿಸಲು ಪ್ರೋತ್ಸಾಹಧನ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ ಈ ಯೋಜನೆಗಳಿಗೆ ಒಟ್ಟು 40 ಕೋಟಿ ರೂ. ಅನುದಾನವನ್ನು ಮೀಸಲಿರಿಸಲಾಗುವುದು.
• ಜಿಲ್ಲಾ ಹಂತದಲ್ಲಿರುವ ತಜ್ಞ ಪಶುವೈದ್ಯಕೀಯ ವಿಶೇಷ ಸೇವೆ ವ್ಯವಸ್ಥೆಯನ್ನು ತಾಲ್ಲೂಕು ಹಂತಕ್ಕೆ ವಿಸ್ತರಿಸಲು
20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ಪಾಲಿಕ್ಲಿನಿಕ್ಗಳನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 15 ತಾಲ್ಲೂಕು ಪಶು ಆಸ್ಪತ್ರೆಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಪಾಲಿಕ್ಲಿನಿಕ್ಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು.
• ಸ್ಥಳೀಯ ಮೇಕೆ ತಳಿಗಳ ಉನ್ನತೀಕರಣಕ್ಕಾಗಿ ಮೈಸೂರಿನಲ್ಲಿ ಬೋಯರ್ ಮೇಕೆ ತಳಿ ಸಂವರ್ಧನಾ ಕೇಂದ್ರವನ್ನು ಸ್ಥಾಪಿಸಲಾಗುವುದು. ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಬಂಡೂರು ಕುರಿ ತಳಿ ಸಂವರ್ಧನಾ ಕೇಂದ್ರದ ಸಮಗ್ರ ಅಭಿವೃದ್ಧಿಯನ್ನು ಕೈಗೊಳ್ಳಲಾಗುವುದು.
• ಜಾನುವಾರುಗಳ ಸಂತಾನೋತ್ಪತ್ತಿ ಸಮಸ್ಯೆಗಳನ್ನು ನಿವಾರಿಸಲು ʻವರ್ಷಕ್ಕೊಂದು ಕರುʼ ಎಂಬ ಘೋಷವಾಕ್ಯದೊಂದಿಗೆ ರಾಜ್ಯದ 1,000 ಗ್ರಾಮ ಪಂಚಾಯಿತಿಗಳಲ್ಲಿ ʻಫಲಧಾರೆʼ ಶಿಬಿರಗಳನ್ನು ಐದು ಕೋಟಿ ರೂ. ವೆಚ್ಚದಲ್ಲಿ ಏರ್ಪಡಿಸಲಾಗುವುದು.
• ಪಶುಗಳಲ್ಲಿನ ರೋಗಗಳನ್ನು ನಿಖರವಾಗಿ ಪತ್ತೆ ಹಚ್ಚಲು ರಾಜ್ಯದಲ್ಲಿ ಪ್ರಪ್ರಥಮವಾಗಿ ಬೆಂಗಳೂರು ಹಾಗೂ ಬೀದರ್ನ ಪಶುವೈದ್ಯಕೀಯ ಮಹಾವಿದ್ಯಾಲಯದ ಪಶು ಆಸ್ಪತ್ರೆಗಳಲ್ಲಿ ಜಾನುವಾರುಗಳ ಸಿ.ಟಿ. ಸ್ಕ್ಯಾನಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
• ಬೀದಿ ನಾಯಿಗಳ ಸಮಸ್ಯೆಗೆ ಪರಿಹಾರೋಪಾಯವಾಗಿ ಸಂತಾನಹರಣ ನಿಯಂತ್ರಣವನ್ನು ವೈಜ್ಞಾನಿಕ ಹಾಗೂ ಪರಿಣಾಮಕಾರಿ ರೀತಿಯಲ್ಲಿ ಜಾರಿಗೆ ತರುವ ಉದ್ದೇಶದಿಂದ ಪಶುವೈದ್ಯರು ಮತ್ತು ಪಶುವೈದ್ಯಕೀಯ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ತಾಂತ್ರಿಕ ತರಬೇತಿಯನ್ನು ನೀಡಲು ಬೆಂಗಳೂರು ಹಾಗೂ ಬೀದರ್ನಲ್ಲಿ ʻಶ್ವಾನ ಸಂತಾನ ನಿಯಂತ್ರಣ ತರಬೇತಿ ಕೇಂದ್ರʼವನ್ನು ಸ್ಥಾಪಿಸಲಾಗುವುದು.

ಮೀನುಗಾರಿಕೆ
• ಮೀನುಗಾರರಿಗೆ ಉಚಿತವಾಗಿ ನೀಡುವ ಮೀನುಗಾರಿಕೆ ಸಲಕರಣೆ ಕಿಟ್ ಮೌಲ್ಯದ ದರವನ್ನು 10,000 ರೂ.ಗಳಿಂದ 20,000 ರೂ.ಗಳಿಗೆ ಹೆಚ್ಚಿಸಿ ಮೀನುಗಾರಿಕೆ ಚಟುವಟಿಕೆಗಳನ್ನು ಉತ್ತೇಜಿಸಲಾಗುವುದು.
• ಜೈವಿಕ ತಂತ್ರಜ್ಞಾನದ ಉದ್ಯಮಗಳು, ನವೀನ ತಂತ್ರಜ್ಞಾನದ ಅಭಿವೃದ್ಧಿ ಮತ್ತು ಸಮುದ್ರ ಕೃಷಿಯನ್ನು (Mariculture)ಪ್ರೋತ್ಸಾಹಿಸಲು ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ Centre of Excellence ಸ್ಥಾಪಿಸಲಾಗುವುದು.
• ಮೀನುಆಹಾರದ ಸೇವನೆಯನ್ನು ಉತ್ತೇಜಿಸುವ ಹಾಗೂ ಸಾರ್ವಜನಿಕರಿಗೆ ಸ್ವಚ್ಛ ಮತ್ತು ಗುಣಮಟ್ಟದ ಮೀನು ಉತ್ಪನ್ನಗಳು ಲಭ್ಯವಾಗುವಂತೆ ಮಾಡಲು ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ ಮತ್ಸ್ಯದರ್ಶಿನಿಗಳನ್ನು ಸ್ಥಾಪಿಸಲಾಗುವುದು.
• ಮೀನು ಮಾರಾಟ ಮಾಡಲು ಸುಸಜ್ಜಿತ ಮೀನು ಮಾರುಕಟ್ಟೆಗಳ ಅವಶ್ಯಕತೆ ಇರುವುದರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮೀನು ಮಾರುಕಟ್ಟೆಯನ್ನು ನಿರ್ಮಿಸಲಾಗುವುದು.
• ರಾಜ್ಯದಲ್ಲಿ ಮೀನುಗಾರಿಕೆ ಕೊಂಡಿ ರಸ್ತೆಗಳ ನಿರ್ವಹಣೆಗಾಗಿ 20 ಕೋಟಿ ರೂ.ಗಳನ್ನು ಒದಗಿಸಲಾಗುವುದು.
• ಒಳನಾಡು ಮೀನುಗಾರಿಕೆಯು ಗ್ರಾಮೀಣ ಜೀವನೋಪಾಯ ಮತ್ತು ಆಹಾರ ಭದ್ರತೆಗೆ ಮಹತ್ವವಾಗಿದೆ. ಮೀನುಗಾರಿಕೆಯಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ನದಿ, ಕೆರೆ, ಕೃಷಿ ಹೊಂಡ ಹಾಗೂ ಜಲಾಶಯಗಳಲ್ಲಿ ಮೀನು ಉತ್ಪಾದನೆ ಹೆಚ್ಚಿಸಲು ಮೀನುಗಾರರಿಗೆ ತರಬೇತಿ ನೀಡಿ ಸ್ಥಿರ ಆದಾಯ ಗಳಿಕೆಗೆ ಅವಕಾಶ ಕಲ್ಪಿಸಲಾಗುವುದು.

ಸಹಕಾರ
• 2025-26ನೇ ಸಾಲಿನಲ್ಲಿ 37 ಲಕ್ಷ ರೈತರಿಗೆ 28,000 ಕೋಟಿ ರೂ. ಸಾಲವನ್ನು ವಿತರಿಸುವ ಗುರಿ ಹೊಂದಲಾಗಿದ್ದು, ಫೆಬ್ರವರಿ 2026ರ ಅಂತ್ಯಕ್ಕೆ 25 ಲಕ್ಷ ರೈತರಿಗೆ 22,000 ಕೋಟಿ ರೂ. ಕೃಷಿ ಸಾಲವನ್ನು ವಿತರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 30,000 ಕೋಟಿ ರೂ. ಕೃಷಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ.
• ಯಶಸ್ವಿನಿ ಯೋಜನೆಯಡಿ ಇದುವರೆಗೆ ರಾಜ್ಯಾದ್ಯಂತ 870 ಯಶಸ್ವಿನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ 86,253 ಫಲಾನುಭವಿಗಳು ಚಿಕಿತ್ಸೆ ಪಡೆದಿದ್ದು, ಇದಕ್ಕಾಗಿ 163 ಕೋಟಿ ರೂ.ಗಳನ್ನು ಭರಿಸಲಾಗಿದೆ.
• ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (PACS) ಕೇಂದ್ರ ಪುರಸ್ಕೃತ ಗಣಕೀಕರಣ ಯೋಜನೆಯಡಿ 3,863 PACS ಗಳು Go-Live ಆಗಿದ್ದು, Online ಸೇವೆಯನ್ನು ಒದಗಿಸುತ್ತಿವೆ. ಪ್ರಸಕ್ತ ಸಾಲಿನಲ್ಲಿ ಬಾಕಿ ಉಳಿದ 1,628 ಸಹಕಾರ ಸಂಘಗಳನ್ನು ಸಂಪೂರ್ಣವಾಗಿ ಗಣಕೀಕರಣಗೊಳಿಸಲು ಉದ್ದೇಶಿಸಲಾಗಿದೆ.
• ಸಹಕಾರ ಸಂಘಗಳ ನಿಬಂಧಕರ ಹಂತದಲ್ಲಿ ವಿವಿಧಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ ಒದಗಿಸಲು ದತ್ತಾಂಶವನ್ನು ಆನ್ಲೈನ್ನಲ್ಲಿ ನಿರ್ವಹಿಸಲು ಕ್ರಮವಹಿಸಲಾಗುವುದು.
• ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆದ ಮೆಕ್ಕೆಜೋಳದ ಬೆಲೆ ಕುಸಿತದಿಂದ ಸಂಕಷ್ಟಕ್ಕೀಡಾದ ರೈತರ ಹಿತ ಕಾಪಾಡಲು ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿಮೆಕ್ಕೆಜೋಳ ಖರೀದಿಸಲು ನಮ್ಮ ಸರ್ಕಾರ 100 ಕೋಟಿ ರೂ.ಗಳ ಆರ್ಥಿಕ ನೆರವು ನೀಡಿದೆ.
• ಕರ್ನಾಟಕ ರಾಜ್ಯ ಉಗ್ರಾಣ ನಿಗಮವನ್ನು ಆರ್ಥಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ನಿಗಮದ ಅನುಪಯುಕ್ತ ಆಸ್ತಿಗಳನ್ನು ನಗದೀಕರಣಗೊಳಿಸಲು ಉದ್ದೇಶಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಮೈಸೂರು (ಬಂಬೂ ಬಜಾರ್) ಮತ್ತು ಹುಬ್ಬಳ್ಳಿ (ಕಾಟನ್ ಮಾರ್ಕೆಟ್) ಕೇಂದ್ರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಲಾಗುವುದು.
• ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಕಾರ್ಯಚಟುವಟಿಕೆಗಳನ್ನು ಸಂಪೂರ್ಣ digitize ಮಾಡಲು 10 ಕೋಟಿ ರೂ. ವೆಚ್ಚದಲ್ಲಿ
ERP (Enterprise Resource Planning) ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು.
• ನಬಾರ್ಡ್ ಸಂಸ್ಥೆಯ ಸಲಹೆಯಂತೆ ಪ್ರತಿ ಜಿಲ್ಲೆಯಲ್ಲಿ ʻಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ʼ ಸ್ಥಾಪಿಸಲು RBI ಗೆ ಪ್ರಸ್ತಾವನೆ ಸಲ್ಲಿಸಲಾಗುವುದು.

ಜಲಸಂಪನ್ಮೂಲ

• ಕರ್ನಾಟಕದ ಬಹು ನಿರೀಕ್ಷಿತ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ, ತಮಿಳುನಾಡು ರಾಜ್ಯವು ಮಾನ್ಯ ಸರ್ವೋಚ್ಛ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ತಕರಾರು ಅರ್ಜಿಗಳು ವಜಾಗೊಂಡಿರುವುದು ಕರ್ನಾಟಕಕ್ಕೆ ಮಹತ್ವದ ಕಾನೂನು ಜಯವಾಗಿದೆ. ಈ ತೀರ್ಪಿನ ಹಿನ್ನೆಲೆಯಲ್ಲಿ, ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಯನ್ನು (DPR) ಶೀಘ್ರವೇ ಸಿದ್ಧಪಡಿಸಿ ಅನುಮೋದನೆಗೆ ಹಾಗೂ ಅರಣ್ಯ ಪ್ರದೇಶದ ಬಳಕೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.
• ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲನೇ ಹಂತದ ಏತ ನೀರಾವರಿ ಕಾಮಗಾರಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗಿದೆ. 2ನೇ ಹಂತದಲ್ಲಿ ಬಾಕಿ ಇರುವ 18.73 ಕಿ.ಮೀ ಉದ್ದದ ಕಾಲುವೆ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲಾಗುವುದು. ಹೆಚ್ಚುವರಿಯಾಗಿ ನೀರನ್ನು ಸಂಗ್ರಹಿಸಿ ಸದ್ಬಳಕೆ ಮಾಡಿಕೊಳ್ಳಲು ಕೊರಟಗೆರೆ ತಾಲ್ಲೂಕಿನ ವಡೇರಹಳ್ಳಿ ಸಮೀಪ 1.2 ಟಿ.ಎಂ.ಸಿ ಸಾಮರ್ಥ್ಯದ ಸಮತೋಲನಾ ಜಲಾಶಯವನ್ನು ನಿರ್ಮಿಸಲಾಗುವುದು.
• ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಗಳನ್ನು ಒದಗಿಸುವ ಬಗ್ಗೆ ಕೇಂದ್ರ ಸರ್ಕಾರದ 2023-24ರ ಆಯವ್ಯಯ ಭಾಷಣದಲ್ಲಿ ಘೋಷಿಸಿದ್ದರೂ ಸಹ ಇಲ್ಲಿಯವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ಕ್ರಮಗಳನ್ನು ಕೈಗೊಂಡಿರುವುದಿಲ್ಲ. ಆದರೂ, ರಾಜ್ಯ ಸರ್ಕಾರದ ವತಿಯಿಂದ ಈ ಯೋಜನೆಗೆ
11,343 ಕೋಟಿ ರೂ.ಗಳ ವೆಚ್ಚ ಭರಿಸಲಾಗಿದೆ. ಸುಮಾರು ಆರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಅಜ್ಜಂಪುರ ತಾಲ್ಲೂಕಿನ ಅಬ್ಬಿನಹೊಳಲು ಗ್ರಾಮದ ಭೂಸಮಸ್ಯೆಯನ್ನು ಬಗೆಹರಿಸಲಾಗಿದೆ. ಇದರಿಂದಾಗಿ 135 ಕಿ.ಮೀ ಉದ್ದದ ಚಿತ್ರದುರ್ಗ ಶಾಖಾ ಕಾಲುವೆ ಹಾಗೂ ಇದರಡಿ ಬರುವ ಫೀಡರ್ ಕಾಮಗಾರಿಗಳನ್ನು2027ನೇ ಸಾಲಿನಲ್ಲಿ ಪೂರ್ಣಗೊಳಿಸಿ 157 ಕೆರೆಗಳನ್ನು ತುಂಬಿಸಲಾಗುವುದು.

ಉತ್ತರ ಕರ್ನಾಟಕದ ಮಹತ್ವಾಕಾಂಕ್ಷಿ ಯೋಜನೆಯಾದ ತುಂಗಭದ್ರಾ ಅಣೆಕಟ್ಟಿನ ಶಿಥಿಲಗೊಂಡಿರುವ 33 ಗೇಟುಗಳನ್ನು ಬದಲಾಯಿಸಿ ಹೊಸ ಗೇಟುಗಳ ಅಳವಡಿಕೆಯನ್ನು ಮುಂಗಾರು ಪೂರ್ವದಲ್ಲಿ ಪೂರ್ಣಗೊಳಿಸಲಾಗುವುದು. ಮುಂದುವರೆದು, ತುಂಗಭದ್ರಾ ಜಲಾಶಯದಲ್ಲಿ ಹೂಳಿನ ಶೇಖರಣೆಯಿಂದ ನೀರಿನ ಸಂಗ್ರಹಣಾ ಸಾಮರ್ಥ್ಯದ ಕೊರತೆಯನ್ನು ನೀಗಿಸಲು ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮತೋಲನಾ ಜಲಾಶಯ ನಿರ್ಮಾಣ ಸೇರಿದಂತೆ ಇತರೆ ಪರ್ಯಾಯ ಮಾರ್ಗೋಪಾಯಗಳ ಕುರಿತು ಈಗಾಗಲೇ ಚಿಂತಿಸಲಾಗಿದೆ. ಇವುಗಳಲ್ಲಿ ಸಮಯೋಚಿತ ಪರ್ಯಾಯ ಮಾರ್ಗದ ಕುರಿತು ನೆರೆಯ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳೊಂದಿಗೆ ಸಮಾಲೋಚಿಸಿ ತುಂಗಭದ್ರಾ ಮಂಡಳಿಯ ಸಹಮತಿಯೊಂದಿಗೆ ಯೋಜನೆಯನ್ನು ಅನುಷ್ಠಾನಗೊಳಿಸಲು ತೀವ್ರತರವಾಗಿ ಪ್ರಯತ್ನಿಸಲಾಗುವುದು.

ಮಹದಾಯಿ ಕಣಿವೆಯ ಕಳಸಾ-ಬಂಡೂರಾ ನಾಲಾ ಯೋಜನೆಗಳಡಿ ಅರಣ್ಯ ತೀರುವಳಿ ಪಡೆಯಲು ರಾಜ್ಯ ಸರ್ಕಾರವು ಕೇಂದ್ರ ಪರಿಸರ ಸಚಿವಾಲಯ ಮತ್ತು ರಾಷ್ಟ್ರೀಯ ವನ್ಯಜೀವಿ ಮಂಡಳಿಯಲ್ಲಿ ಎರಡು ವರ್ಷಗಳಿಂದ ನಿರಂತರ ಪ್ರಯತ್ನಿಸಿದ್ದರೂ, ಈವರೆಗೆ ತೀರುವಳಿ ಲಭಿಸಿರುವುದಿಲ್ಲ. ಈ ಯೋಜನೆಗಳಿಗೆ ಈಗಾಗಲೇ ಗುತ್ತಿಗೆ ವಹಿಸಲಾಗಿದ್ದು, ಕೇಂದ್ರ ಸರ್ಕಾರದಿಂದ ಅರಣ್ಯ ತೀರುವಳಿ ದೊರೆತ ಕೂಡಲೇ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. ಈ ವಿಳಂಬದಿಂದ ರಾಜ್ಯ ಸರ್ಕಾರದ ಹೊರೆ ಹೆಚ್ಚಾಗುತ್ತಿದೆ.

ಚಾಮರಾಜನಗರದ ಹನೂರು ತಾಲ್ಲೂಕಿನಲ್ಲಿ ಅಂತರ್ಜಲ ಹೆಚ್ಚಿಸಿ ಕುಡಿಯುವ ನೀರು ಹಾಗೂ 12 ಸಾವಿರ ಎಕರೆ ಬಾಧಿತ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಒದಗಿಸಲು ಉಡುತೊರೆಹಳ್ಳ ಯೋಜನೆಯನ್ನು 490 ಕೋಟಿ ರೂ. ಮೊತ್ತದಲ್ಲಿ ಕೈಗೆತ್ತಿಕೊಳ್ಳಲಾಗುವುದು.ವಿಜಯಪುರ ಜಿಲ್ಲೆಯ ಬಾಬಾ ನಗರದಲ್ಲಿ 0.67 ಟಿ.ಎಂ.ಸಿ ಸಾಮರ್ಥ್ಯದ ಸಂಗ್ರಹಣಾ ಜಲಾಶಯವನ್ನು ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ನಿರ್ಮಿಸಲು ತಾತ್ವಿಕ ಅನುಮೋದನೆ ನೀಡಲಾಗುವುದು.

ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯ ನಾಲ್ಕು ನಿಗಮಗಳಡಿ ಪೂರ್ಣಗೊಳ್ಳುವ ಹಂತದಲ್ಲಿನ 12 ನೀರಾವರಿ ಯೋಜನೆಗಳು,ಕೆರೆ ತುಂಬುವ ಯೋಜನೆಗಳು ಮತ್ತು ಮೂರು ಆಧುನೀಕರಣ ಯೋಜನೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಿ 1.16 ಲಕ್ಷ ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು. ಯೋಜನೆಗಳ ಪಟ್ಟಿಯನ್ನು ಅನುಬಂಧ-೧ರಲ್ಲಿ ಲಗತ್ತಿಸಿದೆ.

ಶಾಲಾ ಶಿಕ್ಷಣ

2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ 184 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಹಾಗೂ 50 ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲ ಕಲ್ಪಿಸಲಾಗಿದೆ.

ಖಾಸಗಿ ಶಾಲೆಗಳ ಮಾನ್ಯತೆ ಪಡೆಯುವ ಹಾಗೂ ನವೀಕರಿಸುವ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕ ಅರ್ಜಿ
ಹಾಗೂ ದಾಖಲೆಗಳನ್ನು ಸಲ್ಲಿಸಲು ಅನುಮತಿಸಿ ಸರಳೀಕರಣಗೊಳಿಸಲಾಗಿದೆ.

  1. 2025–26ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುವ ವಿವಿಧ ಸವಲತ್ತುಗಳನ್ನು ಮೊದಲ ಬಾರಿಗೆ ನೇರ ನಗದು ವರ್ಗಾವಣೆ (DBT) ಮಾಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಗ್ರಾಮೀಣ ಪತ್ರ, ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರಗಳನ್ನು ಆನ್-ಲೈನ್ ಮೂಲಕ ವಿತರಿಸಲಾಗಿದೆ.
  2. ʻಉತ್ತಮ ಕಲಿಕೆ ಉಜ್ವಲ ಭವಿಷ್ಯʼ ಎಂಬ ಘೋಷವಾಕ್ಯದೊಂದಿಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ADB ನೆರವಿನೊಂದಿಗೆ 500 ಶಾಲೆಗಳು, KKRDB ನಿಧಿಯಿಂದ
    200 ಶಾಲೆಗಳು ಹಾಗೂ KMERC ನಿಧಿಯಿಂದ 100 ಶಾಲೆಗಳು ಒಟ್ಟಾರೆ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು. ಇದಕ್ಕಾಗಿ ಒಟ್ಟಾರೆ 3,900 ಕೋಟಿ ರೂ.ಗಳನ್ನು ಮುಂದಿನ ಮೂರು ವರ್ಷಗಳಲ್ಲಿ ವೆಚ್ಚ ಮಾಡಲಾಗುವುದು.
  3. ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯ ವೇಳೆ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿನ (KPS) ಶಿಕ್ಷಕರ ಹುದ್ದೆಗಳನ್ನು ಮಹತ್ವದ ಹುದ್ದೆಗಳೆಂದು ಪರಿಗಣಿಸಿ ಮೊದಲ ಆದ್ಯತೆಯಲ್ಲಿ ಭರ್ತಿ ಮಾಡಲಾಗುವುದು ಹಾಗೂ ಸದರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶಿಕ್ಷಕರ ನೇಮಕಾತಿ ಮಾಡಲು ಆದ್ಯತೆ ನೀಡಲಾಗುವುದು.
  4. ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ವಿಶೇಷವಾಗಿ ದಾಖಲಾತಿ ಪ್ರಮಾಣ ಮತ್ತು ಕಲಿಕೆಯ ಫಲಿತಾಂಶಗಳನ್ನು ಹೆಚ್ಚಿಸಲು
    ನಮ್ಮ ಸರ್ಕಾರ ಬದ್ಧವಾಗಿದೆ. ಈಗಾಗಲೇ 1 ರಿಂದ 10ನೇ ತರಗತಿಯವರೆಗೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ
    ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲಾಗುತ್ತಿದೆ. 2026-27ನೇ ಸಾಲಿನಿಂದ ವಿದ್ಯಾವಿಕಾಸ ಯೋಜನೆಯಡಿ ಪೂರ್ವ
    ಪ್ರಾಥಮಿಕ ವಿದ್ಯಾರ್ಥಿಗಳಿಗೆ ಚಟುವಟಿಕೆ ಪುಸ್ತಕಗಳನ್ನು,
    1 ರಿಂದ 10ನೇ ತರಗತಿಯವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳನ್ನು ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡಲಾಗುವುದು.
  5. ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ಕೊಠಡಿ ನಿರ್ಮಾಣ ಮತ್ತು ಕೊಠಡಿಗಳ ದುರಸ್ತಿ ಕಾಮಗಾರಿಗಳಿಗೆ 565 ಕೋಟಿ ರೂ.ಗಳು, ಶೌಚಾಲಯ ನಿರ್ಮಾಣಕ್ಕಾಗಿ 75 ಕೋಟಿ ರೂ.ಗಳು ಹಾಗೂ ಶಾಲೆಗಳಿಗೆ ಪೀಠೋಪಕರಣಗಳನ್ನು ಖರೀದಿಸಲು 25 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.
  6. ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ 125 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು. ಸದರಿ ಅನುದಾನವನ್ನು ಶಾಲಾ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ ನೇರವಾಗಿ ವರ್ಗಾಯಿಸಲಾಗುವುದು.
  7. ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ತರಗತಿಗಳನ್ನು ಜಾರಿಗೊಳಿಸಲು ಪ್ರಾಥಮಿಕ ಶಾಲಾ ಶಿಕ್ಷಕರ ಸಾಮರ್ಥ್ಯ ವೃದ್ಧಿಗಾಗಿ ಇಂಗ್ಲಿಷ್ ಭಾಷಾ ತರಬೇತಿ ಕಾರ್ಯಕ್ರಮವನ್ನು 24 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು.
  8. IIT ಧಾರವಾಡದ ಸಹಯೋಗದೊಂದಿಗೆ 8 ರಿಂದ 12ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು
    12.28 ಲಕ್ಷ ವಿದ್ಯಾರ್ಥಿಗಳಿಗೆ ಅಂದಾಜು ಐದು ಕೋಟಿ ರೂ.ಗಳ ವೆಚ್ಚದಲ್ಲಿ ಕಲಿಕಾ ಪ್ರಕ್ರಿಯೆಯಲ್ಲಿ AI ತಂತ್ರಜ್ಞಾನವನ್ನು ಅಳವಡಿಸಿಕೊಂಡು ವೈಯಕ್ತಿಕ ಸ್ವಯಂ-ಕಲಿಕಾ ಡಿಜಿಟಲ್ ಟ್ಯೂಟರ್ ಸೌಲಭ್ಯವನ್ನು ಒದಗಿಸಲಾಗುವುದು.
  9. 2026-27ನೇ ಸಾಲಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.
  10. ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 BRC ಕೇಂದ್ರಗಳಲ್ಲಿ ಪ್ರತಿ ಕೇಂದ್ರಕ್ಕೆ ಒಬ್ಬರು ಅರ್ಹ ಮಾನಸಿಕ ಆರೋಗ್ಯ ಸಲಹೆಗಾರರನ್ನು ನೇಮಿಸಲಾಗುವುದು.
  11. ವಿಜಯಪುರದ ಸೈನಿಕ ಶಾಲೆಯ ಹಾಸ್ಟೆಲ್ ಕಟ್ಟಡಗಳನ್ನು ಹಂತ ಹಂತವಾಗಿ ಪುನರ್ ನಿರ್ಮಿಸಲು ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ.ಗಳನ್ನು ಒದಗಿಸಲಾಗುವುದು.
  12. ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡ ಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ
    16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲಾಗುವುದು.
  13. ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ
    ರೂಪಿಸುವ ಸ್ಥಳವಾಗಿರುವ ಶಾಲಾ-ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ, ಕಠಿಣ ನಿಯಮ ಹಾಗೂ ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗುವುದು.
  14. ಉನ್ನತ ಶಿಕ್ಷಣ
  15. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಪಾಲಿಟೆಕ್ನಿಕ್ಗಳ ಬಲವರ್ಧನೆ, ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಸಲುವಾಗಿ ADB ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ
    ʻಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆʼ ಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು 11 ಪಾಲಿಟೆಕ್ನಿಕ್ಗಳನ್ನು ಮಾದರಿ ಸಂಸ್ಥೆಗಳನ್ನಾಗಿ ಅಭಿವೃದ್ಧಿಗೊಳಿಸಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಮತ್ತು ಸ್ಟಾರ್ಟ್-ಅಪ್ ಸಂಸ್ಕೃತಿಯನ್ನು ಪ್ರೋತ್ಸಾಹಿಸಲು ADB ನೆರವಿನೊಂದಿಗೆ
    9 ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
  16. ಹಿಂದಿನ ಸಾಲಿನಲ್ಲಿ ಘೋಷಿಸಿದಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು, ಪಾಲಿಟೆಕ್ನಿಕ್ಗಳು ಮತ್ತು ಯುವಿಸಿಇ ವಿಶ್ವವಿದ್ಯಾಲಯದಲ್ಲಿ ಒಟ್ಟಾರೆ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿಸಲಾಗಿದೆ.
    ಸದರಿ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು. ಮುಂದುವರೆದು, ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 1,000 ಬೋಧಕ ಹುದ್ದೆಗಳನ್ನು ತರ್ಕಬದ್ಧಗೊಳಿಸಿ ಹಂತ ಹಂತವಾಗಿ ಭರ್ತಿ ಮಾಡಲಾಗುವುದು.
  17. ಶೇ.50ಕ್ಕಿಂತ ಹೆಚ್ಚು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿರುವ 25 ಸರ್ಕಾರಿ ಪದವಿ ಕಾಲೇಜು, ಮೂರು ಪಾಲಿಟೆಕ್ನಿಕ್ ಹಾಗೂ ಮೂರು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ತಲಾ ಒಂದು ಕೋಟಿ ರೂ.ಗಳಂತೆ ಒಟ್ಟು 31 ಕೋಟಿ ರೂ.ಗಳ ವೆಚ್ಚದಲ್ಲಿ ವಿದ್ಯಾರ್ಥಿನಿಯರಿಗೆ ಅವಶ್ಯವಿರುವ ಮೂಲ ಸೌಲಭ್ಯಗಳನ್ನು ಒದಗಿಸಲಾಗುವುದು.
  18. 1,000ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಒಟ್ಟು 50 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ ಪೀಠೋಪಕರಣಗಳು ಹಾಗೂ ಕಟ್ಟಡಗಳ ದುರಸ್ತಿ/ನವೀಕರಣ ಕಾಮಗಾರಿಗಳನ್ನು 100 ಕೋಟಿ ರೂ.ಗಳ ವೆಚ್ಚದಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಕೈಗೊಳ್ಳಲಾಗುವುದು.
  19. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿರುವ 75 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, 23 ಪಾಲಿಟೆಕ್ನಿಕ್ ಹಾಗೂ ಐದು ಇಂಜಿನಿಯರಿಂಗ್ ಕಾಲೇಜುಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಒದಗಿಸಲಾಗುವುದು.
  20. ವಿಜಯಪುರ ಜಿಲ್ಲೆಯ ಚಡಚಣ, ಬೆಳಗಾವಿ ಗ್ರಾಮಾಂತರ ಹಾಗೂ ಮೈಸೂರು ನಗರದ ನರಸಿಂಹರಾಜ ಕ್ಷೇತ್ರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಸ್ಥಾಪಿಸಲಾಗುವುದು. ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ KKRDB macro ಅನುದಾನದಿಂದ ಪ್ರಥಮ ದರ್ಜೆ ಕಾಲೇಜನ್ನು ಸ್ಥಾಪಿಸಲಾಗುವುದು.
  21. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಕಲಬುರಗಿ ಜಿಲ್ಲೆಯ ನಿಂಬರಗಾ, ಯಾದಗಿರಿ ಜಿಲ್ಲೆಯ ಕಕ್ಕೇರಾ, ರಾಯಚೂರು ಜಿಲ್ಲೆಯ ಅಂಬಾಮಠ ಮತ್ತು ಕೊಪ್ಪಳ ಜಿಲ್ಲೆಯ ಬೇವೂರು ಗ್ರಾಮಗಳಲ್ಲಿ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜುಗಳನ್ನು ತಲಾ 18 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.
  22. ಸರ್ಕಾರದ 11 ಪಾಲಿಟೆಕ್ನಿಕ್ಗಳಲ್ಲಿ ಹಾಗೂ ಚಿತ್ರದುರ್ಗ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಸ್ತುತ ಹೆಚ್ಚಿನ ಬೇಡಿಕೆ ಹಾಗೂ ಉದ್ಯೋಗಾವಕಾಶವಿರುವ ಕೋರ್ಸ್ಗಳಾದ AI, ಮಷಿನ್ ಲರ್ನಿಂಗ್, ಕ್ಲೌಡ್ ಕಂಪ್ಯೂಟಿಂಗ್, ಮೈನಿಂಗ್ ಇಂಜಿನಿಯರಿಂಗ್, ಆಟೋಮೇಷನ್ ಇಂಜಿನಿಯರಿಂಗ್ ಮುಂತಾದ 15 ಹೊಸ ಕೋರ್ಸ್ಗಳನ್ನು ಪ್ರಾರಂಭಿಸಲಾಗುವುದು.
  23. AnitaB.org India ಹಾಗೂ ರಾಜ್ಯ ಸರ್ಕಾರದ ಪಾಲುದಾರಿಕೆಯೊಂದಿಗೆ ವೃತ್ತಿ ಜೀವನದ ಆರಂಭಿಕ ಹಂತದಲ್ಲಿರುವ ವಿಜ್ಞಾನ, ತಾಂತ್ರಿಕ, ಗಣಿತ ಮತ್ತು ಇಂಜಿನಿಯರಿಂಗ್ (STEM) ವಿಭಾಗಗಳಲ್ಲಿನ ಆಯ್ದ 3,000 ಮಹಿಳಾ ಪದವೀಧರರಿಗೆ ಕೌಶಲ್ಯಾಭಿವೃದ್ಧಿ/ವೃತ್ತಿನಿರತ ತರಬೇತಿಗಳನ್ನು ಒಟ್ಟು 13.50 ಕೋಟಿ ರೂ. ವೆಚ್ಚದಲ್ಲಿ ಜಾರಿಗೊಳಿಸಲಾಗುವುದು.
  24. ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವನ್ನು ಐಐಟಿ ಮಾದರಿಯಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರದ ವತಿಯಿಂದ ಈಗಾಗಲೇ
    100 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಪ್ರಸಕ್ತ ವರ್ಷದಲ್ಲಿಯೂ 100 ಕೋಟಿ ರೂ.ಗಳನ್ನು ಒದಗಿಸಲಾಗುವುದು.
  25. ಸರ್ಕಾರಿ ಶಾಲಾ ಕಾಲೇಜುಗಳಲ್ಲಿ 10 ಮತ್ತು 12ನೇ ತರಗತಿಗಳನ್ನು ವ್ಯಾಸಂಗ ಮಾಡಿ 2025-26ನೇ ಸಾಲಿನಿಂದ ಉನ್ನತ ಶಿಕ್ಷಣವನ್ನು ಮುಂದುವರೆಸುತ್ತಿರುವ 37,000 ವಿದ್ಯಾರ್ಥಿನಿಯರಿಗೆ ವಾರ್ಷಿಕ 30,000 ರೂ.ಗಳ ವಿದ್ಯಾರ್ಥಿ ವೇತನವನ್ನು ಅಜೀಂ ಪ್ರೇಮ್ಜಿ ಫೌಂಡೇಶನ್ ವತಿಯಿಂದ ಹಾಗೂ ಉಳಿದ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರದ ವತಿಯಿಂದ ʻದೀಪಿಕಾ ವಿದ್ಯಾರ್ಥಿ ವೇತನʼ ಯೋಜನೆಯಡಿ ನೀಡಲಾಗುತ್ತಿದೆ. ಇದನ್ನು ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಲಾಗುವುದು.
  26. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರುಗಳಿಗೆ 90 ದಿನಗಳ ಮಾತೃತ್ವ ರಜೆಯ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗೊಳಿಸಲಾಗುವುದು.
  27. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ, ಹೆಸರಘಟ್ಟ ಇಲ್ಲಿ ನಡೆಸಲಾಗುತ್ತಿರುವ ಸೌಂಡ್ ರೆಕಾರ್ಡಿಂಗ್ ಮತ್ತು ಇಂಜಿನಿಯರಿಂಗ್ ಹಾಗೂ ಸಿನಿಮಾಟೋಗ್ರಫಿ ಕೋರ್ಸುಗಳಿಗೆ ಅಗತ್ಯವಿರುವ ಆಧುನಿಕ ಉಪಕರಣಗಳನ್ನು ಒದಗಿಸಲಾಗುವುದು.
  28. ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು.
  29. ವಿದ್ಯಾರ್ಥಿಗಳಲ್ಲಿ ನಾಯಕತ್ವ, ಹೊಣೆಗಾರಿಕೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಳೆಸಲು ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ನಮ್ಮ ಸರ್ಕಾರವು ಉದ್ದೇಶಿಸಿದೆ.
  30. ಧಾರವಾಡ ಮತ್ತು ಬೆಂಗಳೂರಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗಾಗಿ ತಲಾ 10 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲ್ ಗ್ರಂಥಾಲಯ ಹಾಗೂ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲಾಗುವುದು.
  31. ಕರ್ನಾಟಕದಲ್ಲಿ NCCಯನ್ನು ಉತ್ತೇಜಿಸುವ ಸಲುವಾಗಿ ಪ್ರಸ್ತುತ ಇರುವ 96,000 NCC ಕೆಡೆಟ್ಗಳ ಕಾರ್ಯಬಲವನ್ನು ಮುಂದಿನ ಎರಡು ವರ್ಷಗಳಲ್ಲಿ 10,000ಗಳಷ್ಟು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.
  32. ಬಸವಕಲ್ಯಾಣದಲ್ಲಿ ಖಾಸಗಿ ವಚನ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು 25 ಎಕರೆ ಜಮೀನನ್ನು ನೀಡಲಾಗುವುದು.
    ಆರೋಗ್ಯ ಮತ್ತು ಕುಟುಂಬ ಕಲ್ಯಾಣ
  33. ಕಳೆದ ವರ್ಷ ಪ್ರಾರಂಭಿಸಲಾದ, ತಡೆಗಟ್ಟಬಹುದಾದ ತಾಯಂದಿರ ಮರಣವನ್ನು ಶೂನ್ಯಕ್ಕೆ ಇಳಿಸುವ ಅಭಿಯಾನದ ಪರಿಣಾಮವಾಗಿ ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣವು ಶೇ.24ರಷ್ಟು ಇಳಿಕೆಯಾಗಿರುತ್ತದೆ. ಈ ಅಭಿಯಾನದಡಿ ಪ್ರತಿ ತಾಯಂದಿರ ಮರಣವನ್ನು ತಜ್ಞರ ಸಮಿತಿಯಿಂದ ವಿಶ್ಲೇಷಿಸಿ ಗುಣಾತ್ಮಕವಾದ ಗರ್ಭಿಣಿ ಮತ್ತು ಪ್ರಸವ ಸೇವೆಗಳನ್ನು ನೀಡಲಾಗುತ್ತಿದೆ. ಹೆರಿಗೆ ಆಸ್ಪತ್ರೆಗಳಿಗೆ ಮಾರ್ಗದರ್ಶನ, ಹೆಚ್ಚಿನ ಮಾನವ ಸಂಪನ್ಮೂಲ ಮತ್ತು ಆಧುನಿಕ ಉಪಕರಣಗಳನ್ನು ನೀಡಲಾಗುತ್ತಿದೆ.
  34. ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಯೋಜನೆಯಡಿ ಶಾಲಾ ಕಾಲೇಜುಗಳ 52 ಲಕ್ಷ ಮಕ್ಕಳಿಗೆ ರಕ್ತಹೀನತೆ ತಪಾಸಣೆ ನಡೆಸಲಾಗಿದೆ. ರಕ್ತಹೀನತೆ ಕಂಡುಬಂದಿರುವ 11.7 ಲಕ್ಷ ಮಕ್ಕಳಿಗೆ ಉಚಿತ ಚಿಕಿತ್ಸೆ ನೀಡಲಾಗಿದ್ದು, ಇದರಲ್ಲಿ 3.7 ಲಕ್ಷ ಮಕ್ಕಳು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಉಳಿದ ಮಕ್ಕಳಿಗೆ ಚಿಕಿತ್ಸೆ ಮತ್ತು ಅನುಸರಣೆ ಮುಂದುವರೆಸಲಾಗಿದೆ.
  35. ಹೃದಯದತುರ್ತುಪರಿಸ್ಥಿತಿಗಳನ್ನುನಿರ್ವಹಿಸಲುST-Elevated Myocardial Infarction (STEMI)ಕಾರ್ಯಕ್ರಮದಡಿ
    ಒಟ್ಟು 9.4 ಲಕ್ಷ ECG ಗಳನ್ನು ಮಾಡಲಾಗಿದ್ದು, 13,933 ತೀವ್ರ ಹೃದಯಾಘಾತದ ರೋಗಿಗಳನ್ನು ಪತ್ತೆ ಹಚ್ಚಿ ಇವರಲ್ಲಿ
    7,668 ರೋಗಿಗಳಿಗೆ ಚಿಕಿತ್ಸೆಯನ್ನು ನೀಡಲಾಗಿದೆ.
  36. ಕಳೆದ ಮೂರು ವರ್ಷಗಳ ಅವಧಿಯಲ್ಲಿ ವಿವಿಧ ಯೋಜನೆಗಳಡಿ ಕೈಗೊಂಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಮತ್ತು ತಾಲ್ಲೂಕು ಆಸ್ಪತ್ರೆಗಳ ನಿರ್ಮಾಣ ಕಾಮಗಾರಿಗಳನ್ನು ಕ್ಷಿಪ್ರಗತಿಯಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗುವುದು. ಆರೋಗ್ಯ ಇಲಾಖೆಯಲ್ಲಿನ ಮೂಲಸೌಕರ್ಯ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿನಲ್ಲಿ 900 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.
  37. ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಹಾಲಿ ಚಾಲ್ತಿಯಲ್ಲಿರುವ 2018ರ ಚಿಕಿತ್ಸಾ ಪ್ಯಾಕೇಜ್ ದರಗಳನ್ನು ಪರಿಷ್ಕರಿಸಿ ಹೆಚ್.ಬಿ.ಪಿ.-2022 ಪ್ಯಾಕೇಜ್ ದರಗಳನ್ನು ಜಾರಿಗೆ ತರಲು ತೀರ್ಮಾನಿಸಿದೆ. ಇದರಿಂದ ಬಡರೋಗಿಗಳಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೌಲಭ್ಯ ಸಿಗಲಿದೆ. ಇದಕ್ಕಾಗಿ 400 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಒದಗಿಸಲಾಗುವುದು. ಸದರಿ ಯೋಜನೆಯನ್ನು ಯಶಸ್ವಿನಿ, ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ
  38. ಕಲ್ಯಾಣ ಮಂಡಳಿ, ಕಾರ್ಮಿಕ
    ರಾಜ್ಯ ವಿಮಾ ಯೋಜನೆ ಮತ್ತು ಅನ್ವಯಿಸುವ ಇತರ ಯೋಜನೆಗಳ ಅನುದಾನವನ್ನು ಒಗ್ಗೂಡಿಸುವ ಮೂಲಕ ಅನುಷ್ಠಾನಗೊಳಿಸಲಾಗುವುದು.
  39. ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಸಮಗ್ರ ಆಘಾತ ಆರೈಕೆ (Trauma Care) ಸೇವೆಗಳನ್ನು ಒದಗಿಸಲು ತುರ್ತು ಚಿಕಿತ್ಸಾ ವಿಭಾಗ, ಶಸ್ತ್ರಚಿಕಿತ್ಸಾ ಕೊಠಡಿ ಮತ್ತು ಐಸಿಯುಗಳಿಗೆ ವೈದ್ಯಕೀಯ ಉಪಕರಣಗಳು ಮತ್ತು ಸಾಧನಗಳನ್ನು ಹಂತ ಹಂತವಾಗಿ ಪೂರೈಸುವ ಮೂಲಕ ಮೇಲ್ದರ್ಜೆಗೇರಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 45 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.
  40. ತೀವ್ರತರವಾದ ಅಪೌಷ್ಟಿಕತೆಯನ್ನು (Severe Acute Malnutrition) ಹೊಂದಿರುವ ಮಕ್ಕಳಿಗೆ ವೈದ್ಯಕೀಯ
    ಮತ್ತು ಪೌಷ್ಟಿಕಾಂಶದ ಚಿಕಿತ್ಸೆ ನೀಡಲು ಈಗಾಗಲೇ
    86 ತಾಲ್ಲೂಕುಗಳಲ್ಲಿ ಪೌಷ್ಟಿಕ ಪುನಃಶ್ಚೇತನ ಕೇಂದ್ರಗಳು (NRC) ಕಾರ್ಯನಿರ್ವಹಿಸುತ್ತಿದ್ದು, ಇದನ್ನು ಉಳಿದ 63 ತಾಲ್ಲೂಕುಗಳಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಆರು ಕೋಟಿ ರೂ.ಗಳನ್ನು ಒದಗಿಸಲಾಗುವುದು.
  41. ಕಡಿಮೆ ಜನನ ತೂಕದ ಹಾಗೂ ಅನಾರೋಗ್ಯ ಪೀಡಿತ ನವಜಾತ ಶಿಶುಗಳಿಗೆ ಅಗತ್ಯವಿರುವ ವಿಶೇಷ ಔಷಧೋಪಚಾರ, ಸಮಗ್ರ ನವಜಾತ ಶಿಶು ಆರೈಕೆ ಸೌಲಭ್ಯಗಳು ಹಾಗೂ ಪ್ರಸವಪೂರ್ವ ಸೇವೆಗಳನ್ನು ಮತ್ತಷ್ಟು ಬಲಪಡಿಸಲಾಗುವುದು. ಈ ಕಾರ್ಯಕ್ರಮದ ಅನುಷ್ಠಾನಕ್ಕಾಗಿ 10 ಕೋಟಿ ರೂ.ಗಳನ್ನು ಒದಗಿಸಲಾಗುವುದು.
  42. ಟೈಪ್-1 ಮಧುಮೇಹದಿಂದ (Type-1 Diabetes) ಬಳಲುತ್ತಿರುವ 18 ವರ್ಷ ವಯಸ್ಸಿನವರೆಗಿನ ಮಕ್ಕಳ ಆರೋಗ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಉಚಿತ ಇನ್ಸುಲಿನ್ ಪೆನ್ಗಳನ್ನು ನೀಡಲಾಗುವುದು.
  43. ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರೋಗ್ಯ ಕ್ಷೇತ್ರವನ್ನು ಬಲವರ್ಧನೆಗೊಳಿಸಲು KKRDB ವಾರ್ಷಿಕ ಸ್ಥಳೀಯ ಯೋಜನೆಯಲ್ಲಿ (micro plan) ಆದ್ಯತೆ ಮೇರೆಗೆ ಅನುದಾನವನ್ನು ಮೀಸಲಿರಿಸಲಾಗುವುದು.
  44. ಗಣಿಬಾಧಿತ ಜಿಲ್ಲೆಗಳಾದ ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಮತ್ತು ತುಮಕೂರಿನ ಎಲ್ಲಾ ತಾಲ್ಲೂಕುಗಳಲ್ಲಿ ಸಮಗ್ರ ಆರೋಗ್ಯ ಸೇವೆಗಳನ್ನು KMERC ಅನುದಾನದಡಿಯಲ್ಲಿ ವಿಸ್ತರಿಸಲಾಗುವುದು.
  45. ಗಂಭೀರ, ದೀರ್ಘಕಾಲೀನ ಹಾಗೂ ಮಾರಣಾಂತಿಕ ಕಾಯಿಲೆಗಳೊಂದಿಗೆ ಬದುಕುತ್ತಿರುವ ರೋಗಿಗಳಿಗೆ ಕೇರಳ ಮಾದರಿಯಲ್ಲಿ ಗೃಹಾಧಾರಿತ ಉಪಶಮನ ಆರೈಕೆಯನ್ನುPallium India ಸಂಸ್ಥೆಯ ಸಹಯೋಗದೊಂದಿಗೆನೀಡಲಾಗುವುದು.
  46. ರಾಜ್ಯದಲ್ಲಿ ಬೇಡಿಕೆ ಇರುವ 50 ಕೇಂದ್ರಗಳಲ್ಲಿ 150 ಹಾಸಿಗೆ ಸಾಮರ್ಥ್ಯ ಹೆಚ್ಚಿಸುವ ಮೂಲಕ ವಾರ್ಷಿಕವಾಗಿ 1.35 ಲಕ್ಷ ಡಯಾಲಿಸಿಸ್ ಸೇವೆಗಳನ್ನು ಒದಗಿಸಲಾಗುವುದು. ಇದಕ್ಕಾಗಿ
    20 ಕೋಟಿ ರೂ. ಅನುದಾನವನ್ನು ಮೀಸಲಿರಿಸಲಾಗಿದೆ.
  47. ದಾವಣಗೆರೆ ತಾಲ್ಲೂಕಿನ ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಿಸಲಾಗುವುದು.
  48. ಜಿಲ್ಲಾ ಆರೋಗ್ಯ ಅಧಿಕಾರಿ (DHO), ಜಿಲ್ಲಾ ಶಸ್ತ್ರಚಿಕಿತ್ಸಕರು (DS) ಇತ್ಯಾದಿ ಆಡಳಿತಾತ್ಮಕ ಹುದ್ದೆಗಳಿಗೆ ಅಧಿಕಾರಿಗಳ ನೇಮಕಾತಿಯಲ್ಲಿ ವಸ್ತುನಿಷ್ಠತೆಯನ್ನು ತರುವ ಮೂಲಕಸಾರ್ವಜನಿಕ ಆರೋಗ್ಯ ವೃಂದವನ್ನು (Public Health Cadre) ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುವುದು.
  49. ಡಿಜಿಟಲ್ ಆರೋಗ್ಯ ಕಾರ್ಯಕ್ರಮದಡಿ ಕೆಳಕಂಡ ಉಪಕ್ರಮಗಳನ್ನು ಕೈಗೊಳ್ಳಲಾಗುವುದು:
  50. ʻಸಮಸ್ತʼ ಮೊಬೈಲ್ ಅಪ್ಲಿಕೇಶನ್ ಮೂಲಕ ಆರೋಗ್ಯ ಇಲಾಖೆಯ ಎಲ್ಲಾ ಕ್ಷೇತ್ರ ಸಿಬ್ಬಂದಿ ನಿರ್ವಹಿಸುತ್ತಿರುವ ವಹಿಗಳ ಡಿಜಿಟಲೀಕರಣ;
  51. ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಎಲ್ಲಾ ರೋಗಿಗಳಿಗೆ ಸಂಪೂರ್ಣ ಗಣಕೀಕೃತ ನೋಂದಣಿ, ಆರೋಗ್ಯ ದಾಖಲೆಗಳ ಡಿಜಿಟಲೀಕರಣ ಮತ್ತು ಯುಪಿಐ ಆಧಾರಿತ ಶುಲ್ಕ ಪಾವತಿ ವ್ಯವಸ್ಥೆ ಜಾರಿ;
  52. ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ಟೆಲಿ-ರೇಡಿಯಾಲಜಿ (Scanning) ಮತ್ತು ಟೆಲಿ-ಲೇಬರ್ ರೂಮ್ಗಳ (Smart Labour Room) ಅಳವಡಿಕೆ.
  53. ಇಸ್ಕಾನ್ ಮೂಲಕ ರೋಗಿಗಳಿಗೆ ಆಹಾರ ಪೂರೈಕೆಯ ಯಶಸ್ವಿ ಮಾದರಿಯನ್ನು ರಾಜ್ಯದ ಆಯ್ದ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ವಿಸ್ತರಿಸಲಾಗುವುದು.
  54. ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳ ಆಯ್ದ ಆಯುಷ್ ಆಸ್ಪತ್ರೆಗಳಲ್ಲಿ ಪಂಚಕರ್ಮ ಘಟಕಗಳನ್ನು ಸ್ವಾವಲಂಬಿ (self-sustaining)ಮಾದರಿಯಲ್ಲಿ ಸ್ಥಾಪಿಸಲಾಗುವುದು.
  55. ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು.
    ವೈದ್ಯಕೀಯ ಶಿಕ್ಷಣ
  56. ವೈದ್ಯಕೀಯ ಶಿಕ್ಷಣ ಇಲಾಖೆಯ ಮೂಲಸೌಕರ್ಯವನ್ನು ಇನ್ನಷ್ಟು ಸದೃಢಗೊಳಿಸಲು ಕೆಳಕಂಡ ಪ್ರಮುಖ ಉಪಕ್ರಮಗಳನ್ನು ತೆಗೆದುಕೊಳ್ಳಲಾಗಿರುತ್ತದೆ:-
  57. ಕಾರವಾರದಲ್ಲಿ 198 ಕೋಟಿ ರೂ. ವೆಚ್ಚದ 450 ಹಾಸಿಗೆ ಸಾಮರ್ಥ್ಯದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ರಾಯಚೂರಿನಲ್ಲಿ
    10 ಕೋಟಿ ರೂ. ವೆಚ್ಚದ ಟ್ರಾಮಾ ಕೇರ್ ಕೇಂದ್ರ ಮತ್ತು ಮೈಸೂರು ಹಾಗೂ ತುಮಕೂರಿನಲ್ಲಿ ೯೨ ಕೋಟಿ ರೂ. ವೆಚ್ಚದ
    ಪೆರಿಫೆರಲ್ ಕ್ಯಾನ್ಸರ್ ಕೇಂದ್ರಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ.
  58. ೨೩೬ ಕೋಟಿ ರೂ. ವೆಚ್ಚದ ಹುಬ್ಬಳ್ಳಿಯ ಜಯದೇವ
    ಹೃದ್ರೋಗ ಪ್ರಾದೇಶಿಕ ಕೇಂದ್ರದ ಕಟ್ಟಡವನ್ನು ಪ್ರಸಕ್ತ ಸಾಲಿನಲ್ಲಿ ಲೋಕಾರ್ಪಣೆಗೊಳಿಸಲಾಗುವುದು.
  59. ಬೆಂಗಳೂರಿನ ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆ ಆವರಣದಲ್ಲಿ ಅಜೀಂ ಪ್ರೇಮ್ಜಿ ಫೌಂಡೇಶನ್ ವತಿಯಿಂದ 1,000 ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಟರ್ಷಿಯರಿ ಆರೈಕೆ ಮತ್ತು ಅಂಗಾಂಗ ಕಸಿ
    ಆಸ್ಪತ್ರೆಯನ್ನು ನಿರ್ಮಾಣ ಮಾಡಲು ಒಡಂಬಡಿಕೆಯನ್ನು ಮಾಡಿಕೊಳ್ಳಲಾಗಿದೆ.
  60. 2026-೨೭ನೇ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ ಕಾಮಗಾರಿಗಳಿಗೆ 620 ಕೋಟಿ ರೂ.ಗಳ ಅನುದಾನವನ್ನು ಮತ್ತು ಉಪಕರಣಗಳ ಖರೀದಿಗಾಗಿ 220 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡಲಾಗಿದೆ.
  61. ಮೈಸೂರಿನ 400 ಹಾಸಿಗೆ ಸಾಮರ್ಥ್ಯದ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯನ್ನು 600 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ 180 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುವುದು.
  62. ಹಿಂದಿನ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು 300 ಹಾಸಿಗೆಯ ಆಸ್ಪತ್ರೆಯನ್ನು ನಿರ್ಮಿಸಲು ಅನುಮೋದಿಸಲಾಗಿರುತ್ತದೆ. ಅಲ್ಲದೆ, ಬಾಗಲಕೋಟೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಘಟಕ ಕಾಲೇಜನ್ನು ಸ್ಥಾಪಿಸಲು ಕ್ರಮವಹಿಸಲಾಗಿದೆ. ಸದರಿ ಕಾಲೇಜುಗಳ ಕಾರ್ಯಾಚರಣೆಗಾಗಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು.
  63. ವಿಜಯಪುರ ಮತ್ತು ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ವಿಸ್ತೃತ ಯೋಜನಾ ವರದಿ ತಯಾರಿಸಲಾಗುವುದು.
  64. ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು.
  65. ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ತೃತೀಯ ಹಂತದ ಕ್ಯಾನ್ಸರ್ ಆರೈಕೆ ಒದಗಿಸಲು ಕ್ಯಾನ್ಸರ್ ಆಸ್ಪತ್ರೆಯನ್ನು ಮುನಿರಾಬಾದ್-ಟಿ.ಬಿ.ಡ್ಯಾಂನಲ್ಲಿ ಸ್ಥಾಪಿಸಲಾಗುವುದು.
  66. ಬೆಂಗಳೂರಿನ ಗೋವಿಂದರಾಜನಗರದ ಬಿಬಿಎಂಪಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಕೇಂದ್ರವನ್ನು 15 ಕೋಟಿ ರೂ.ಗಳ ವೆಚ್ಚದಲ್ಲಿ
    ಗ್ರೇಟರ್ ಬೆಂಗಳೂರು ಪ್ರಾಧಿಕಾರದಸಹಯೋಗದೊಂದಿಗೆ ಸ್ಥಾಪಿಸಲಾಗುವುದು.
  67. ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆ ಮತ್ತು ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿಐ.ವಿ.ಎಫ್ ಕೇಂದ್ರಗಳನ್ನು ಸ್ಥಾಪಿಸಲು ತಲಾ ಒಂದು ಕೋಟಿ ರೂ. ನೀಡಲಾಗುವುದು.
  68. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು. ಬೆಂಗಳೂರು ವೈದ್ಯಕೀಯ ಕಾಲೇಜಿನ MBBS ಮತ್ತು BDS ವಿದ್ಯಾರ್ಥಿಗಳ ಬಾಲಕರ ಹಾಸ್ಟೆಲ್ ನಿರ್ಮಾಣಕ್ಕಾಗಿ 10 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.
  69. ಗೃಹಲಕ್ಷ್ಮಿ ಯೋಜನೆಯಡಿ ಇಲ್ಲಿಯವರೆಗೂ ಎಲ್ಲಾ ಅರ್ಹ ಫಲಾನುಭವಿಗಳಿಗೆ ಒಟ್ಟು 62,345ಕೋಟಿ ರೂ.ಗಳ
    ವೆಚ್ಚ ಭರಿಸಲಾಗಿದೆ. ಈ ಯೋಜನೆಯಡಿ 1.24 ಕೋಟಿ ಫಲಾನುಭವಿಗಳಿಗೆ ಯಶಸ್ವಿಯಾಗಿ ಧನಸಹಾಯ ಪಾವತಿಸಲಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಯಡಿ 28,608 ಕೋಟಿ ರೂ.ಗಳನ್ನು ಮೀಸಲಿರಿಸಿದೆ.
  70. ಮಹಿಳೆಯರು ಹಾಗೂ ಮಕ್ಕಳಿಗೆ ಸಂಕಷ್ಟದ ಸಂದರ್ಭದಲ್ಲಿ ತಕ್ಷಣದ ರಕ್ಷಣೆ ನೀಡುವ ಉದ್ದೇಶದಿಂದ ʻಅಕ್ಕಪಡೆ ಯೋಜನೆʼಯನ್ನು ಗೃಹ ಇಲಾಖೆಯ ಸಹಯೋಗದೊಂದಿಗೆ ಎಲ್ಲಾ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ.
  71. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 1,39,844 ಅಂಗನವಾಡಿ ಕಾರ್ಯಕರ್ತೆಯರು/ ಸಹಾಯಕಿಯರಿಗೆ ಹೆಚ್ಚುವರಿಯಾಗಿ ಒಂದು ಜೊತೆ ಸಮವಸ್ತ್ರವನ್ನು ವಿತರಿಸಲಾಗುವುದು.
  72. ಮಾಜಿ ದೇವದಾಸಿಯರ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು, ಪುನರ್ವಸತಿ ಕಲ್ಪಿಸಲು ಮತ್ತು ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ಹಿನ್ನೆಲೆಯಲ್ಲಿ ಅವರ ನಿಖರ
    ಮಾಹಿತಿ ಸಂಗ್ರಹಿಸುವುದಕ್ಕಾಗಿ ಸಮೀಕ್ಷೆಯನ್ನು ಕೈಗೊಳ್ಳಲಾಗಿದೆ.
    ಮಾಜಿ ದೇವದಾಸಿಯರ ಮಕ್ಕಳಿಗೆ ಉನ್ನತ ಶಿಕ್ಷಣದ ಅವಕಾಶಗಳನ್ನು ವಿಸ್ತರಿಸುವುದರ ಜೊತೆಗೆ ಹೆಣ್ಣುಮಕ್ಕಳಿಗೆ ಸ್ವಯಂ ಉದ್ಯೋಗ ಹಾಗೂ ವೈಯಕ್ತಿಕ ಆದಾಯೋತ್ಪನ್ನ ಚಟುವಟಿಕೆಗಳನ್ನು ಕೈಗೊಳ್ಳಲು ಅಗತ್ಯ ಆರ್ಥಿಕ ಸಹಾಯ ನೀಡುವ ಕಾರ್ಯಕ್ರಮವನ್ನು ರೂಪಿಸಿ ಜಾರಿಗೆ ತರಲು ಐದು ಕೋಟಿ ರೂ.ಗಳನ್ನು ಮೀಸಲಿಡಲಾಗುವುದು.
  73. ಮಾಜಿ ದೇವದಾಸಿಯರು, ಲಿಂಗತ್ವ ಅಲ್ಪಸಂಖ್ಯಾತರು, ಚೇತನ ಹಾಗೂ ಧನಶ್ರೀ ಯೋಜನೆಯ ಫಲಾನುಭವಿಗಳಿಗೆ ಆದಾಯೋತ್ಪನ್ನ ಚಟುವಟಿಕೆಗಳಿಗಾಗಿ ಪ್ರಸಕ್ತ ನೀಡಲಾಗುತ್ತಿರುವ 30,000 ರೂ.ಗಳ ಪ್ರೋತ್ಸಾಹಧನವನ್ನು 45,000 ರೂ.ಗಳಿಗೆ ಹೆಚ್ಚಿಸಲಾಗುವುದು.
  74. ಮಾದಕ ವ್ಯಸನಕ್ಕೆ ಒಳಗಾದ 18 ವರ್ಷದೊಳಗಿನ ಮಕ್ಕಳಿಗಾಗಿ ಪ್ರಾಯೋಗಿಕವಾಗಿ ಬೆಂಗಳೂರಿನ ನಿಮ್ಹಾನ್ಸ್ ಹಾಗೂ ಧಾರವಾಡದ ಡಿಮ್ಹಾನ್ಸ್ ಸಂಸ್ಥೆಗಳ ಸಹಯೋಗದೊಂದಿಗೆ ʻಮಾದಕ ವ್ಯಸನಿಗಳ ಪುನರ್ವಸತಿ ಕೇಂದ್ರʼಗಳನ್ನು ಪ್ರಾರಂಭಿಸಲಾಗುವುದು.
  75. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಪ್ರಾಥಮಿಕ ಬಾಲ್ಯ ಆರೈಕೆ ಮತ್ತು ಶಿಕ್ಷಣವನ್ನು (ECCE) ಬಲಪಡಿಸಲು ಈ ಭಾಗದ ಜಿಲ್ಲೆಗಳಲ್ಲಿ ಲಭ್ಯವಿರುವ 1,668 ನಿವೇಶನಗಳಲ್ಲಿ ಅಂಗನವಾಡಿ ಕಟ್ಟಡಗಳ ನಿರ್ಮಾಣವನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ KKRDB ಅನುದಾನದಿಂದ ಕೈಗೊಳ್ಳಲಾಗುವುದು.
  76. 2026–27ನೇ ಸಾಲಿನಲ್ಲಿ ಜಿಲ್ಲಾ ಮಟ್ಟದಲ್ಲಿ ಹೆಚ್ಚುವರಿಯಾಗಿ
    20 ಹೊಸ ಶಿಶುಪಾಲನಾ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶದಿಂದ ಒಂದು ಕೋಟಿ ರೂ. ಅನುದಾನ ಒದಗಿಸಲಾಗುವುದು.
  77. ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಮಧ್ಯಾಹ್ನದ ಬಿಸಿಯೂಟ ನೀಡುವ ಮಾತೃಪೂರ್ಣ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಈ ಯೋಜನೆಯು ಅವರಲ್ಲಿ ರಕ್ತಹೀನತೆ ಮತ್ತು ಅಪೌಷ್ಟಿಕತೆ ತಡೆಗಟ್ಟಲು ಸಹಕಾರಿಯಾಗಿತ್ತು. ತದನಂತರದಲ್ಲಿ, ಮಧ್ಯಾಹ್ನದ ಬಿಸಿಯೂಟದ ಬದಲಾಗಿ
    Take Home Ration ಗೆ ಒತ್ತು ನೀಡಲಾಗಿ, ಯೋಜನೆಯ ಮೂಲ ಉದ್ದೇಶ ಹಳಿತಪ್ಪಿದಂತಾಗಿರುತ್ತದೆ. ಇದನ್ನು ಮನಗಂಡು
    ಎಲ್ಲಾ ಫಲಾನುಭವಿಗಳಿಗೂ ಹಿಂದಿನಂತೆ ಅಂಗನವಾಡಿ ಕೇಂದ್ರಗಳಲ್ಲಿಯೇ ಪ್ರತಿದಿನ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಜನೆಯನ್ನು ಮರುಸ್ಥಾಪಿಸಲಾಗುವುದು.
  78. ಅಂಗನವಾಡಿ ಕೇಂದ್ರಗಳ ಸಮಗ್ರ ಸುಧಾರಣೆಗೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು.
  79. 2026-27ನೇ ಸಾಲಿನಲ್ಲಿ ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 63,135 ಕೋಟಿ ರೂ. ಮತ್ತು ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 94,663ಕೋಟಿ ರೂ. ಒದಗಿಸಲಾಗಿದೆ.
  80. ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗಾಗಿ ಕಳೆದ ಮೂರು ವರ್ಷಗಳಲ್ಲಿ ಈ ಕೆಳಕಂಡ ನಾಲ್ಕು ಪ್ರಮುಖ ದಿಕ್ಕುಗಳಲ್ಲಿ ಕಲ್ಯಾಣ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಕೈಗೊಂಡಿದೆ.
  81. ಶಿಕ್ಷಣ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ:
  82. 75 ಲಕ್ಷ ವಿದ್ಯಾರ್ಥಿಗಳಿಗೆ 2,676 ಕೋಟಿ ರೂ.ಗಳ ವಿದ್ಯಾರ್ಥಿವೇತನ, 2,231 ವಿದ್ಯಾರ್ಥಿಗಳಿಗೆ 389 ಕೋಟಿ ರೂ.ಗಳ ಶೈಕ್ಷಣಿಕ ಸಾಲ ಮತ್ತು 18 ಲಕ್ಷ ವಿದ್ಯಾರ್ಥಿಗಳಿಗೆ 1,273 ಕೋಟಿ ರೂ.ಗಳಷ್ಟು ಶುಲ್ಕ ಮರುಪಾವತಿ ಮಾಡಲಾಗಿದೆ.
  83. ರಾಜ್ಯದಲ್ಲಿ 5,306 ವಿದ್ಯಾರ್ಥಿನಿಲಯ ಮತ್ತು 1,258 ವಸತಿ ಶಾಲೆಗಳನ್ನು ಹಾಗೂ 300 ಮೌಲಾನಾ ಆಜಾದ್ ಶಾಲೆಗಳಲ್ಲಿ 13.30 ಲಕ್ಷ ಮಕ್ಕಳ ಶಿಕ್ಷಣಕ್ಕಾಗಿ 15,081 ಕೋಟಿ ರೂ. ಒದಗಿಸಲಾಗಿದೆ.
  84. ಕೌಶಲ್ಯ ಮತ್ತು ಜೀವನೋಪಾಯಕ್ಕೆ ನೆರವು: ಸಬ್ಸಿಡಿ ಆಧಾರಿತ ಸಣ್ಣ ಉದ್ಯಮಗಳಿಂದ ಸುಸ್ಥಿರ ಆದಾಯ ಮೂಲಗಳನ್ನು ಸೃಜಿಸುವ ಉದ್ಯಮಶೀಲತೆಗೆ ಉತ್ತೇಜನೆ ಮತ್ತು ಆರ್ಥಿಕ ಸಬಲೀಕರಣಕ್ಕೆ ಆದ್ಯತೆ ನೀಡುವುದು.
  85. ಸ್ವಾವಲಂಬಿ ಸಾರಥಿ ಯೋಜನೆಯಡಿ 8,195 ಫಲಾನುಭವಿಗಳಿಗೆ 249 ಕೋಟಿ ರೂ.ಗಳ ಸಾಲ, ಗಂಗಾಕಲ್ಯಾಣ ಯೋಜನೆಯಡಿ 21,556 ಫಲಾನುಭವಿಗಳಿಗೆ 637 ಕೋಟಿ ರೂ.ಗಳು ಮತ್ತು 2,928 ಫಲಾನುಭವಿಗಳಿಗೆ ಭೂಮಿ ಒದಗಿಸಲು 421 ಕೋಟಿ ರೂ.ಗಳನ್ನು ನೀಡಲಾಗಿದೆ.
  86. ಮೂಲಸೌಕರ್ಯ ಅಭಿವೃದ್ಧಿ: ಮೂಲಭೂತ ಸೌಲಭ್ಯಕ್ಕೆ ಒತ್ತು ನೀಡುವುದರ ಮೂಲಕ ಬಡಜನರ ಜೀವನ ಮಟ್ಟವನ್ನು ಸುಧಾರಿಸುವ ಕಾರ್ಯಕ್ರಮಗಳು:
  87. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಕಾಲೋನಿಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 1,332 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ.
  88. ಅರಣ್ಯಹಾಗೂಅರಣ್ಯದಂಚಿನಲ್ಲಿವಾಸಿಸುತ್ತಿರುವ
    11 ಸಮುದಾಯಗಳವಸತಿರಹಿತ 6,257 ಕುಟುಂಬಗಳಿಗೆ
    4.50 ಲಕ್ಷರೂ.ಗಳಘಟಕವೆಚ್ಚದಲ್ಲಿಒಟ್ಟು 282 ಕೋಟಿರೂ.ಗಳಲ್ಲಿಮನೆನಿರ್ಮಾಣಮಾಡಲಾಗುತ್ತಿದೆ.
  89. ಅಲ್ಪಸಂಖ್ಯಾತರ ಕಾಲೋನಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲು 1,635 ಕೋಟಿ ರೂ.ಗಳ ವೆಚ್ಚದಲ್ಲಿ 3,662 ಕಾಮಗಾರಿಗಳನ್ನು ಅನುಮೋದಿಸಲಾಗಿದೆ.
  90. ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಇಲಾಖೆಗಳಲ್ಲಿ 1,650 ಸಮುದಾಯ ಭವನ/ವಾಲ್ಮೀಕಿ ಭವನ/ಶಾದಿ ಮಹಲ್ ಗಳ ನಿರ್ಮಾಣಕ್ಕಾಗಿ 822 ಕೋಟಿ ರೂ.ಗಳನ್ನು ಮಂಜೂರು ಮಾಡಿ 732 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ.
  91. ನಾಯಕತ್ವ ಮತ್ತು ಪ್ರಾತಿನಿಧ್ಯ: ಸರ್ಕಾರದ ನೀತಿ ನಿರೂಪಣೆ ಹಾಗೂ ಅನುಷ್ಠಾನದಲ್ಲಿ ಹಿಂದುಳಿದವರಿಗೆ ಸೂಕ್ತ ಪ್ರಾತಿನಿಧ್ಯತೆಯನ್ನು ಕಲ್ಪಿಸುವುದು.
  92. ಒಟ್ಟು 26,821 ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗ/ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಕೌಶಲ್ಯಾಭಿವೃದ್ಧಿಗೆ ತರಬೇತಿಯನ್ನು ನೀಡಲು 841 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ.
  93. ಕರ್ನಾಟಕ ಅನುಸೂಚಿತ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯಡಿಯಲ್ಲಿ 2026-27ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಗೆ 31,804ಕೋಟಿ ರೂ. ಹಾಗೂ ಬುಡಕಟ್ಟು ಉಪಯೋಜನೆಗೆ 12,828ಕೋಟಿ ರೂ. ಗಳು ಸೇರಿದಂತೆ ಒಟ್ಟಾರೆ 44,632ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ.
  94. ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯಗಳ ಇತರೆ ನಿರ್ವಹಣಾ ವೆಚ್ಚದ ದರಗಳನ್ನು ಪರಿಷ್ಕರಿಸಲು 56 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಒದಗಿಸಲಾಗುವುದು.
  95. ಸರ್ಕಾರಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳಾದ
    ಟೂ ಟಯರ್ ಕಾಟ್, ಕಾಯರ್ ಮ್ಯಾಟ್ರಸ್, ಸೋಲಾರ್ ವಾಟರ್ ಹೀಟರ್ ಮತ್ತು ಡೈನಿಂಗ್ ಟೇಬಲ್ಗಳನ್ನು ಒದಗಿಸಲು 25 ಕೋಟಿ ರೂ.ಗಳನ್ನು ಮೀಸಲಿರಿಸಿದೆ.
  96. ಶೈಕ್ಷಣಿಕವಾಗಿ ಪ್ರಮುಖ ನಗರಗಳಲ್ಲಿ ವಿದ್ಯಾರ್ಥಿನಿಲಯಗಳಿಗೆ ಬೇಡಿಕೆ ಹೆಚ್ಚುತ್ತಿರುವ ಕಾರಣ ಪ್ರತಿ ಜಿಲ್ಲೆಗೆ 150 ಸಂಖ್ಯಾಬಲದ ಒಂದು ಬಾಲಕಿಯರ ಮತ್ತು ಒಂದು ಬಾಲಕರ ಒಟ್ಟು
    62 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು.
  97. Right To Education Act ರಡಿ ಪ್ರವೇಶ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಪ್ರವೇಶ ಪಡೆದ ಶಾಲೆಗಳಲ್ಲಿಯೇ 9 ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮುಂದುವರೆಸಲು ಅವಕಾಶ ಕಲ್ಪಿಸಲು 19 ಕೋಟಿ ರೂ.ಗಳನ್ನು ಒದಗಿಸಲಾಗುವುದು.
  98. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣಕ್ಕೆ ಅನುವು ಮಾಡಿಕೊಡಲು ಒಟ್ಟು 31 ವಸತಿ ಶಾಲೆಗಳನ್ನು ಉನ್ನತೀಕರಿಸಲಾಗುವುದು.
  99. ವಸತಿ ಶಾಲೆಗಳಿಲ್ಲದ ಹೋಬಳಿಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಒಟ್ಟು 40 ಹೊಸ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು.
  100. ಕ್ರೈಸ್ ವಸತಿ ಶಾಲೆಗಳಿಗೆ ಅಗತ್ಯವಿರುವ ಡೆಸ್ಕ್, ಬೆಂಚ್, ಪೀಠೋಪಕರಣಗಳು, ಗ್ರಂಥಾಲಯ, ಕಂಪ್ಯೂಟರ್ ಲ್ಯಾಬ್ ಮತ್ತು ವಿಜ್ಞಾನ ಪ್ರಯೋಗಾಲಯ, ಹಾಸಿಗೆ-ಹೊದಿಕೆ, ಟೂ ಟಯರ್ ಕಾಟ್, ಸೋಲಾರ್ ವಾಟರ್ ಹೀಟರ್, ಡೈನಿಂಗ್ ಟೇಬಲ್, ಸಿಸಿಟಿವಿಇತ್ಯಾದಿ ಮೂಲಭೂತ ಸೌಕರ್ಯಗಳನ್ನು ನೀಡಲು 50 ಕೋಟಿ ರೂ.ಗಳನ್ನು ಒದಗಿಸಲಾಗುವುದು.
  101. ಪರಿಶಿಷ್ಟ ಜಾತಿಯ 20, ಪರಿಶಿಷ್ಟ ಪಂಗಡದ 5 ಮತ್ತು ಹಿಂದುಳಿದ ವರ್ಗಗಳ 5 ವಸತಿ ಶಾಲೆಗಳು ಸೇರಿದಂತೆ ನಿವೇಶನ ಲಭ್ಯವಿರುವ ಒಟ್ಟು 30 ಕ್ರೈಸ್ ವಸತಿ ಶಾಲೆಗಳಿಗೆ 22 ಕೋಟಿ ರೂ. ಘಟಕ ವೆಚ್ಚದಲ್ಲಿ ಒಟ್ಟಾರೆ660 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುವುದು.
  102. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿಯ ಎರಡು, ಪರಿಶಿಷ್ಟ ಪಂಗಡದ ಒಂದು ಮತ್ತು ಹಿಂದುಳಿದ ವರ್ಗಗಳ ಒಂದು ಸೇರಿದಂತೆ ಒಟ್ಟು ನಾಲ್ಕು ಕೈಸ್ ವಸತಿ ಶಾಲೆಗಳನ್ನು
    K-CET/JEE/NEET ಪರೀಕ್ಷೆಗಳಿಗೆ ಗುಣಮಟ್ಟದ
    ತರಬೇತಿ ನೀಡಲು Centre of Excellenceಗಳನ್ನಾಗಿ ಉನ್ನತೀಕರಿಸಲಾಗುವುದು. ಈ ಶಾಲೆಗಳಿಗೆ ಪ್ರತ್ಯೇಕವಾದಪ್ರವೇಶ ಪರೀಕ್ಷೆಯ ಮೂಲಕ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಇದಕ್ಕಾಗಿ ಐದು ಕೋಟಿ ರೂ.ಗಳನ್ನು ಒದಗಿಸಲಾಗುವುದು.
  103. ನಮ್ಮ ಸರ್ಕಾರವು ವಸತಿ ನಿಲಯ ಮತ್ತು ವಸತಿ ಶಾಲೆಗಳಲ್ಲಿ ಗುಣಮಟ್ಟದ ಆಹಾರ ಪೂರೈಸಲು ಪ್ರಾಯೋಗಿಕವಾಗಿ 50 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ, ಅಲ್ಲಿನ ವಿದ್ಯಾರ್ಥಿಗಳ ಮುಂದಾಳತ್ವದಲ್ಲಿ ಮೆಸ್ ಸಮಿತಿಯೊಂದನ್ನು ರಚಿಸಿ
    ಕಾಲಕಾಲಕ್ಕೆ ಅಗತ್ಯ ಅನುದಾನವನ್ನು ಮುಂಗಡವಾಗಿ ನೀಡಿ, ಪಾರದರ್ಶಕತೆ ಹಾಗೂ ಜವಾಬ್ದಾರಿಯುತ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು. ಮುಂದುವರೆದು, ಈ ಪ್ರಯೋಗದ ಕಲಿಕೆಗಳನ್ನು ಅಳವಡಿಸಿಕೊಂಡು ಹಂತ ಹಂತವಾಗಿ ವಿಸ್ತರಿಸಲಾಗುವುದು.
  104. ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗಳಿಂದ 6,562 ವಸತಿ ನಿಲಯಗಳಲ್ಲಿ ಮತ್ತು ವಸತಿ ಶಾಲೆಗಳಲ್ಲಿ ಪ್ರಸ್ತುತ 8.50 ಲಕ್ಷ ನಿಲಯಾರ್ಥಿಗಳಿದ್ದು, ಇವುಗಳ ನಿರ್ವಹಣೆಯಲ್ಲಿ ಸುಧಾರಣೆ ತರಲು ಒಂದು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು.
  105. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಸ್ಥ ಮಹಿಳೆಯರಿಗೆ ತಲಾ 50 ಸಂಖ್ಯಾಬಲದ10 ವಸತಿ ನಿಲಯಗಳನ್ನು ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಬೆಳಗಾವಿ ಮತ್ತು ಕಲಬುರಗಿಯಲ್ಲಿ ಪ್ರಾರಂಭಿಸಲಾಗುವುದು.
  106. ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗಳಡಿ ಬರುವ ನಿಗಮಗಳಲ್ಲಿ ಮೈಕ್ರೊ ಕ್ರೆಡಿಟ್ ಪ್ರೇರಣಾ ಯೋಜನೆಯಡಿ ಸಾಲ ಮತ್ತು ಸಹಾಯಧನ ಪಡೆದ ಮಹಿಳಾ ಸ್ವ-ಸಹಾಯ ಸಂಘಗಳು ಸಾಲವನ್ನು ಸಕಾಲದಲ್ಲಿ ಪೂರ್ಣವಾಗಿ ಮರುಪಾವತಿಸಿದ ಸಂಘಗಳಿಗೆ ಎರಡನೇ ಬಾರಿಗೆ ಸಾಲ ಮತ್ತು ಸಹಾಯಧನ ಮಂಜೂರು ಮಾಡಲಾಗುವುದು.
  107. ಶೈಕ್ಷಣಿಕ ಸೌಲಭ್ಯಗಳಿಂದ ವಂಚಿತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಪ್ರತಿ ಕಂದಾಯ ವಿಭಾಗಕ್ಕೆ ಒಂದರಂತೆ ನಾಲ್ಕು ವಿಶೇಷ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ರೂ.ಗಳನ್ನು ಒದಗಿಸಲಾಗುವುದು.
  108. ಡಾ||ಬಿ.ಆರ್.ಅಂಬೇಡ್ಕರ್ ರವರು ಭೇಟಿ ನೀಡಿದ ಸ್ಥಳಗಳಾದ ಕಲಬುರಗಿ, ವಿಜಯಪುರ, ಬೆಳಗಾವಿ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಅವರಹೆಸರಿನಲ್ಲಿ CBSE ಪಠ್ಯಕ್ರಮದನಾಲ್ಕು ಕ್ರೈಸ್ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು.
  109. ಸಮಾಜ ಕಲ್ಯಾಣ ಇಲಾಖೆಯಡಿ ಬೌದ್ಧ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗುವುದು.
  110. ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಇಲಾಖೆಗಳ ಅಡಿಯಲ್ಲಿ ಬರುವ ನಿಗಮಗಳು ಗಂಗಾ ಕಲ್ಯಾಣ ಯೋಜನೆಯಡಿ ಪ್ರತಿ ಕೊಳವೆ ಬಾವಿಗಳ ವಿದ್ಯುದೀಕರಣಕ್ಕಾಗಿ ಪಾವತಿಸುವ ಮೊತ್ತವನ್ನು 75,000 ರೂ.ಗಳಿಂದ 1,50,000 ರೂ.ಗಳಿಗೆ ಹೆಚ್ಚಿಸಲಾಗುವುದು.
  111. ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಗಳಿಗೆ 2026-27ನೇ ಸಾಲಿನಲ್ಲಿ 1,500 ಕೋಟಿ ರೂ.ಗಳನ್ನು ಒದಗಿಸಲಾಗುವುದು.
  112. ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಲ್ಲಿ ಖಾಲಿ ಇರುವ 2,500 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು.
    ಪರಿಶಿಷ್ಟ ವರ್ಗಗಳ ಕಲ್ಯಾಣ
  113. ಪರಿಶಿಷ್ಟ ಪಂಗಡಗಳ ಇಲಾಖೆ ಮತ್ತು ನಿರ್ದೇಶನಾಲಯದಡಿ ಬರುವ ನಿಗಮ ಮತ್ತು ಇತರೆ ಕಛೇರಿಗಳಿಗಾಗಿ ಬೆಂಗಳೂರಿನ ಸುಮನಹಳ್ಳಿಯಲ್ಲಿ “ಶ್ರೀ ಮಹರ್ಷಿ ವಾಲ್ಮೀಕಿ ಆಡಳಿತ ಸೌಧ”ಸಂಕೀರ್ಣವನ್ನು 50 ಕೋಟಿ ರೂ.ಗಳ ವೆಚ್ಚದಲ್ಲಿನಿರ್ಮಿಸಲಾಗುವುದು.
  114. 2026-27ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ 150 ಸಂಖ್ಯಾಬಲದ 50 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಹೊಸದಾಗಿ ಪ್ರಾರಂಭಿಸಲಾಗುವುದು.
  115. ಪರಿಶಿಷ್ಟ ಪಂಗಡಗಳ ನಿರುದ್ಯೋಗಿ ಯುವಕ/ಯುವತಿಯರಿಗೆ ಫಾಸ್ಟ್ ಫುಡ್ ಟ್ರಕ್ ಟ್ರೈಲರ್/ ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್ (Kiosk) ಸೌಲಭ್ಯಗಳನ್ನು ನಿಗಮಗಳ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಘಟಕ ವೆಚ್ಚದ ಶೇ.75 ರಷ್ಟು ಅಥವಾ ಗರಿಷ್ಠ ನಾಲ್ಕು ಲಕ್ಷ ರೂ.ಗಳ ಸಹಾಯಧನ ನೀಡಲಾಗುವುದು.
  116. ಪರಿಶಿಷ್ಟ ಪಂಗಡದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ಆಶ್ರಮ ಶಾಲೆಗಳಲ್ಲಿನ ವಿದ್ಯಾರ್ಥಿಗಳ ಆರೈಕೆಗಾಗಿ 119 ಮಹಿಳಾ ಕೇರ್ಟೇಕರ್ ಹುದ್ದೆಗಳನ್ನು ಮಂಜೂರು ಮಾಡಲಾಗುವುದು. ಇದಕ್ಕಾಗಿ ಮೂರು ಕೋಟಿ ರೂ.ಗಳನ್ನು ಒದಗಿಸಲಾಗುವುದು.
  117. ಅರಣ್ಯ ಮತ್ತು ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಇರುಳ, ಸೋಲಿಗ, ಜೇನುಕುರುಬ, ಕಾಡುಕುರುಬ, ಕುಡಿಯ, ಸಿದ್ದಿ ಮತ್ತು ಇತರೆ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ
    PVTG ಗಳಿಗೆ ʻಕರ್ನಾಟಕ ಆದಿವಾಸಿ ಅಭಿವೃದ್ಧಿ ನಿಗಮʼವನ್ನು ಸ್ಥಾಪಿಸಲಾಗುವುದು.
  118. ಪರಿಶಿಷ್ಟ ಪಂಗಡದ ಸಮುದಾಯದವರ ಹಕ್ಕುಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅವರ ದೂರು ಮತ್ತು ಸಮಸ್ಯೆಗಳನ್ನು ಆಲಿಸಲು ಪ್ರತ್ಯೇಕವಾಗಿ ಪರಿಶಿಷ್ಟ ಪಂಗಡಗಳ ಆಯೋಗವನ್ನು ಸ್ಥಾಪಿಸಲಾಗುವುದು.
  119. ಹಿಂದುಳಿದ ವರ್ಗಗಳ ಕಲ್ಯಾಣ :
    • ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಬೇಡಿಕೆಯಿರುವ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಮಂಗಳೂರು, ಧಾರವಾಡ, ಬೆಳಗಾವಿ, ಕಲಬುರಗಿ, ದಾವಣಗೆರೆ, ಶಿವಮೊಗ್ಗ ಹಾಗೂ ಬಳ್ಳಾರಿಯಲ್ಲಿ 150 ಸಂಖ್ಯಾಬಲದ 50 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು.
    • ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು 30 ಕೋಟಿ
    ರೂ.ಗಳನ್ನು ಒದಗಿಸಲಾಗುವುದು. ಸ್ವಂತ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲು 50 ಕೋಟಿ ರೂ.ಗಳನ್ನು ಒದಗಿಸಲಾಗುವುದು.
    • ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಐದು ಕೋಟಿ ರೂ. ಘಟಕ ವೆಚ್ಚದಲ್ಲಿ
    50ಸ್ವಂತ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುವುದು.
    • ಬೆಂಗಳೂರು ಮತ್ತು ಮೈಸೂರು ನಗರದ ಧೋಬಿಘಾಟ್ಗಳಲ್ಲಿ ಮಡಿವಾಳ ಸಮಾಜದವರಿಗೆ ವಾಷಿಂಗ್ ಮೆಷಿನ್, ಡ್ರೈಯರ್ ಮತ್ತು ಐರನಿಂಗ್ ಮೆಷಿನ್ ಇತ್ಯಾದಿ ಸಾಮಗ್ರಿಗಳನ್ನು ಒಳಗೊಂಡಂತೆ ತಲಾ 75 ಲಕ್ಷ ರೂ. ಘಟಕ ವೆಚ್ಚದಲ್ಲಿ ಆಧುನಿಕ Laundry ಗಳನ್ನುಸ್ಥಾಪಿಸಲಾಗುವುದು. ಇದಲ್ಲದೆ, ನಿರುದ್ಯೋಗಿ ಯುವಕ/ ಯುವತಿಯರು ಸ್ವಯಂ ಉದ್ಯೋಗಕ್ಕಾಗಿ ಆಧುನಿಕ Laundry ಗಳನ್ನು ಸ್ಥಾಪಿಸಲು 5 ಲಕ್ಷ ರೂ.ಗಳವರೆಗೆ ಶೇ.೪ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುವುದು.
    • ಸವಿತಾ ಸಮಾಜದವರು ಸಲೂನ್ಗಳನ್ನು ತೆರೆಯಲು ಶೇ.4 ರಷ್ಟು ಬಡ್ಡಿದರದಲ್ಲಿ 10 ಲಕ್ಷ ರೂ.ಗಳವರೆಗೆ ಸಾಲ ಮತ್ತು ಸಹಾಯಧನವನ್ನು ಮಂಜೂರು ಮಾಡಲಾಗುವುದು.
    • ಕುಂಬಾರ, ತಿಗಳ, ಗಾಣಿಗ, ಕೊಡವ, ಉಪ್ಪಾರ, ಈಡಿಗ ಮತ್ತು ಕಾಡುಗೊಲ್ಲ ಸಮುದಾಯದ ಜನರ ಆರ್ಥಿಕ ಏಳಿಗೆಗಾಗಿ
    ನೆರವು ನೀಡಲು ಪ್ರತ್ಯೇಕ ನಿಗಮಗಳನ್ನು ಸ್ಥಾಪಿಸಲಾಗಿದೆ.
    ಈ ನಿಗಮಗಳ ಮೂಲಕ ವಿವಿಧ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು.
    • ಹಿಂದುಳಿದ ವರ್ಗಗಳ 250 ಇಂಜಿನಿಯರಿಂಗ್ ಪದವೀಧರರಿಗೆ ಅವರ ತಾಂತ್ರಿಕ ಕೌಶಲ್ಯವನ್ನು ಉತ್ಕೃಷ್ಟಗೊಳಿಸಲು ಡಿ. ದೇವರಾಜ ಅರಸು ಅಭಿವೃದ್ಧಿ ನಿಗಮದ ವತಿಯಿಂದ NIT/IIT/IIM ಗಳಲ್ಲಿ
    AI ತರಬೇತಿ ಪಡೆಯಲು ತಲಾ ಎರಡು ಲಕ್ಷ ರೂ. ಗಳಂತೆ ಸಾಲ ನೀಡಲಾಗುವುದು.
    • 31-03-2021ರ ಅಂತ್ಯದವರೆಗೆ ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಡಿಯ ನಿಗಮಗಳಿಂದ ಪಡೆದ ಸಾಲದ ಅಸಲನ್ನು ಪಾವತಿ ಮಾಡುವವರಿಗೆ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿ ಒಂದಾವರ್ತಿ ತೀರುವಳಿ ಯೋಜನೆಯನ್ನು
    (One time settlement scheme) ಜಾರಿಗೆ ತರಲಾಗುವುದು.
    • ಹಿಂದುಳಿದ ವರ್ಗಗಳ ಕಾರ್ಯಕ್ರಮಗಳ ಅನುಷ್ಠಾನ, ಉದ್ಯೋಗ ಮತ್ತು ಶಿಕ್ಷಣ ಮೀಸಲಾತಿ, ಬ್ಯಾಕ್ಲಾಗ್ ಹುದ್ದೆಗಳ ಭರ್ತಿ ಮತ್ತು ಈ ವರ್ಗಗಳ ಅಭಿವೃದ್ಧಿ ಬಗ್ಗೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಒಂದು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು.
    • ಹಿಂದುಳಿದ ವರ್ಗಗಳ ಪ್ರವರ್ಗ-1ರಡಿ ಬರುವ 46 ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಪದವಿಗಳಲ್ಲಿ ವ್ಯಾಸಂಗ ಮಾಡಲು ಉತ್ತೇಜಿಸುವ ಸಲುವಾಗಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳಿಗೆ ನೀಡುವ ಸೌಲಭ್ಯಗಳನ್ನು ವಿಸ್ತರಿಸಲಾಗುವುದು.


ಅಲ್ಪಸಂಖ್ಯಾತರ ಕಲ್ಯಾಣ


• ಹೆಚ್ಚಿನ ಬೇಡಿಕೆ ಇರುವ ಜಿಲ್ಲೆಗಳಲ್ಲಿ 150 ಸಂಖ್ಯಾಬಲದ 25 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು. ಹಾಲಿ ಕಾರ್ಯನಿರ್ವಹಿಸುತ್ತಿರು
25 ವಿದ್ಯಾರ್ಥಿನಿಲಯಗಳಲ್ಲಿ 50 ವಿದ್ಯಾರ್ಥಿಗಳ ಸಂಖ್ಯಾಬಲವನ್ನು ಹೆಚ್ಚಿಸಲಾಗುವುದು.
• ಅಲ್ಪಸಂಖ್ಯಾತರ ವಸತಿ ಶಾಲೆಗಳಿಗೆಹೆಚ್ಚಿನ ಬೇಡಿಕೆ ಇರುವ ಕಾರಣ ಸಂತ ಶಿಶುನಾಳ ಶರೀಫರವರ ಹೆಸರಿನಲ್ಲಿ 10 ಹೊಸ ವಸತಿ ಶಾಲೆಗಳನ್ನು CBSEಪಠ್ಯಕ್ರಮದಡಿಯಲ್ಲಿ ಪ್ರಾರಂಭಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ. ಅನುದಾನ ಒದಗಿಸಲಾಗುವುದು.
• 2026-27ನೇ ಸಾಲಿನಲ್ಲಿ 25 ಸಂತ ಶಿಶುನಾಳ ಶರೀಫರ ಹೆಸರಿನಲ್ಲಿ ವಸತಿ ಶಾಲೆಗಳನ್ನು ಹೊಸದಾಗಿ ಪ್ರಾರಂಭಿಸಲಾಗುವುದು.
• 2025-26ನೇ ಸಾಲಿನಲ್ಲಿ 117 ಮೌಲಾನಾ ಆಜಾದ್ ಮಾದರಿ ಶಾಲೆಗಳು ಹಾಗೂ ಉರ್ದು ಶಾಲೆಗಳನ್ನು ಕೆ.ಪಿ.ಎಸ್. ಮಾದರಿಯಲ್ಲಿ 600 ಕೋಟಿ ರೂ.ಗಳ ವೆಚ್ಚದಲ್ಲಿ ಉನ್ನತೀಕರಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಇನ್ನೂ
100 ಶಾಲೆಗಳನ್ನು 400 ಕೋಟಿ ರೂ.ಗಳ ವೆಚ್ಚದಲ್ಲಿ ಇದೇ ಮಾದರಿಯಲ್ಲಿ ಉನ್ನತೀಕರಿಸಲಾಗುವುದು.
• ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪೈಕಿ 25 ವಸತಿ ಶಾಲೆಗಳಲ್ಲಿ ಪಿ.ಯು.ಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳನ್ನು ಪ್ರಾರಂಭಿಸಲಾಗುವುದು. 18 ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ ವಾಣಿಜ್ಯ ವಿಭಾಗವನ್ನು ಪ್ರಾರಂಭಿಸಲಾಗುವುದು.
• ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ಪಿ.ಯು.ಸಿ ವ್ಯಾಸಂಗ ಮಾಡುತ್ತಿರುವಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆಯ ಮೂಲಕ ಆಯ್ಕೆ ಮಾಡಿ, ಅವರಿಗೆ K-CET/JEE/NEETಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿ ನೀಡಲು ನಾಲ್ಕು ವಸತಿ ಶಾಲೆಗಳನ್ನು Center of Excellenceಗಳನ್ನಾಗಿ ಸ್ಥಾಪಿಸಲಾಗುವುದು. ಅಲ್ಲದೇ 20 ವಸತಿ ಶಾಲೆಗಳಲ್ಲಿನ ಮಕ್ಕಳಿಗೆ CET/JEE/NEET ವಿಶೇಷ ತರಬೇತಿ ನೀಡಲಾಗುವುದು.
• ಎಲ್ಲಾ ಸಮುದಾಯಗಳ ವಿದ್ಯಾರ್ಥಿಗಳಿಗೆ ನಿರಂತರ ಕಲಿಕಾ ಅವಕಾಶಗಳನ್ನು ಒದಗಿಸಲು ಮತ್ತು ಜ್ಞಾನವನ್ನು ವೃದ್ಧಿಸಲು ಆಯ್ದ ವಕ್ಫ್ ಆಸ್ತಿಗಳಲ್ಲಿ ಕಲಿಕಾ ಕೇಂದ್ರ ಹಾಗೂ ನಾಗರಿಕ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು.
• ಉದ್ಯೋಗಸ್ಥಮಹಿಳೆಯರ ವಸತಿ ನಿಲಯಗಳಿಗೆ ಹೆಚ್ಚಿನ
ಬೇಡಿಕೆ ಇರುವ ಕಾರಣ ಬೆಂಗಳೂರಿನಲ್ಲಿ 100 ಸಂಖ್ಯಾಬಲದ ಉದ್ಯೋಗಸ್ಥ ಮಹಿಳೆಯರ ನಾಲ್ಕು ವಸತಿನಿಲಯಗಳನ್ನು ಪ್ರಾರಂಭಿಸಲಾಗುವುದು.
• ಜೈನ, ಬೌದ್ಧ ಮತ್ತು ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನವನ್ನು ಮೀಸಲಿರಿಸಲಾಗಿದೆ.
• ಬೌದ್ಧ ಧರ್ಮದ ಧಮ್ಮಾಚಾರಿಗಳಿಗೆ 6,000 ರೂ.ಗಳ ಮಾಸಿಕ ಗೌರವಧನವನ್ನು ನೀಡಲಾಗುವುದು.
• ಅಲ್ಪಸಂಖ್ಯಾತ ಸಮುದಾಯದ ನಿರ್ಗತಿಕ ಜನರಿಗೆ
100 ಸಂಖ್ಯಾಬಲದ ಎರಡು ಮಹಿಳಾ ವೃದ್ಧಾಶ್ರಮಗಳನ್ನು ಪ್ರಾರಂಭಿಸುವುದಕ್ಕೆ ನೆರವು ನೀಡಲಾಗುವುದು.
• ಅಲ್ಪಸಂಖ್ಯಾತರ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ತಾಂತ್ರಿಕ ಹಾಗೂ ಉನ್ನತ ಮಟ್ಟದ ಡಿಜಿಟಲ್ ಶಿಕ್ಷಣವನ್ನು ಪ್ರೋತ್ಸಾಹಿಸಲು 5,000 ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಖರೀದಿಗಾಗಿ ತಲಾ 50,000 ರೂ.ಗಳನ್ನು ನೀಡಲಾಗುವುದು.
• ಅಲ್ಪಸಂಖ್ಯಾತ ಸಮುದಾಯದ ನಿರುದ್ಯೋಗಿ ಯುವಕ/ಯುವತಿಯರಿಗೆ ಫಾಸ್ಟ್ ಫುಡ್ ಟ್ರಕ್ ಟ್ರೈಲರ್/ ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್ (Kiosk) ಸೌಲಭ್ಯಗಳನ್ನು ನಿಗಮಗಳ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಘಟಕ ವೆಚ್ಚದ ಶೇ.75 ರಷ್ಟು ಅಥವಾ ಗರಿಷ್ಠ ಮೂರು ಲಕ್ಷ ರೂ.ಗಳ ಸಹಾಯಧನ ನೀಡಲಾಗುವುದು.
• ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಪ್ರೋತ್ಸಾಹ ನೀಡಲು ಅಲ್ಪಸಂಖ್ಯಾತರ ಮಹಿಳಾ ಕೋ-ಆಪರೇಟಿವ್ ಸೊಸೈಟಿಗಳನ್ನು ಸ್ಥಾಪಿಸಲಾಗುವುದು.
• ಹಿರಿಯ ನಾಗರೀಕರಿಗೆ ಆರೋಗ್ಯ ಮತ್ತು ಆರೈಕೆ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರೈಸ್ತ ಸಂಸ್ಥೆಗಳು ನಡೆಸುವ
10 ವೃದ್ಧಾಶ್ರಮಗಳಲ್ಲಿ ಸಮಗ್ರ ಜೆರಿಯಾಟ್ರಿಕ್ ಪ್ಯಾಲಿಯೇಟಿವ್ ಕೇರ್ ಘಟಕಗಳನ್ನು ಸ್ಥಾಪಿಸಲು ತಲಾ 50 ಲಕ್ಷ ರೂ.ಗಳಂತೆ ಒಟ್ಟಾರೆ ಐದು ಕೋಟಿ ರೂ. ಒದಗಿಸಲಾಗುವುದು.
• ಬೆಂಗಳೂರಿನ ಕೆಂಗೇರಿಯಲ್ಲಿ ಆಸಿರ್ವನಂ ಬೆನಿಡಿಕ್ಟಿನ್ ಮೊನಾಸ್ಟರಿಯ ಎರಡು ಎಕರೆ ಜಾಗದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರ ಸ್ಥಾಪಿಸಲು ಮುಖ್ಯ ಸಂಸ್ಥಾತ್ಮಕ ಮೂಲಸೌಕರ್ಯದ ನಿರ್ಮಾಣಕ್ಕೆ ಐದು ಕೋಟಿ ರೂ.ಗಳನ್ನು ಒದಗಿಸಲಾಗುವುದು.
• ಸಂವಿಧಾನ ಶಿಲ್ಪಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಇತರೆ ಸಮಾಜ ಸುಧಾರಕರ ಪುಸ್ತಕಗಳನ್ನು ಉರ್ದು ಭಾಷೆಯಲ್ಲಿ ಅನುವಾದಿಸಲಾಗುವುದು.
• ಹಜ್ ಯಾತ್ರಿಕರು ಹಾಗೂ ಅವರ ಸಂಬಂಧಿಕರಿಗೆ ಅಗತ್ಯ ಸೌಲಭ್ಯ ಮತ್ತು ಸೌಕರ್ಯಗಳನ್ನು ಒದಗಿಸಲು ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಹಜ್ ಭವನಗಳನ್ನು ನಿರ್ಮಾಣ ಮಾಡಲಾಗುವುದು.
• ವಕ್ಫ್ ಸಂಸ್ಥೆಗಳಲ್ಲಿನ 31 ಮಹಿಳಾ ಪಿ.ಯು ಕಾಲೇಜುಗಳನ್ನು ಪದವಿ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು. ಮುಂದುವರೆದು, ಸವಣೂರಿನಲ್ಲಿ ಒಂದು ಹೊಸ ಮಹಿಳಾ ಪಿ.ಯು. ಕಾಲೇಜನ್ನು ಪ್ರಾರಂಭಿಸಲಾಗುವುದು.
• ವಾಣಿಜ್ಯ ಉದ್ದೇಶಕ್ಕೆ ಅತಿ ಹೆಚ್ಚು ಬೇಡಿಕೆಯಿರುವ ಪ್ರದೇಶಗಳಲ್ಲಿ ವಕ್ಫ್ ಆಸ್ತಿಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು.
• ಬೀದರ್ನ ಶ್ರೀ ನಾನಕ್ ಝೀರಾ ಸಾಹೇಬ್ ಗುರುದ್ವಾರದಲ್ಲಿ ಗ್ರಂಥಾಲಯವನ್ನು ಸ್ಥಾಪಿಸಲಾಗುವುದು.


ವಸತಿ
• ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಿವಿಧ ವಸತಿ ಯೋಜನೆಗಳಡಿಯಲ್ಲಿ 7,328 ಕೋಟಿ ರೂ.ಗಳ ಮೊತ್ತದಲ್ಲಿ ಒಟ್ಟಾರೆ 4,19,454 ಮನೆಗಳ ನಿರ್ಮಾಣವನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಮೂರು ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ. ಹಿಂದಿನ ಸರ್ಕಾರವು ಅನುದಾನ ನೀಡದೇ ಮಂಜೂರಾತಿ ನೀಡಿರುವ 4.90 ಲಕ್ಷ ಮನೆಗಳನ್ನು ಪೂರ್ಣಗೊಳಿಸಲು ನಮ್ಮ ಸರ್ಕಾರದ ವತಿಯಿಂದ ಕ್ರಮ ಕೈಗೊಳ್ಳಲಾಗುತ್ತದೆ.
• ಸರ್ವರಿಗೂ ಸೂರು ಕಲ್ಪಿಸುವ ಉದ್ದೇಶದಿಂದ ರಾಜ್ಯದ ವಿವಿಧ ವಸತಿ ಯೋಜನೆಗಳಡಿ BLC ಆಧಾರಿತ ಒಂದು ಲಕ್ಷ ಮನೆಗಳ ಹೊಸ ಗುರಿಯನ್ನು ಮಂಜೂರು ಮಾಡಲಾಗುವುದು. ಸದರಿ ಗುರಿಯಡಿ ಆಯ್ಕೆಯಾಗುವ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ನೀಡುವ ಸಹಾಯಧನವನ್ನು 1.20 ಲಕ್ಷ ರೂ.ಗಳಿಂದ 2 ಲಕ್ಷ ರೂ.ಗಳಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು
ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ 2 ಲಕ್ಷ ರೂ.ಗಳಿಂದ 3 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು.

• ರಾಜ್ಯ ವಸತಿ ಯೋಜನೆಗಳಡಿ ಅರ್ಹ ಫಲಾನುಭವಿಗಳನ್ನು Manual ಲಾಟರಿ ಪ್ರಕ್ರಿಯೆಯ ಮುಖಾಂತರ ಆಯ್ಕೆಗೊಳಿಸಲಾಗುತ್ತಿದ್ದು, ಇನ್ನು ಮುಂದೆ ಆನ್ಲೈನ್ ಲಾಟರಿ ಮೂಲಕ ಗ್ರಾಮ ಸಭೆಗಳಲ್ಲಿ ಆಯ್ಕೆಗೊಳಿಸಲಾಗುವುದು.
• ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ (ಎ.ಹೆಚ್.ಪಿ) 1.29 ಲಕ್ಷ ಮನೆಗಳ ನಿರ್ಮಾಣ ಕಾರ್ಯವನ್ನು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು ಅನುಷ್ಠಾನಗೊಳಿಸುತ್ತಿದೆ. ರಾಜ್ಯ ಸರ್ಕಾರದಿಂದ 1,136 ಕೋಟಿ ರೂ.ಗಳ ಅನುದಾನವನ್ನು ಹೆಚ್ಚುವರಿಯಾಗಿ ಫಲಾನುಭವಿಗಳ ವಂತಿಕೆಗೆ ಎದುರಾಗಿ ಒದಗಿಸಿ 2025-26ನೇ ಸಾಲಿಗೆ ಒಟ್ಟಾರೆ 79,134 ಮನೆಗಳನ್ನು ಲೋಕಾರ್ಪಣೆ ಮಾಡಲಾಗಿದೆ. ಇದರಿಂದ ಕೊಳಗೇರಿ ನಿವಾಸಿಗಳಿಗೆ ಶಾಶ್ವತ ಸೂರು ಕಲ್ಪಿಸಿದಂತಾಗಿದೆ.
• ʻಕೆ.ಹೆಚ್.ಬಿ ಸೂರ್ಯ ಕ್ರೀಡಾ ಗ್ರಾಮʼ ಎಂಬ ಹೆಸರಿನಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನಲ್ಲಿ 80,000 ಆಸನ ಸಾಮರ್ಥ್ಯವುಳ್ಳ ಕ್ರಿಕೆಟ್ ಕ್ರೀಡಾಂಗಣ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಕೂಟಗಳನ್ನು ನಡೆಸಲು ಅನುಕೂಲವಾಗುವಂತೆ ಅಂತಾರಾಷ್ಟ್ರೀಯ ಕ್ರೀಡಾಂಗಣವನ್ನು ನಿರ್ಮಾಣ ಮಾಡಲಾಗುವುದು.
• ಕೆ.ಹೆಚ್.ಬಿ. ವತಿಯಿಂದ ನಮ್ಮ ಮನೆ ಯೋಜನೆಯಡಿಯಲ್ಲಿ ಮುಂದಿನ ಎರಡು ವರ್ಷಗಳಲ್ಲಿ 50 ಸಾವಿರ ನಿವೇಶನಗಳನ್ನು ರಿಯಾಯತಿ ದರದಲ್ಲಿ ವಿತರಿಸಲು ಉದ್ದೇಶಿಸಲಾಗಿದೆ.


ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳು
• ನಮ್ಮ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಬಡವರ ಹಸಿವು ನೀಗಿಸುವ ಉದ್ದೇಶದಿಂದ 4.54 ಕೋಟಿ ಫಲಾನುಭವಿಗಳಿಗೆ ಪ್ರತಿ ಮಾಹೆ ಐದು ಕೆ.ಜಿ ಹೆಚ್ಚುವರಿ ಅಕ್ಕಿಯನ್ನು ಯಶಸ್ವಿಯಾಗಿ ವಿತರಿಸಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆಗಾಗಿ 17,167 ಕೋಟಿ ರೂ. ವೆಚ್ಚ ಮಾಡಲಾಗಿದೆ. ಪ್ರಸ್ತುತನೀಡಲಾಗುತ್ತಿರುವಹೆಚ್ಚುವರಿ ಐದು ಕೆಜಿಅಕ್ಕಿಯಬದಲಾಗಿಪ್ರತಿಮಾಹೆಪೌಷ್ಟಿಕಾಂಶವುಳ್ಳತೊಗರಿಬೇಳೆ, ಸಕ್ಕರೆ, ಉಪ್ಪುಮತ್ತುಅಡುಗೆಎಣ್ಣೆಒಳಗೊಂಡʻಇಂದಿರಾಆಹಾರಕಿಟ್ʼವಿತರಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ 2026-27ನೇ ಸಾಲಿನಲ್ಲಿ 6,200 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ.
• ಆಹಾರಧಾನ್ಯಗಳವಿತರಣೆಗಾಗಿನೀಡಲಾಗುವಚಿಲ್ಲರೆಹಾಗೂಸಗಟುಲಾಭಾಂಶದಪಾವತಿಯಲ್ಲಿವಿಳಂಬವನ್ನುನಿವಾರಿಸಲು FIST Applicationಮೂಲಕಲಾಭಾಂಶವನ್ನುನೇರವಾಗಿಪಾವತಿಸಲಾಗುವುದು.
• ಪ್ರಸ್ತುತಜಾರಿಯಲ್ಲಿರುವಇಲಾಖೆಯಸಹಾಯವಾಣಿ (1967) ವ್ಯವಸ್ಥೆಯನ್ನುಸ್ವಯಂಚಾಲಿತದೂರುಕೇಂದ್ರ, ಧ್ವನಿಚಾಟ್ಬಾಟ್ಮತ್ತುಲೈವ್ಕರೆವರ್ಗಾವಣೆವ್ಯವಸ್ಥೆಗಳನ್ನುಒಳಗೊಂಡAIಆಧಾರಿತʻSmart Annavaniʼಯನ್ನಾಗಿಪರಿವರ್ತಿಸಲಾಗುವುದು.
• ದಾಸೋಹಯೋಜನೆಯಡಿಈಗಾಗಲೇರಾಜ್ಯದಾದ್ಯಂತ 274 ಕಲ್ಯಾಣಸಂಸ್ಥೆಗಳ 32,059 ಫಲಾನುಭವಿಗಳಿಗೆ 14 ಕೋಟಿರೂ. ವೆಚ್ಚದಲ್ಲಿಆಹಾರಭದ್ರತೆಯನ್ನುಒದಗಿಸಲಾಗುತ್ತಿದ್ದು, ಪ್ರಸಕ್ತವರ್ಷದಲ್ಲಿ 34 ಹೊಸಕಲ್ಯಾಣಸಂಸ್ಥೆಗಳಲ್ಲಿಇರುವ
6,701 ಫಲಾನುಭವಿಗಳಿಗೂ ವಿಸ್ತರಿಸಲಾಗುವುದು.


ಕಾರ್ಮಿಕ
• ರಾಜ್ಯದಲ್ಲಿನ ಸರ್ಕಾರಿ ನೌಕರರನ್ನೊಳಗೊಂಡಂತೆ ವಿವಿಧ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಯರಿಗೆ ಋತುಚಕ್ರದ ಸಮಯದಲ್ಲಿ ಒಂದು ದಿನದ ವೇತನ ಸಹಿತ ರಜೆಯನ್ನು ಪಡೆಯಲು ಅವಕಾಶ ಮಾಡಿಕೊಡಲಾಗಿದೆ.
• ಕರ್ನಾಟಕ ರಾಜ್ಯ ಕಾರ್ಮಿಕರ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರಿಗೆ ಮತ್ತು ಅವರ ಕುಟುಂಬದ ಅವಲಂಬಿತರಿಗೆ ವಿವಿಧ ಕಲ್ಯಾಣ ಕಾರ್ಯಕ್ರಮಗಳಡಿ ಒಟ್ಟು 43,936 ಅರ್ಹ ಫಲಾನುಭವಿಗಳಿಗೆ ಒಟ್ಟು 39 ಕೋಟಿ ರೂ.ಗಳ ಧನಸಹಾಯ ನೀಡಲಾಗಿದೆ.
• ಆಶಾದೀಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಒಟ್ಟು 5,062 ಅಭ್ಯರ್ಥಿಗಳ ಪರವಾಗಿ
18 ಕೋಟಿ ರೂ.ಗಳನ್ನು ಅರ್ಹ ಉದ್ಯೋಗದಾತರಿಗೆ ಮರುಪಾವತಿಸಲಾಗಿದೆ.
• ಕಟ್ಟಡ ಕಾರ್ಮಿಕರ ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸಲು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ತಲಾ 60 ಕೋಟಿ ರೂ. ವೆಚ್ಚದಲ್ಲಿ 10 GTTC ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಇದಕ್ಕಾಗಿ ಒಟ್ಟಾರೆ
600 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದು.
• 6 ರಿಂದ 12ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ
2025-26ನೇ ಸಾಲಿನಲ್ಲಿ 42 ಶ್ರಮಿಕ ವಸತಿ ಶಾಲೆಗಳನ್ನು ಅನುಮೋದಿಸಲಾಗಿದೆ. 2026-27ನೇ ಸಾಲಿನಲ್ಲಿ ಹೆಚ್ಚುವರಿಯಾಗಿ 6೨ಶ್ರಮಿಕ ವಸತಿ ಶಾಲೆಗಳನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಈ ಎಲ್ಲಾ 10೪ಶಾಲೆಗಳನ್ನು ಬಾಡಿಗೆ ಕಟ್ಟಡಗಳಲ್ಲಿ ಪ್ರಾರಂಭಿಸಲಾಗುವುದು. (ಅನುಬಂಧ-4 ಮತ್ತು 5)
• ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರು ಹಾಗೂ ಅವರ ಮಕ್ಕಳಿಗೆ ವೃತ್ತಿ ಬುನಾದಿ ಹಾಗೂ ಉನ್ನತಿ ಕೌಶಲ್ಯ ತರಬೇತಿಯನ್ನು ನೀಡಲು ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಅತ್ಯಾಧುನಿಕ ಮೂಲಸೌಕರ್ಯವನ್ನು ಒಳಗೊಂಡ ಕೌಶಲ್ಯ ತರಬೇತಿ ಅಕಾಡೆಮಿಯನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು.
• ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಕೌಶಲ್ಯಾಧಾರಿತ ಉದ್ಯೋಗ ದೊರಕಿಸಿಕೊಡುವ ಉದ್ದೇಶದಿಂದ ಆನ್ಲೈನ್ ಉದ್ಯೋಗ ವಿನಿಮಯ ಕೇಂದ್ರವನ್ನು ಸ್ಥಾಪಿಸುವʻಕಾಯಕ ಭಾಗ್ಯʼ ಎಂಬ ಯೋಜನೆಯನ್ನು ಐದು ಕೋಟಿ ರೂ. ವೆಚ್ಚದಲ್ಲಿ ಜಾರಿಗೆ ತರಲಾಗುವುದು.
• ಕಾರ್ಮಿಕ ರಾಜ್ಯ ವಿಮಾ ಸೊಸೈಟಿಯ ರಚನೆಯಿಂದಾಗಿ ಪ್ರಸ್ತುತ ನೀಡಲಾಗುತ್ತಿರುವ ವೈದ್ಯಕೀಯ ಸೇವೆಗಳನ್ನು 50 ಲಕ್ಷ ವಿಮಾದಾರರಿಗೆ ಹಾಗೂ 150 ಲಕ್ಷ ಅವಲಂಬಿತರಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ಒದಗಿಸಲಾಗುವುದು. ಈ ಸೊಸೈಟಿಯ ಮುಖಾಂತರ ಕೆಳಕಂಡ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು:
• ಹುಬ್ಬಳ್ಳಿ, ಇಂದಿರಾನಗರ, ಮೈಸೂರು ಮತ್ತು ದೊಡ್ಡಬಳ್ಳಾಪುರದಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ಹಾಗೂ ಇಂದಿರಾನಗರದಲ್ಲಿ ಮೂರು ವರ್ಷದ PG (DNB) ಕೋರ್ಸ್ಗಳನ್ನು ಪ್ರಾರಂಭಿಸಲಾಗುವುದು;
• Breast and Cervical Cancer ತಪಾಸಣೆ ಮತ್ತು Cervical Cancer ತಡೆಗಟ್ಟುವ ಲಸಿಕಾ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಲಾಗುವುದು;
• ರಾಯಚೂರು, ವಿಜಯಪುರ, ಬಾಗಲಕೋಟೆ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ, ಕೆ.ಜಿ.ಎಫ್ ಮತ್ತು ಚಿಕ್ಕಮಗಳೂರಿನಲ್ಲಿರುವ ಕಾರ್ಮಿಕ ರಾಜ್ಯ ವಿಮಾ (ESI) ಚಿಕಿತ್ಸಾಲಯಗಳನ್ನು ಉನ್ನತೀಕರಿಸಲಾಗುವುದು.
ಕೌಶಲ್ಯಾಭಿವೃದ್ಧಿ
• ಯುವನಿಧಿ ಯೋಜನೆಯಡಿ ಇಲ್ಲಿಯವರೆಗೆ ಒಟ್ಟು 3,08,267 ಅರ್ಹ ಫಲಾನುಭವಿಗಳಿಗೆ 913 ಕೋಟಿ ರೂ. ಮೊತ್ತದ ನಿರುದ್ಯೋಗ ಭತ್ಯೆಯನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗಿದೆ.
• ಇಲಾಖೆಯ ವಿವಿಧ ಯೋಜನೆ ಹಾಗೂ ಸಂಸ್ಥೆಗಳಡಿ
ಒಟ್ಟಾರೆ 80,086 ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗಿದೆ. ಯುವಕ/ಯುವತಿಯರ ಉದ್ಯೋಗಾರ್ಹತೆ ಮತ್ತು ಉದ್ಯಮಶೀಲತೆಯನ್ನು ಇನ್ನಷ್ಟು ಉತ್ತೇಜಿಸಲು
CMKKY 2.0 ಜಾರಿಗೊಳಿಸಲಾಗಿದೆ.
• ನಮ್ಮ ಸರ್ಕಾರದ ವತಿಯಿಂದ ಆಯೋಜಿಸಲಾಗಿದ್ದ 11 ಬೃಹತ್ ಉದ್ಯೋಗ ಮೇಳಗಳಲ್ಲಿ ಒಟ್ಟು 1.16 ಲಕ್ಷ ಅಭ್ಯರ್ಥಿಗಳು ಹಾಗೂ 1,946 ಉದ್ಯೋಗದಾತರು ಭಾಗವಹಿಸಿದ್ದು, 19,863 ಅಭ್ಯರ್ಥಿಗಳು ಆಯ್ಕೆಗೊಂಡಿರುತ್ತಾರೆ. 35,983 ಅಭ್ಯರ್ಥಿಗಳಿಗೆ ಉದ್ಯೋಗ ನಿಯೋಜಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ.
• ರಾಜ್ಯದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳು, ಕೆಜಿಟಿಟಿಐಗಳು, ಕೆಎಸ್ಡಿಎ ಮತ್ತು ಜೆಟಿಎಸ್ಗಳ ಮೂಲಭೂತ ಸೌಕರ್ಯ ಮತ್ತು ತರಬೇತಿ ಗುಣಮಟ್ಟವನ್ನು ಹೆಚ್ಚಿಸಲು ADB ಸಹಭಾಗಿತ್ವದಲ್ಲಿ ಒಟ್ಟು 1,386 ಕೋಟಿ ರೂ.ಗಳ ಐದು ವರ್ಷಗಳ ಅವಧಿಯ “K-QUEST” (KARNATAKA – Quality Upgradation for Employment and Skills Transformation)ಯೋಜನೆಯನ್ನು ಜಾರಿಗೊಳಿಸಲಾಗುವುದು.
• ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಕೇಂದ್ರಸರ್ಕಾರವು ಘೋಷಣೆ ಮಾಡಿರುವ PM- SETU ಯೋಜನೆ ಅಡಿಯಲ್ಲಿಕೇಂದ್ರ, ರಾಜ್ಯ ಮತ್ತು ಉದ್ದಿಮೆಗಳ ಸಹಭಾಗಿತ್ವದಲ್ಲಿ Hub & Spoke ಮಾದರಿಯಲ್ಲಿ ಕ್ಲಸ್ಟರ್ಗಳನ್ನಾಗಿ ಉನ್ನತೀಕರಿಸಲಾಗುವುದು. 2026-27ನೇ ಸಾಲಿನಲ್ಲಿ ಎರಡು ಕ್ಲಸ್ಟರ್ ಗಳನ್ನು
241 ಕೋಟಿ ರೂ. ಘಟಕ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ಉದ್ದೇಶಿಸಿದೆ.
• ಮೈಸೂರು ಮತ್ತು ಕಲಬುರಗಿಯಲ್ಲಿ ತಲಾ 16 ಕೋಟಿ ರೂ. ವೆಚ್ಚದಲ್ಲಿ ಷ್ನೈಡರ್ ಎಲೆಕ್ಟ್ರಿಕ್ (Schneider Electric)
ಯೂತ್ ಇಂಪ್ಯಾಕ್ಟ್ ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಿದೆ. ಇದರಿಂದ ಪ್ರತಿ ವರ್ಷಒಟ್ಟಾರೆ2,000 ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಮತ್ತು ಉದ್ಯೋಗವಕಾಶ ಕಲ್ಪಿಸಲು ನೆರವಾಗಲಿದೆ.
• ಐಟಿಐ ಕಲಿತ ವಿದ್ಯಾರ್ಥಿನಿಯರಿಗೆ ಉದ್ಯಮಗಳಲ್ಲಿ ವಿಪುಲವಾದ ಉದ್ಯೋಗಾವಕಾಶಗಳಿದ್ದು,ಹೆಣ್ಣುಮಕ್ಕಳಪ್ರವೇಶ ಹೆಚ್ಚಿಸಲುಮಹಿಳಾ ತರಬೇತಿದಾರರಿಗೆ 1,200 ರೂ.ಗಳ ವಾರ್ಷಿಕ ಬೋಧನಾ ಶುಲ್ಕ ವಿನಾಯಿತಿ ನೀಡಲಾಗುವುದು.
• ಐಟಿಐ ವಿದ್ಯಾರ್ಥಿಗಳಿಗೆ ಎರಡು ಹೆಚ್ಚುವರಿ ವಿಷಯಗಳಲ್ಲಿ ಬೋಧನೆ ಮಾಡುವ ಮೂಲಕ ಉನ್ನತ ವ್ಯಾಸಂಗ ಅಥವಾ ಉತ್ತಮ ಉದ್ಯೋಗ ಪಡೆದುಕೊಳ್ಳುವ ಅವಕಾಶ ಕಲ್ಪಿಸಲು ಪದವಿ ಪೂರ್ವ ಪ್ರಮಾಣಪತ್ರವನ್ನು ನೀಡಲಾಗುವುದು.
• ಕೊಪ್ಪಳದ ಜಿಟಿಟಿಸಿ–ಎಂಎಸ್ಡಿಸಿಯಲ್ಲಿ M/s Aequs Toy Cluster Industry ಯಕಾರ್ಯತಂತ್ರದ ಸಹಯೋಗದೊಂದಿಗೆ Precision Tool Engineeringನಲ್ಲಿ ತಂತ್ರಜ್ಞಾನ ಕೇಂದ್ರವನ್ನುಕೆ.ಕೆ.ಆರ್.ಡಿ.ಬಿ.ಯ 10 ಕೋಟಿ ರೂ.ಗಳ ಅನುದಾನದೊಂದಿಗೆ ಒಟ್ಟಾರೆ 20 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪನೆ ಮಾಡಲಾಗುವುದು.
• ಜಿಲ್ಲೆಗಳಲ್ಲಿ ಬೇಡಿಕೆ ಆಧಾರಿತ ಕೌಶಲ್ಯ ಅಭಿವೃದ್ಧಿಯನ್ನು ಬೆಂಬಲಿಸಲು ಒಂದು ಕೋಟಿ ರೂ. ವೆಚ್ಚದಲ್ಲಿ Challenge fund ಸ್ಥಾಪಿಸಲಾಗುವುದು. ಈ ನಿಧಿ ಸ್ಥಳೀಯ ಕಾರ್ಮಿಕ ಹಾಗೂ ಉದ್ಯೋಗ ಸಂಬಂಧಿತ ಸವಾಲುಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ.
• ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರ (KSDA) ಅಡಿಯಲ್ಲಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM)ಜೊತೆಗೂಡಿ ಕರ್ನಾಟಕ ಕೌಶಲ್ಯ ಬುದ್ಧಿಮತ್ತೆ ಮತ್ತು ಕಾರ್ಯತಂತ್ರ ಘಟಕವನ್ನು (KSISU) ಸ್ಥಾಪಿಸಲಾಗುವುದು. ಆಯ್ದ ದೇಶಗಳು ಮತ್ತು ಸಂಸ್ಥೆಗಳೊಂದಿಗೆ ಪಾಲುದಾರಿಕೆಯ ಮೂಲಕ ಜಾಗತಿಕ ಕೌಶಲ್ಯ ಮೈತ್ರಿಕೂಟಗಳನ್ನು ಆರಂಭಿಸಲಾಗುವುದು.
• ಬಹು ವೇದಿಕೆಗಳ ಮೂಲಕ ಪ್ರಸ್ತುತ ನೀಡಲಾಗುತ್ತಿರುವ ಎಲ್ಲಾ ಕೌಶಲ್ಯ ಅಭಿವೃದ್ಧಿ ಯೋಜನೆಗಳು ಮತ್ತು ಸೇವೆಗಳನ್ನು ಸಂಯೋಜಿಸಿ ಏಕೀಕೃತ ಕೌಶಲ್ಯ ಅಭಿವೃದ್ಧಿ ಪೋರ್ಟಲ್ ಅನ್ನು ಎರಡುಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.
• ಗ್ರಾಮೀಣ ಭಾಗದಲ್ಲಿ ವಯೋವೃದ್ಧರ ಕ್ಷೇಮಾಭಿವೃದ್ಧಿ ಜೊತೆಗೆ ಬಾಣಂತಿಯರು ಹಾಗೂ ಶಿಶುಗಳ ಆರೈಕೆ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸುವ ಉದ್ದೇಶದಿಂದ ಸ್ವ-ಸಹಾಯ ಗುಂಪಿನ ಮಹಿಳೆಯರಿಗೆ ಮಾನ್ಯತೆ ಪಡೆದ ಸಂಸ್ಥೆಗಳ ಮೂಲಕ ʻಆರೈಕೆ ಉದ್ಯಮಶೀಲತಾ ತರಬೇತಿʼಯನ್ನು ನೀಡಲಾಗುವುದು.
• 2026 ಅನ್ನು ʻಅಂತಾರಾಷ್ಟ್ರೀಯ ರೈತ ಮಹಿಳಾ ವರ್ಷʼವೆಂದು ಆಚರಿಸುತ್ತಿರುವ ಹಿನ್ನೆಲೆಯಲ್ಲಿ,ಕೃಷಿ ಉತ್ತೇಜನದೊಂದಿಗೆ ಸುಸ್ಥಿರ ಮತ್ತು ದೀರ್ಘಾವಧಿಯ ಗ್ರಾಮೀಣಾಭಿವೃದ್ಧಿಗಾಗಿ 5,000 ರೈತ ಮಹಿಳೆಯರಿಗೆ ಆಧುನಿಕ ಕೃಷಿ ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ನೀಡಲಾಗುವುದು.
• ನಗರ ಪ್ರದೇಶಗಳ ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣ ಒದಗಿಸಲು ಸಮೀಕ್ಷೆ ನಡೆಸುವುದು, ಗುರುತಿನ ಚೀಟಿಗಳು ಮತ್ತು ಮಾರಾಟ ಪ್ರಮಾಣಪತ್ರಗಳನ್ನು ನೀಡಲು ಹಾಗೂ ಪಟ್ಟಣ ಮಾರಾಟ ಸಮಿತಿಗಳನ್ನು ರಚಿಸುವುದಕ್ಕಾಗಿ ಏಳು ಕೋಟಿ ರೂ.ಗಳನ್ನು ಒದಗಿಸಲಾಗುವುದು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
• ಐದನೇ ರಾಜ್ಯ ಹಣಕಾಸು ಆಯೋಗವು 2026-2030ರ ವರದಿಯನ್ನು ಸಲ್ಲಿಸಿದೆ. ಸ್ಥಳೀಯ ಸಂಸ್ಥೆಗಳಿಗೆ ಹಂಚಿಕೆ ಮಾಡುತ್ತಿರುವ ರಾಜ್ಯ ಸರ್ಕಾರದ ಸಾಲೇತರ ನಿವ್ವಳ ಸ್ವಂತ ರಾಜಸ್ವ ಆದಾಯದ (NLNORR) ಪ್ರಮಾಣವನ್ನು ಶೇ.48ರಿಂದ ಶೇ.50ಕ್ಕೆ ಹೆಚ್ಚಿಸಲಾಗುವುದು. ಇದರಲ್ಲಿ ಶೇ.35ರಷ್ಟನ್ನು ಪಂಚಾಯತ್ ರಾಜ್ ಸಂಸ್ಥೆಗಳಿಗೆ ಹಾಗೂ ಶೇ.15ರಷ್ಟನ್ನು ನಗರ ಸ್ಥಳೀಯ ಸಂಸ್ಥೆಗಳಿಗೆ ಹಂಚಿಕೆ ಮಾಡಲಾಗುವುದು.
• ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಒಟ್ಟಾರೆ
69,488 ಕೋಟಿ ರೂ. ಮೊತ್ತದ ಕಾಮಗಾರಿಗಳು ಅನುಮೋದನೆಯಾಗಿದ್ದು, ಇದರಲ್ಲಿ ಕೇಂದ್ರ ಸರ್ಕಾರದ ಪಾಲು 30,888 ಕೋಟಿ ರೂ.ಗಳಾಗಿದ್ದು, ರಾಜ್ಯ ಸರ್ಕಾರದ ಪಾಲು 38,600 ಕೋಟಿ ರೂ.ಗಳಾಗಿರುತ್ತದೆ. ಕೇಂದ್ರ ಸರ್ಕಾರದಿಂದ ಇದುವರೆಗೆ ಕೇವಲ 11,786 ಕೋಟಿ ರೂ.ಗಳನ್ನು ಮಾತ್ರ
ಬಿಡುಗಡೆ ಮಾಡಿದ್ದು, ಇನ್ನೂ 19,102 ಕೋಟಿ ರೂ.ಗಳನ್ನು
ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕಾಗಿರುತ್ತದೆ.
ರಾಜ್ಯ ಸರ್ಕಾರದಿಂದ ಒದಗಿಸಬೇಕಾದ ಅನುದಾನದಲ್ಲಿ ಈಗಾಗಲೇ 27,098 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು,
11,502 ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಬೇಕಾಗಿರುತ್ತದೆ. ಕೇಂದ್ರ ಸರ್ಕಾರ 2025-26ನೇ ಸಾಲಿನಲ್ಲಿ ಯಾವುದೇ ಅನುದಾನ ಬಿಡುಗಡೆ ಮಾಡದಿದ್ದರೂ ಸಹ ಈ ಯೋಜನೆಯ ಹಿತದೃಷ್ಟಿಯಿಂದ ರಾಜ್ಯ ಸರ್ಕಾರದಿಂದಒಟ್ಟಾರೆ 15,500 ಕೋಟಿ ರೂ.ಗಳಷ್ಟು ಅನುದಾನವನ್ನು ಹೆಚ್ಚುವರಿಯಾಗಿ ಬಿಡುಗಡೆ ಮಾಡಿದೆ. 2026-27ನೇ ಸಾಲಿನಲ್ಲಿ ಈ ಯೋಜನೆಗಾಗಿ 10,433 ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿರುತ್ತದೆ.
• ಗ್ರಾಮೀಣ ಕುಟುಂಬಗಳಿಗೆ ಜೀವನೋಪಾಯ ಭದ್ರತೆಯನ್ನು ಒದಗಿಸುವ ಮಹತ್ವಾಕಾಂಕ್ಷೆಯಿಂದ ಯು.ಪಿ.ಎ. ಸರ್ಕಾರವು 2004ರಲ್ಲಿ ಜಾರಿಗೆ ತಂದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು (MGNREGS) ಗ್ರಾಮೀಣ ಭಾಗದಲ್ಲಿ ವಿಕೇಂದ್ರೀಕೃತ ಯೋಜನೆಯನ್ನು ರೂಪಿಸುವುದಕ್ಕೆ ಉತ್ತೇಜನ ನೀಡುವುದರೊಂದಿಗೆ ಗ್ರಾಮೀಣ ಮೂಲಸೌಕರ್ಯ ಮತ್ತು ದೀರ್ಘಕಾಲೀನ ಬಾಳಿಕೆ ಬರುವ ಸಮುದಾಯ
ಆಸ್ತಿಗಳ ಸೃಷ್ಟಿಗೆ ಮಹತ್ವದ ಕೊಡುಗೆಯನ್ನು ನೀಡಿರುತ್ತದೆ.
ಈ ಯೋಜನೆಯಡಿ ರಾಜ್ಯದಲ್ಲಿ ಸುಮಾರು 182 ಕೋಟಿ ಮಾನವ ದಿನಗಳ ಉದ್ಯೋಗವು ಸೃಜನೆಯಾಗಿರುತ್ತದೆ. ಒಟ್ಟಾರೆ
61,000 ಕೋಟಿ ರೂ. ವೇತನ ಪಾವತಿಸಲಾಗಿದ್ದು, ಸುಮಾರು
77 ಲಕ್ಷ ಆಸ್ತಿಗಳು ನಿರ್ಮಾಣವಾಗಿರುತ್ತವೆ. ಪ್ರಸಕ್ತ ವರ್ಷದಲ್ಲೇ ಸುಮಾರು 71 ಲಕ್ಷ ಗ್ರಾಮೀಣ ಕುಟುಂಬಗಳು ಈ ಯೋಜನೆಯ ಪ್ರಯೋಜನ ಪಡೆದಿರುತ್ತವೆ.
• ಇದೀಗ ಕೇಂದ್ರ ಸರ್ಕಾರವು ಈ ಯೋಜನೆಯನ್ನು ರದ್ದುಗೊಳಿಸಿ VB-G-RAM-G ಯೋಜನೆಯನ್ನು ಜಾರಿಗೆ ತಂದಿದ್ದು, ಇದು ನರೇಗಾ ಯೋಜನೆಯ ಮೂಲೋದ್ದೇಶವಾದ ಹಕ್ಕು ಆಧಾರಿತ (Rights-based) ದೃಷ್ಟಿಕೋನವನ್ನು ದುರ್ಬಲಗೊಳಿಸುವ ಕ್ರಮವಾಗಿದೆ ಹಾಗೂ ಮಹಾತ್ಮಾ ಗಾಂಧಿಯವರ ಗ್ರಾಮ ಸ್ವರಾಜ್ ಪರಿಕಲ್ಪನೆಗೆ ವಿರುದ್ಧವಾಗಿರುತ್ತದೆ.
• ಈ ಯೋಜನೆಯ ಜಾರಿಯಿಂದ ಈ ಕೆಳಗಿನ ಅನಾಹುತಗಳು ಸೃಷ್ಟಿಯಾಗಿರುತ್ತವೆ:
• ಬೇಡಿಕೆ ಆಧಾರಿತ ಉದ್ಯೋಗ ಖಾತರಿಯಿಂದ ದೂರ ಸರಿದು ಕೇಂದ್ರದಿಂದ ನಿರ್ಧರಿಸಲ್ಪಡುವ ಉದ್ಯೋಗ ಹಂಚಿಕೆ ವ್ಯವಸ್ಥೆಗೆ ಅವಕಾಶವಾಗುವುದು.
• ಸಂವಿಧಾನದ 73ನೇ ತಿದ್ದುಪಡಿಯ ಮೂಲ ತತ್ವಕ್ಕೆ ವಿರುದ್ಧವಾಗಿದ್ದು, ಪಂಚಾಯಿತಿಗಳ ನಿರ್ಧರಣಾಧಿಕಾರಕ್ಕೆ ಧಕ್ಕೆಯಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.
• ಯೋಜನೆಯ ರೂಪಿಸುವಿಕೆ ಮತ್ತು ಅನುಷ್ಠಾನಗಳ ಕೇಂದ್ರೀಕರಣ ಹೆಚ್ಚಳವಾಗುವುದು.
• ಪರೋಕ್ಷವಾಗಿ ಗುತ್ತಿಗೆದಾರರ ಭಾಗವಹಿಸುವಿಕೆಗೆ ಅವಕಾಶ ನೀಡುವ ವ್ಯವಸ್ಥೆಯಿಂದಾಗಿ ಗ್ರಾಮೀಣ ಕಾರ್ಮಿಕರಿಗೆ ನೇರ ಉದ್ಯೋಗ ಅವಕಾಶಗಳು ಕಡಿಮೆಯಾಗುವವು.
• ಕೇಂದ್ರದಿಂದ ಹೇರಲ್ಪಡುವ ಆಡಳಿತಾತ್ಮಕ ಮತ್ತು ನಿಯಾಮಕ ನಿಯಂತ್ರಣಗಳಿಂದ ಕಾಮಗಾರಿಗಳ ಸಮಯೋಚಿತ ಜಾರಿಗೆ ಅಡಚಣೆ ಉಂಟಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.
• ಗ್ರಾಮಪಂಚಾಯಿತಿಗಳನ್ನು ಸಬಲಗೊಳಿಸಿ ಗ್ರಾಮೀಣ ಜೀವನೋಪಾಯವನ್ನು ಬಲಪಡಿಸಿದ್ದ ಹಿಂದಿನ ವ್ಯವಸ್ಥೆಯನ್ನು ಪುನಃಸ್ಥಾಪಿಸುವಂತೆ ಕೇಂದ್ರ ಸರ್ಕಾರವನ್ನು ನಮ್ಮ ಸರ್ಕಾರವು ತೀವ್ರವಾಗಿ ಆಗ್ರಹಿಸುತ್ತದೆ. ಗ್ರಾಮೀಣ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಹಾಗೂ ವಿಕೇಂದ್ರೀಕೃತ ಆಡಳಿತದ ತತ್ವಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು, ಅಗತ್ಯವಿದ್ದಲ್ಲಿ ಕಾನೂನು ಹೋರಾಟವನ್ನೂ ಸಹ ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ.
• ಕಲ್ಯಾಣ ಕರ್ನಾಟಕದ ರಸ್ತೆ ಅಭಿವೃದ್ಧಿಗಾಗಿ ʻಕಲ್ಯಾಣ ಪಥʼ ಯೋಜನೆಯಡಿ 1,000 ಕೋಟಿ ರೂ.ಗಳ ವೆಚ್ಚದಲ್ಲಿ 1,125 ಕಿ.ಮೀ ಉದ್ದದ ರಸ್ತೆ ಕಾಮಗಾರಿಗಳನ್ನು ತೆಗೆದುಕೊಂಡಿದ್ದು, ವಿವಿಧ ಹಂತದ ಪ್ರಗತಿಯಲ್ಲಿರುತ್ತವೆ. ಇದುವರೆಗೆ ಈ ಉದ್ದೇಶಕ್ಕಾಗಿ
238 ಕೋಟಿ ರೂ.ಗಳ ವೆಚ್ಚ ಭರಿಸಿದ್ದು, ಉಳಿಕೆ ಕಾಮಗಾರಿಗಳನ್ನು ಪ್ರಸಕ್ತ ವರ್ಷದಲ್ಲಿ ಪೂರ್ಣಗೊಳಿಸಲಾಗುವುದು.
• ADB ನೆರವಿನೊಂದಿಗೆಗ್ರಾಮೀಣ ರಸ್ತೆ ಸಂಪರ್ಕ ಜಾಲವನ್ನು ವ್ಯವಸ್ಥಿತವಾಗಿ ಮತ್ತು ಗುಣಾತ್ಮಕವಾಗಿ ಅಭಿವೃದ್ಧಿಪಡಿಸುವ
ʻಪ್ರಗತಿ ಪಥʼ ಯೋಜನೆಯಡಿ 7,110 ಕಿ.ಮೀ. ಉದ್ದದ
1,೨92 ರಸ್ತೆಗಳ ಅಭಿವೃದ್ಧಿಯನ್ನು 5,190 ಕೋಟಿ ರೂ.ಗಳ ವೆಚ್ಚದಲ್ಲಿ ಅನುಮೋದಿಸಲಾಗಿದೆ. ಇದರಲ್ಲಿ 783 ರಸ್ತೆಗಳ ಸರ್ವೆ ಕಾರ್ಯ ಪೂರ್ಣಗೊಂಡಿದ್ದು, 655 ರಸ್ತೆಗಳ ಡಿ.ಪಿ.ಆರ್.ಗಳನ್ನು ತಯಾರಿಸಲಾಗಿದೆ. ಇದಕ್ಕಾಗಿ 2026-27ನೇ ಸಾಲಿನಲ್ಲಿ
500 ಕೋಟಿ ರೂ.ಗಳನ್ನು ಒದಗಿಸಲಾಗಿರುತ್ತದೆ.
• ಕುಡಿಯುವ ನೀರಿನ ಮೇಲ್ಮಟ್ಟ ಜಲಾಗಾರಗಳ (OHT) ದೀರ್ಘಕಾಲಿಕ ಕಾರ್ಯಕ್ಷಮತೆಯನ್ನು ಖಚಿತಪಡಿಸುವ ಉದ್ದೇಶದಿಂದ 1,000 ಮೇಲ್ಮಟ್ಟ ಜಲಾಗಾರಗಳ ಸ್ವಚ್ಛತೆ, ಸುರಕ್ಷತೆ, ದುರಸ್ಥಿ ಹಾಗೂ ಕಾರ್ಯಾಚರಣೆ ಮತ್ತು ನಿರ್ವಹಣಾ ವ್ಯವಸ್ಥೆಗಳ ಸುಧಾರಣೆ ಮತ್ತು ಪುನಃಶ್ಚೇತನ ಕಾರ್ಯವನ್ನು ಒಟ್ಟಾರೆ
30 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುವುದು.
• ಕೊಪ್ಪಳ ಜಿಲ್ಲೆಯ ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕಿನ ಬನ್ನಿಕೊಪ್ಪ ಹಾಗೂ 23 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಯೋಜನೆಯನ್ನು 125 ಕೋಟಿ ರೂ.ಗಳ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.
• ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಹೆಸರನ್ನು ಚಿರಸ್ಥಾಯಿಗೊಳಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳನ್ನು ʻಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿʼಎಂದು ನಾಮಕರಣ ಮಾಡಲಾಗುವುದು.
• ಗ್ರಾಮ ಪಂಚಾಯಿತಿಗಳ ಆಸ್ತಿಗಳ ನಗದೀಕರಣ ಮತ್ತು ಮೌಲ್ಯವರ್ಧನೆಗೆ ಸ್ಥಳೀಯ ಆರ್ಥಿಕ ಬಲವರ್ಧನೆ ಕಾರ್ಯಕ್ರಮವನ್ನು (Local Economy Accelerator Program) ಆರಂಭಿಸಲಾಗುವುದು. ಈ ಯೋಜನೆಯಡಿ ಪ್ರಾಯೋಗಿಕವಾಗಿ ಪ್ರತಿ ವಿಭಾಗದ ಐದು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗ್ರಾಮೀಣ ಭಾಗದಲ್ಲಿ ಅವಶ್ಯವಿರುವ ಸೌಲಭ್ಯಗಳನ್ನು ಒಳಗೊಂಡ ಆದಾಯೋತ್ಪನ್ನ ಘಟಕಗಳನ್ನು ಪ್ರಸಕ್ತ ವರ್ಷ 25 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಿ ನಿರ್ವಹಿಸಲಾಗುವುದು.
• ವಿದ್ಯುಚ್ಛಕ್ತಿ ಬಿಲ್ಲುಗಳ ಪಾವತಿಯಲ್ಲಿ ಗ್ರಾಮ ಪಂಚಾಯಿತಿಗಳನ್ನು ಸ್ವಯಂ ಸುಸ್ಥಿರಗೊಳಿಸಲು (Self-Sustainable) ಹಾಗೂ ಅವಶ್ಯವಿರುವ ವಾರ್ಷಿಕ ಅಂದಾಜು 4,000 MW ವಿದ್ಯುಚ್ಛಕ್ತಿಯನ್ನು ಉತ್ಪಾದಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ Solar Micro Grid ಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸುವ ʻಅನಂತʼ ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.
ಯೋಜನೆ

• ನಗರ ಸ್ಥಳೀಯ ಸಂಸ್ಥೆಗಳಲ್ಲಿ ಏಕೀಕೃತ ಆಸ್ತಿ

ತೆರಿಗೆ ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶವನ್ನು ಸಂಯೋಜನೆಗೊಳಿಸಲಾಗುವುದು. ತೆರಿಗೆ ಬೇಡಿಕೆ ಮತ್ತು ಬಾಕಿ ವಿವರಗಳನ್ನು ಸ್ವಯಂ ಚಾಲಿತವಾಗಿ ಸೃಜಿಸುವ Unified Property Taxವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು.
• ನಗರ ಸ್ಥಳೀಯ ಸಂಸ್ಥೆಗಳ ಸ್ಥಿರಾಸ್ತಿಗಳು ಹಾಗೂ ವಾಣಿಜ್ಯ ಸಂಕೀರ್ಣಗಳನಿರ್ವಹಣಾಪ್ರಕ್ರಿಯೆಯನ್ನು ಸರಳಗೊಳಿಸಲು ಹಾಗೂ ಏಕರೂಪದ ನೀತಿಯನ್ನು ಪಾಲಿಸಲು ʻThe Estate Management Rules, 2026ʼ ಅನ್ನು ಜಾರಿಗೊಳಿಸಲಾಗುವುದು.
• ನಗರ ಪ್ರದೇಶಗಳ ಆಯ್ದ ಜಾಗಗಳಲ್ಲಿ ಸ್ಥಳೀಯ ಸಸ್ಯಗಳನ್ನು ದಟ್ಟವಾಗಿ ನೆಟ್ಟು ನೈಸರ್ಗಿಕ ಹಸಿರು ಪ್ರದೇಶಗಳನ್ನಾಗಿಸಲು
100 ʻMiyawaki ಪಾರ್ಕ್ʼ ಗಳನ್ನು ನಿರ್ಮಿಸಲಾಗುವುದು.
• ನಮ್ಮ ಸರ್ಕಾರವು ಅಸ್ತಿತ್ವಕ್ಕೆ ಬಂದ ನಂತರ ನಾಲ್ಕು ನಗರಸಭೆಗಳನ್ನು ಮಹಾನಗರ ಪಾಲಿಕೆಗಳನ್ನಾಗಿ, 13 ಪುರಸಭೆಗಳನ್ನು ನಗರಸಭೆಗಳನ್ನಾಗಿ, ಮೂರು ಪಟ್ಟಣ ಪಂಚಾಯಿತಿಗಳನ್ನು ಪುರಸಭೆಗಳನ್ನಾಗಿ ಹಾಗೂ 16 ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ.
• ಉನ್ನತ ವ್ಯಾಸಂಗ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗಾಗಿ ಬರುವ ವಿದ್ಯಾರ್ಥಿಗಳಿಗಾಗಿ ಧಾರವಾಡದಲ್ಲಿ ನಾಲ್ಕು ಹಾಗೂ ಬೆಂಗಳೂರಿನಲ್ಲಿ ಎರಡು ʻವಿದ್ಯಾರ್ಥಿ ಇಂದಿರಾ ಕ್ಯಾಂಟೀನ್ʼ ಗಳನ್ನು ಪ್ರಾರಂಭಿಸಲಾಗುವುದು.
• ಕಲಬುರಗಿ ನಗರಕ್ಕೆ 24/7 ಶಾಶ್ವತವಾಗಿ ಗುಣಮಟ್ಟದ ನೀರನ್ನು ಒದಗಿಸಲು ಅಂದಾಜು 1,863 ಕೋಟಿ ರೂ. ವೆಚ್ಚದ ಕಾಮಗಾರಿಗೆ ವಿಸ್ತೃತ ಯೋಜನಾ ವರದಿಯನ್ನು ಸಿದ್ಧಪಡಿಸಲಾಗುವುದು.
• ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುತ್ತಿರುವ ವಿವಿಧ ಭಾಗಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಒದಗಿಸಲಾಗುವುದು.
ಇಂಧನ
• ರಾಜ್ಯದ ಬೆನ್ನೆಲುಬಾಗಿರುವ 21 ಲಕ್ಷ ರೈತರ ಕೃಷಿ ಚಟುವಟಿಕೆಗೆ ಜೀವನಾಡಿಯಾಗಿರುವ 36 ಲಕ್ಷಗಳಷ್ಟು ನೀರಾವರಿ
ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ಸಹಾಯಧನ ಯೋಜನೆಯಡಿ ಕಳೆದ ಮೂರು ವರ್ಷಗಳಲ್ಲಿ 48 ಸಾವಿರ ಕೋಟಿ ರೂ.ಗಳನ್ನು ಒದಗಿಸಲಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ 19,290 ಕೋಟಿ ರೂ.ಒದಗಿಸಲಾಗಿದೆ.
• ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ʻಗೃಹ ಜ್ಯೋತಿʼ ಯೋಜನೆಯಡಿ ಇದುವರೆಗೆ 1.74 ಕೋಟಿ ಗ್ರಾಹಕರು ನೊಂದಾಯಿಸಿರುತ್ತಾರೆ. ಕಳೆದ ಮೂರು ವರ್ಷಗಳಲ್ಲಿ
ಈ ಯೋಜನೆಗೆ 28 ಸಾವಿರ ಕೋಟಿ ರೂ.ಗಳನ್ನು ಒದಗಿಸಲಾಗಿದ್ದು, ಪ್ರಸಕ್ತ ವರ್ಷದಲ್ಲಿ 10,578 ಕೋಟಿ ರೂ. ಒದಗಿಸಲಾಗುವುದು.
• KUSUM-C ಯೋಜನೆಯಡಿ ನೀರಾವರಿ ಪಂಪ್ಸೆಟ್ಗಳ ವಿಕೇಂದ್ರೀಕೃತ ಫೀಡರ್ ಸೌರೀಕರಣವನ್ನು ಕೈಗೊಳ್ಳಲಾಗಿದೆ. ಪ್ರಸಕ್ತ ಸಾಲಿನಲ್ಲಿ 2,777 MWಸಾಮರ್ಥ್ಯದ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುವುದು.
• ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರವು ʻಮುಖ್ಯಮಂತ್ರಿ ಸೌರ ಕೃಷಿ ಯೋಜನೆʼಎಂಬ ಹೊಸ ಯೋಜನೆಯನ್ನು KUSUM-C ಮಾದರಿಯಲ್ಲಿ ಜಾರಿಗೆ ತರಲಿದೆ. ಈ ಯೋಜನೆಯಡಿ KPTCL ಉಪಕೇಂದ್ರಗಳಲ್ಲಿRenewable Energy Service Company (RESCO)ಮಾದರಿಯಲ್ಲಿ ಅಂದಾಜು 10,500 ಕೋಟಿ ರೂ. ವೆಚ್ಚದಲ್ಲಿ 3,000 MW ಕ್ಷಮತೆಯ ಸೌರ ವಿದ್ಯುತ್ ಸ್ಥಾವರಗಳನ್ನು ಪ್ರಾರಂಭಿಸಲಾಗುವುದು.
• KPTCL ವತಿಯಿಂದ ಪ್ರಸರಣ ಜಾಲವನ್ನು ವೃದ್ಧಿಸಲು
2025-26ನೇ ಸಾಲಿನಲ್ಲಿ 100 ಹೊಸ ಉಪಕೇಂದ್ರಗಳನ್ನು ಸ್ಥಾಪಿಸಲು ಕ್ರಮಕೈಗೊಂಡಿದ್ದು, 2026-27ನೇ ಸಾಲಿನಲ್ಲಿಯೂ ಸಹ 100 ಹೊಸ ಉಪಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಿದೆ.
• 2025-26ನೇ ಸಾಲಿನಲ್ಲಿ ನವೀಕರಿಸಬಹುದಾದ ಇಂಧನ ಸಮತೋಲನ ಮತ್ತು ಗರಿಷ್ಠ ಲೋಡ್ ನಿರ್ವಹಣೆಗಾಗಿ
1,000MWhಬ್ಯಾಟರಿ ಶಕ್ತಿ ಸಂಗ್ರಹ ವ್ಯವಸ್ಥೆ (BESS) ಅಳವಡಿಕೆಯನ್ನು ಏಳು ಸಬ್ಸ್ಟೇಷನ್ಗಳಲ್ಲಿ ಕೈಗೆತ್ತಿಕೊಳ್ಳಲಾಗಿದೆ. 2026-27ನೇ ಸಾಲಿನಲ್ಲಿ 2,000 MWh BESS ಯೋಜನೆಯನ್ನು ಅಂದಾಜು 3,400 ಕೋಟಿ ರೂ. ವೆಚ್ಚದಲ್ಲಿ ಹುಲಿಯೂರು, ಪಾವಗಡ ಮತ್ತು ಕುಷ್ಟಗಿಯ ಸಬ್ಸ್ಟೇಷನ್ಗಳಲ್ಲಿ ಕೈಗೆತ್ತಿಕೊಳ್ಳಲಾಗುವುದು.
• ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಎಸ್ಕಾಂಗಳ ಸಹಯೋಗದೊಂದಿಗೆ ಸಾರ್ವಜನಿಕ ಸ್ಥಳಗಳಲ್ಲಿ ಅಂದಾಜು
777 ಕೋಟಿರೂ.ಗಳ ವೆಚ್ಚದಲ್ಲಿ 1,250 ವಾಹನ ಚಾರ್ಜಿಂಗ್ ಕೇಂದ್ರಗಳನ್ನು ಪಿ.ಎಮ್-ಇ ಡ್ರೈವ್ ಯೋಜನೆಯಡಿ ಸ್ಥಾಪಿಸಲಾಗುವುದು.
• ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ನವೋದ್ಯಮಗಳನ್ನು ಉತ್ತೇಜಿಸಲು IIMಬೆಂಗಳೂರು,University of New South Wales,ಆಸ್ಟ್ರೇಲಿಯಾ ಹಾಗೂ IIScಬೆಂಗಳೂರು ಇವರ ಸಹಯೋಗದಲ್ಲಿ ಸ್ಟಾರ್ಟ್ಅಪ್ಗಳಿಗೆ Incubation Centre ಅನ್ನು 20 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.

ಲೋಕೋಪಯೋಗಿ
• 2025-26ನೇ ಸಾಲಿನಲ್ಲಿ 216 ಸೇತುವೆಗಳ ನಿರ್ಮಾಣ, 288 ಸೇತುವೆ ದುರಸ್ತಿ ಹಾಗೂ 386 ಕಾಲುಸಂಕಗಳ (Foot Bridge) ನಿರ್ಮಾಣ ಕಾಮಗಾರಿಗಳನ್ನು 2,000 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲು ಅನುಮೋದಿಸಲಾಗಿದೆ. ಈ ಕಾರ್ಯಕ್ರಮವನ್ನು ಮುಂದುವರೆಸಿ ಸೇತುವೆಗಳ ನಿರ್ಮಾಣಕ್ಕಾಗಿ ಮುಂದಿನ ಎರಡು ವರ್ಷಗಳಲ್ಲಿ 2,000 ಕೋಟಿ ರೂ. ಮೊತ್ತವನ್ನು ಒದಗಿಸಲಾಗುವುದು.
• 400 ಕೋಟಿ ರೂ. ಅಂದಾಜು ಮೊತ್ತದ 135 ಕಿ.ಮೀ. ಉದ್ದದ ವಾಗ್ದಾರಿ-ರಿಬ್ಬನ್ಪಲ್ಲಿ ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿ ಕಾಮಗಾರಿಯನ್ನು ಕೆ.ಕೆ.ಆರ್.ಡಿ.ಬಿ ಯಿಂದ ಶೇ.50 ರಷ್ಟು ಅನುದಾನ ಒದಗಿಸಿಕೊಂಡು ಅಭಿವೃದ್ಧಿಪಡಿಸಲಾಗುವುದು.
• ಇಲಾಖೆಯ ಅಧೀನದ ಆಸ್ತಿ ದಾಖಲೆಗಳನ್ನು Land Plan surveyಮಾಡಿ Digitization ಹಾಗೂ Record Room ನಿರ್ಮಾಣವನ್ನು ಒಟ್ಟಾರೆ ಐದು ಕೋಟಿ ರೂ. ಮೊತ್ತದಲ್ಲಿ ಕೈಗೊಳ್ಳಲಾಗುವುದು.
• ರಾಜ್ಯದ ಮಲೆನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಸಂಪರ್ಕ ರಹಿತ ಜನವಸತಿ ಪ್ರದೇಶಗಳಿಗೆ ಸಾರ್ವಜನಿಕರ ಮತ್ತು ಶಾಲಾ ವಿದ್ಯಾರ್ಥಿಗಳ ಸುರಕ್ಷತೆಗಾಗಿ 300 ಕಾಲುಸಂಕಗಳನ್ನು
(Foot Bridge) ನಿರ್ಮಿಸಲಾಗುವುದು.
• ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ (SHDP)
ಹಂತ-5 ಘಟ್ಟ-I ರಡಿ 1,512 ಕಿ.ಮೀ ಉದ್ದದ ರಸ್ತೆಯನ್ನು4,000 ಕೋಟಿ ರೂ. ಮೊತ್ತದಲ್ಲಿ ಈಗಾಗಲೇ ಕೈಗೆತ್ತಿಕೊಂಡಿದ್ದು, ಮುಂದುವರೆದು, ಘಟ್ಟ-II ರಡಿ 1,846 ಕಿ.ಮೀ ಉದ್ದದ ರಸ್ತೆಯನ್ನು 5,000 ಕೋಟಿ ರೂ. ಮೊತ್ತದಲ್ಲಿ ಅಭಿವೃದ್ಧಿಪಡಿಸಲಾಗುವುದು.
• ರಾಯಚೂರು ಜಿಲ್ಲೆಯ ಕಲ್ಮಲಾ-ಸಿಂಧನೂರು ರಸ್ತೆಯ ಒಟ್ಟು
77 ಕಿ.ಮೀ ಉದ್ದದ ಪೈಕಿ 60 ಕಿ.ಮೀ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಿ, ಈಗಾಗಲೇ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಿಸಿದ್ದು, ಉಳಿದ 17 ಕಿ.ಮೀ ಉದ್ದದ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು.

• 2026-27ನೇ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆಯ ವಿವಿಧ ಮುಂದುವರೆದ ಯೋಜನೆಗಳಡಿ 2,200 ಕಿ.ಮೀ ಉದ್ದದ ರಾಜ್ಯ ಹೆದ್ದಾರಿಗಳನ್ನು ಹಾಗೂ 3,500 ಕಿ.ಮೀ ಉದ್ದದ ಜಿಲ್ಲಾ ರಸ್ತೆಗಳನ್ನು 5,776 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.
• KSHIP-IV ಅಡಿಯಲ್ಲಿ ADB ನೆರವಿನೊಂದಿಗೆ ಒಟ್ಟು ವೆಚ್ಚ
5,736 ಕೋಟಿ ರೂ. ಯೋಜನಾ ವೆಚ್ಚದಲ್ಲಿ ರಾಜ್ಯದಾದ್ಯಂತ ಸುಮಾರು 875 ಕಿ.ಮೀ ಉದ್ದದ ರಸ್ತೆ ಕಾಮಗಾರಿಗಳ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ, ಅನುಮೋದನೆ ಪಡೆದು ಟೆಂಡರ್ ಆಹ್ವಾನಿಸಲು ಕ್ರಮವಹಿಸಲಾಗುವುದು. (ಅನುಬಂಧ-೬)
• ರಾಜ್ಯದ ವಿವಿಧ ಇಲಾಖೆಗಳಡಿ ನಿರ್ಮಿಸಲಾಗುವ ಕಟ್ಟಡಗಳ ವಿನ್ಯಾಸ ಮತ್ತು ವೆಚ್ಚದಲ್ಲಿ ಏಕರೂಪತೆಯನ್ನು ತರಲು ಒಂದು ತಜ್ಞರ ಸಮಿತಿ ರಚಿಸಲಾಗುವುದು. ಎಲ್ಲಾ ಇಲಾಖೆಗಳಡಿಯಲ್ಲಿನ ಕಟ್ಟಡಗಳ ವಿನ್ಯಾಸ ಮತ್ತು ಅಂದಾಜುಗಳನ್ನು ಸದರಿ ಸಮಿತಿಯ ಶಿಫಾರಸ್ಸಿನಂತೆ ಅಂತಿಮಗೊಳಿಸಲಾಗುವುದು.
• ರಾಜ್ಯಪಾಲರ ಕಛೇರಿಯ ಆವರಣದಲ್ಲಿನ ಆಡಳಿತಾತ್ಮಕ ಬ್ಲಾಕ್, ಒಳಾಂಗಣ ಕ್ರೀಡಾಂಗಣ ಹಾಗೂ ಅಧಿಕಾರಿಗಳ ವಸತಿ ಗೃಹಗಳನ್ನು 27 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು.


ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ

• ದೇಶದ 3ನೇ ಅತಿ ದೊಡ್ಡ ವಿಮಾನ ನಿಲ್ದಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ದಟ್ಟಣೆಯನ್ನು ತಗ್ಗಿಸಲು ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸಲು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ (AAI) ತಾಂತ್ರಿಕ ಅಭಿಪ್ರಾಯ ಪಡೆದು ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸಲಾಗುವುದು.
• ರಾಜ್ಯದಲ್ಲಿನ ಏಳು ದೇಶೀಯ ವಿಮಾನ ನಿಲ್ದಾಣಗಳ ಅಭಿವೃದ್ಧಿಗಾಗಿ ಈವರೆಗೂ 1,593 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಲಾಗಿದೆ. ಪ್ರಸಕ್ತ ಸಾಲಿಗೆ200 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿರುತ್ತದೆ.
• ವಿಜಯಪುರ ಹಾಗೂ ಶಿವಮೊಗ್ಗ ವಿಮಾನ ನಿಲ್ದಾಣಗಳ ಆವರಣದಲ್ಲಿ ಕ್ರಮವಾಗಿ Flight Training School ಹಾಗೂ Manufacturing/ Assembly of Aircraft ಚಟುವಟಿಕೆಗಳನ್ನು ಪಿಪಿಪಿ ಮಾದರಿಯಲ್ಲಿ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು.
• ಉತ್ತರ ಕನ್ನಡ ಜಿಲ್ಲೆಯ ತದಡಿ ಪ್ರದೇಶದಲ್ಲಿ ಪರಿಸರ ಸ್ನೇಹಿ ವಸತಿ ವ್ಯವಸ್ಥೆ, ಪ್ರವಾಸಿ ಮಾಹಿತಿ ಕೇಂದ್ರಗಳು, ಪರಿಸರ ಸ್ನೇಹಿ Walking corridorಮತ್ತು ಇತರೆ ಮೂಲಸೌಕರ್ಯಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು.
• ರೈಲ್ವೆ ಇಲಾಖೆಯೊಂದಿಗೆ 50:50 ರ ಅನುಪಾತದಲ್ಲಿ ವೆಚ್ಚ ಹಂಚಿಕೆ ಆಧಾರದ ಮೇಲೆ 9 ರೈಲ್ವೆ ಮಾರ್ಗಗಳನ್ನು ಕೈಗೊಳ್ಳಲಾಗುತ್ತಿದೆ. ಇದರ ಪೈಕಿ ಏಳು ರೈಲ್ವೆ ಮಾರ್ಗಗಳಿಗೆ ಭೂಸ್ವಾಧೀನಕ್ಕಾಗಿ
2,950 ಕೋಟಿ ರೂ. ಗಳನ್ನು ಹಾಗೂ ನಿರ್ಮಾಣ ಕಾಮಗಾರಿಗಳಿಗಾಗಿ 2,682 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. 2026-27ನೇ ಸಾಲಿನ ಆಯವ್ಯಯದಲ್ಲಿ600 ಕೋಟಿ ರೂ.ಗಳನ್ನು ಮೀಸಲಿರಿಸಿದೆ. (ಅನುಬಂಧ-೭)

• ಬೆಂಗಳೂರು ಉಪನಗರ ರೈಲು ಯೋಜನೆಯ ನಾಲ್ಕು ಕಾರಿಡಾರ್ಗಳ ಪೈಕಿ ಕಾರಿಡಾರ್-2ಕ್ಕೆ (ಬೆನ್ನಿಗಾನಹಳ್ಳಿ-ಚಿಕ್ಕಬಾಣಾವರ) ಅಗತ್ಯವಿರುವ ಶೇ.100ರಷ್ಟು ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದು, ಕಾಮಗಾರಿಯು ಪ್ರಗತಿಯಲ್ಲಿರುತ್ತದೆ. ಕಾರಿಡಾರ್-4ಕ್ಕೆ (ಹೀಲಲಿಗೆ-ರಾಜಾನುಕುಂಟೆ) ಅಗತ್ಯವಿರುವ ಭೂಮಿಯ ಭೂಸ್ವಾಧೀನ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಡಿಸೆಂಬರ್ 2030ರ ಅಂತ್ಯಕ್ಕೆ ಎರಡು ಕಾರಿಡಾರ್ಗಳನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ. ಪ್ರಸಕ್ತ ಸಾಲಿನಲ್ಲಿ ಈ ಕಾಮಗಾರಿಗಳಿಗೆ 500 ಕೋಟಿ ರೂ.ಗಳನ್ನು ಒದಗಿಸಲಾಗಿದೆ.

• ಬೈಯಪ್ಪನಹಳ್ಳಿ-ಹೊಸೂರು ಹಾಗೂ ಯಶವಂತಪುರ-ಚನ್ನಸಂದ್ರ ದ್ವಿಪಥೀಕರಣ ಯೋಜನೆಗಳಡಿಯಲ್ಲಿ 70 ಕಿ.ಮೀ. ರೈಲು ಮಾರ್ಗಗಳ ಯೋಜನೆಗೆ ರಾಜ್ಯ ಸರ್ಕಾರದ ಪಾಲು 406 ಕೋಟಿ ರೂ. ಸೇರಿದಂತೆ ಒಟ್ಟಾರೆ 812 ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ
14 ಕಿ.ಮೀ ದ್ವಿಗುಣಗೊಳಿಸುವ ಕಾಮಗಾರಿಯನ್ನು ಲೋಕಾರ್ಪಣೆಗೊಳಿಸಲಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಈ ಕಾಮಗಾರಿಗಳಿಗೆ 100 ಕೋಟಿ ರೂ.ಗಳನ್ನು ಒದಗಿಸಲಾಗಿದೆ.
• ಬಂದರುಗಳು ಮತ್ತು ಸರಕು ಸಾಗಾಣಿಕೆ ವಲಯದ ಅಭಿವೃದ್ಧಿಗಾಗಿ ʻಸಮಗ್ರ ಮಲ್ಟಿಮೋಡಲ್ ಲಾಜಿಸ್ಟಿಕ್ಸ್ ನೀತಿʼ ಅನ್ನು ರೂಪಿಸಲಾಗುವುದು.

ವಾಣಿಜ್ಯ ಮತ್ತು ಕೈಗಾರಿಕೆ
• ಹೊಸ ಕೈಗಾರಿಕಾ ನೀತಿ 2025-30ರಡಿ ಪ್ರಪ್ರಥಮ ಬಾರಿಗೆ ಅತಿ ಹಿಂದುಳಿದ ಪ್ರದೇಶಗಳಿಗೆ ಶೇ.5ರಷ್ಟು ಹಾಗೂ ಹಿಂದುಳಿದ ಪ್ರದೇಶಗಳಿಗೆ ಶೇ.3ರಷ್ಟು ಹೆಚ್ಚುವರಿ ಪ್ರೋತ್ಸಾಹವನ್ನು ನೀಡುವ ಮೂಲಕ ಬೆಂಗಳೂರಿನಿಂದಾಚೆಯೂ ಕೈಗಾರಿಕಾಭಿವೃದ್ಧಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.
• ರಾಜ್ಯದಲ್ಲಿ ಹೂಡಿಕೆಗೆ ಪೂರಕವಾಗುವಂತೆ ಸುಲಲಿತವಾಗಿ ಉದ್ಯಮ ನಡೆಸಲು ಅತ್ಯಾಧುನಿಕ ಏಕಗವಾಕ್ಷಿ ಪೋರ್ಟಲ್ ಅನ್ನು ಮೈಕ್ರೋಸಾಫ್ಟ್ ವತಿಯಿಂದ ಅಭಿವೃದ್ಧಿಪಡಿಸಿದ್ದು, ಹೂಡಿಕೆಗೆ ಅವಶ್ಯವಿರುವ ಸಮಗ್ರ ಮಾಹಿತಿಯೊಂದಿಗೆ ಸುಮಾರು
30 ಇಲಾಖೆಗಳ 100ಕ್ಕೂ ಹೆಚ್ಚು ಸೇವೆಗಳನ್ನು ಏಕೀಕರಣ ಮಾಡಲಾಗಿದೆ.
• ರಾಜ್ಯದಲ್ಲಿ ಸುಲಲಿತ ವ್ಯವಹಾರಗಳಿಗೆ ಒತ್ತು ನೀಡಲು ಕರ್ನಾಟಕ ನಿರಪರಾಧೀಕರಣ (ಉಪಬಂಧಗಳ ತಿದ್ದುಪಡಿ) ಅಧಿನಿಯಮ, 2025ನ್ನು ಜಾರಿಗೆ ತರುವ ಮೂಲಕ ರಾಜ್ಯದ ಒಟ್ಟು
13 ಅಧಿನಿಯಮಗಳಡಿಯಲ್ಲಿನ 278 ಅನುಚ್ಛೇದಗಳನ್ನು ಕ್ರಿಮಿನಲ್ ಅಪರಾಧ ವ್ಯಾಪ್ತಿಯಿಂದ ಹೊರತುಪಡಿಸಲಾಗಿದೆ.
• ಪ್ರಸಕ್ತ ಸಾಲಿನಲ್ಲಿ ಜೀವಿತಾವಧಿ ಮುಗಿದ ವಾಹನಗಳನ್ನು ಸುರಕ್ಷಿತ ರೀತಿಯಲ್ಲಿ ವಿಲೇವಾರಿ ಮಾಡಲು KIADBಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 100 ಎಕರೆ ಪ್ರದೇಶದಲ್ಲಿ ವಾಹನ ಸ್ಕ್ರ್ಯಾಪಿಂಗ್ (VehicleScrapping)ಸೌಲಭ್ಯ ಘಟಕವನ್ನು ಸ್ಥಾಪಿಸಲಾಗುವುದು.
• ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾರವರಿಂದ ಮಂಡ್ಯದಲ್ಲಿ500 ಕೋಟಿ ರೂ.ಗಳ ವೆಚ್ಚದಲ್ಲಿ ಅತ್ಯಾಧುನಿಕ ನಿರ್ಮಾಣ ಮತ್ತು ಮೂಲಸೌಕರ್ಯ ಸಲಕರಣೆಗಳ ಪರೀಕ್ಷಾ ಘಟಕ’ ವನ್ನು ಸ್ಥಾಪಿಸಲು ರಾಜ್ಯ ಸರ್ಕಾರದ ವತಿಯಿಂದ 100 ಎಕರೆ ಜಮೀನನ್ನು ನೀಡಲಾಗುವುದು.
• KIADBಏರೋಸ್ಪೇಸ್ ಪಾರ್ಕ್ನಲ್ಲಿ ಏರೋಸ್ಪೇಸ್ ಕಾಮನ್ ಫೆಸಿಲಿಟಿ ಸೆಂಟರ್ ಅನ್ನು 30 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ
1೦ ಕೋಟಿ ರೂ.ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.
• ಉನ್ನತ ಮಟ್ಟದ ಜಾಗತಿಕ ಸಮ್ಮೇಳನಗಳು, ಶೃಂಗಸಭೆಗಳು ಮತ್ತು ಪ್ರದರ್ಶನಗಳನ್ನು (MICE) ಆಯೋಜಿಸಲು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮೈಸೂರು ಲ್ಯಾಂಪ್ ವರ್ಕ್ಸ್ ಲಿಮಿಟೆಡ್ನ ಆವರಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಮಾವೇಶ
ಕೇಂದ್ರ ಸಂಕೀರ್ಣವನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು.
• ಉತ್ತರ ಕರ್ನಾಟಕದಲ್ಲಿ ಆರ್ಥಿಕ ಅಭಿವೃದ್ಧಿ ಮತ್ತು ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ದೃಷ್ಟಿಯಿಂದ ಬೆಳಗಾವಿ ಜಿಲ್ಲೆಯ ಸುಮಾರು 1,000 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಪಾರ್ಕ್ನ್ನು ಅಭಿವೃದ್ಧಿಪಡಿಸಲಾಗುವುದು.
• ಮೈಸೂರಿನಲ್ಲಿ ಏರೋಸ್ಪೇಸ್ ಕೈಗಾರಿಕೆಗಳನ್ನು ಉತ್ತೇಜಿಸಲುಮೈಸೂರು ವಿಮಾನ ನಿಲ್ದಾಣದ ಹತ್ತಿರದಲ್ಲಿ ಏರೋಸ್ಪೇಸ್ ಪಾರ್ಕ್ ಅನ್ನು KIADBವತಿಯಿಂದಅಭಿವೃದ್ಧಿಪಡಿಸಲಾಗುವುದು.
• NGEF ಆವರಣದಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ಟ್ರೀ ಪಾರ್ಕ್ ಯೋಜನೆಯ ಮೊದಲನೆಯ ಹಂತವನ್ನು ಪ್ರಸಕ್ತ ಸಾಲಿನಲ್ಲಿ ಲೋಕಾರ್ಪಣೆ ಮಾಡಲಾಗುವುದು. ಎರಡನೇ ಹಂತದಡಿ ಸಾಂಸ್ಕೃತಿಕ ಮತ್ತು ಕ್ರೀಡಾ ಕೇಂದ್ರವನ್ನು ಪಿ.ಪಿ.ಪಿ ಮಾದರಿಯಲ್ಲಿ ಕೈಗೆತ್ತಿಕೊಳ್ಳಲಾಗುವುದು.

• ಬೆಂಗಳೂರು-ಮುಂಬೈ ಕೈಗಾರಿಕಾ ಕಾರಿಡಾರ್ ಯೋಜನೆಯಡಿ 30,000 ಕೋಟಿ ರೂ.ಗಳ ಹೂಡಿಕೆಯನ್ನು ಆಕರ್ಷಿಸುವುದರೊಂದಿಗೆ 75,000 ಉದ್ಯೋಗಾವಕಾಶವನ್ನು ಕಲ್ಪಿಸುವ ಸದುದ್ದೇಶದಿಂದ ʻಧಾರವಾಡ ಕೈಗಾರಿಕಾ ನೋಡ್ʼಗೆ ಸಂಬಂಧಿಸಿದಂತೆ 1,000 ಎಕರೆಯನ್ನು ಭೂಸ್ವಾಧೀನ ಮಾಡಲು 600 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ 200 ಕೋಟಿ ರೂ. ಗಳನ್ನು ಮೀಸಲಿಡಲಾಗಿದೆ.

• MSMEಕೈಗಾರಿಕೆಗಳನ್ನು ಪ್ರೋತ್ಸಾಹಿಸಲು ಮತ್ತು ಉದ್ಯೋಗಾವಕಾಶವನ್ನು ಕಲ್ಪಿಸಲು MSE-CDP ಯೋಜನೆಯಡಿ ೨೦೨೬-೨೭ನೇ ಸಾಲಿಗೆ 10 ಕ್ಲಸ್ಟರ್ಗಳನ್ನು ೧೫ ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.
• MSMEಗಳನ್ನು ಪ್ರೋತ್ಸಾಹಿಸಲು KSSIDC ಮೂಲಕ ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ಎಂಟು ಕೈಗಾರಿಕಾ ವಸಾಹತುಗಳನ್ನು ಅಭಿವೃದ್ಧಿಪಡಿಸಲು ಕ್ರಮವಹಿಸಲಾಗುತ್ತಿದೆ. 2026-27ನೇ ಸಾಲಿನಲ್ಲಿ ವಿಜಯಪುರದ ಮುದ್ದೇಬಿಹಾಳ ಹಾಗೂ ಬಳ್ಳಾರಿಯ ಕಂಪ್ಲಿಯಲ್ಲಿ ಎರಡು ವಸಾಹತುಗಳನ್ನು ಹೊಸದಾಗಿ ಪ್ರಾರಂಭಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಒಟ್ಟು
10 ಕೈಗಾರಿಕಾ ವಸಾಹತುಗಳಲ್ಲಿ 1,500 ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು.
• ರಾಜ್ಯದ ನೇಕಾರರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಲು ಮತ್ತು ಅವರ ಜೀವನ ಮಟ್ಟವನ್ನು ಸುಧಾರಿಸಲು ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗಿದೆ:
• ನೇಕಾರರಸಮ್ಮಾನ್ಯೋಜನೆಯಡಿಒಟ್ಟು 1.30 ಲಕ್ಷನೇಕಾರರಿಗೆವಾರ್ಷಿಕ 5,000 ರೂ.ಗಳಆರ್ಥಿಕನೆರವನ್ನುನೀಡಲಾಗುತ್ತಿದೆ.
• ವಿದ್ಯುತ್ ಸಹಾಯಧನ ಯೋಜನೆಯಡಿ 01 ರಿಂದ 10 ಹೆಚ್.ಪಿ. ವರೆಗೆ ಉಚಿತವಾಗಿ ಮತ್ತು 10 ರಿಂದ 20 ಹೆಚ್.ಪಿ. ವರೆಗಿನ ಘಟಕಗಳಿಗೆ ರಿಯಾಯಿತಿ ದರದಲ್ಲಿ ವಿದ್ಯುತ್ ಒದಗಿಸಲಾಗುತ್ತಿದೆ.
• ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ 20 ಹೆಚ್.ಪಿ.ಯಿಂದ
200 ಹೆಚ್.ಪಿ. ವರೆಗಿನ ವಿದ್ಯುತ್ ಮಗ್ಗ ನೇಕಾರರಿಗೆ ಪ್ರತಿ ಯೂನಿಟ್ಗೆ ಶೇ.50ರಷ್ಟು ಸಹಾಯಧನ ನೀಡುವ ಯೋಜನೆಯನ್ನು ಜಾರಿಗೊಳಿಸಲಾಗಿದೆ.
• ನೇಕಾರರ ಏಳಿಗೆಗಾಗಿ ಪ್ರಸಕ್ತ ಸಾಲಿನಲ್ಲಿ ಒಟ್ಟಾರೆಯಾಗಿ
225 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ.
• ರಾಜ್ಯದಲ್ಲಿರುವ ಸಹಕಾರಿ ನೂಲಿನ ಗಿರಣಿಗಳನ್ನು ಪ್ರೋತ್ಸಾಹಿಸಲು ಪ್ರತಿ ಯೂನಿಟ್ಗೆ 3 ರೂ. ರಂತೆ ವಿದ್ಯುತ್ ಸಹಾಯಧನವನ್ನು ಒದಗಿಸಲಾಗುವುದು.
• ಕಲಬುರಗಿ ಜಿಲ್ಲೆಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ಪಿ.ಎಂ. ಮಿತ್ರ ಮೆಗಾ ಜವಳಿ ಪಾರ್ಕ್ನಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರವು 390 ಕೋಟಿ ರೂ.ಗಳನ್ನು ಅನುಮೋದಿಸಿದೆ. ಈ ಯೋಜನೆಗಾಗಿ 2026-27ನೇ ಸಾಲಿಗೆ
75 ಕೋಟಿ ರೂ.ಗಳನ್ನು ಒದಗಿಸಲಾಗುವುದು.

• 2025-26ನೇ ಸಾಲಿನ ಸಕ್ಕರೆ ಹಂಗಾಮಿಗೆ ಕೇಂದ್ರ ಸರ್ಕಾರವು ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ ಶೇ. 10.25 ಸಕ್ಕರೆ ಇಳುವರಿಯಂತೆ
3,55೦ ರೂ.ಗಳ ಎಫ್.ಆರ್.ಪಿ. ದರವನ್ನು ನಿಗದಿಪಡಿಸಿದೆ. ರಾಜ್ಯದಲ್ಲಿ ಕಬ್ಬು ಬೆಳೆಯುವ ರೈತರಿಗೆ ತಗಲುವ ವಾಸ್ತವಿಕ ವೆಚ್ಚವನ್ನು ಹಾಗೂ ಎಥೆನಾಲ್ ಮತ್ತು ವಿದ್ಯುತ್ ಉತ್ಪಾದನೆಯಂತಹ ವಿವಿಧ ಸಹ-ಉತ್ಪಾದನಾ (co-generation) ಚಟುವಟಿಕೆಗಳಿಂದ ಕಾರ್ಖಾನೆಗಳಿಗೆ ಆಗುವ ಲಾಭವನ್ನು ಗಣನೆಗೆ ತೆಗೆದುಕೊಳ್ಳದೆ ಅವೈಜ್ಞಾನಿಕವಾಗಿ ದರವನ್ನು ನಿಗದಿಪಡಿಸಲಾಗಿದೆ. ಇದರಿಂದ ನ್ಯಾಯಯುತ ಮತ್ತು ಲಾಭದಾಯಕ ಬೆಲೆ ಸಿಗದೆ ರೈತರು ಸಂಕಷ್ಟಗೊಳಗಾಗಿರುತ್ತಾರೆ. ರೈತರ ಹಿತದೃಷ್ಟಿಯನ್ನು ಕಾಪಾಡುವ ನಿಟ್ಟಿನಲ್ಲಿ ಒಂದು ಬಾರಿಯ ಕ್ರಮವಾಗಿ ಆರ್ಥಿಕ ನೆರವು ನೀಡಲು ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ ಹೆಚ್ಚುವರಿಯಾಗಿ 50 ರೂ.ಗಳನ್ನು ಪಾವತಿಸಲು 300 ಕೋಟಿ ರೂ. ಒದಗಿಸಲಾಗಿದೆ.

• ಕರ್ನಾಟಕ ತೈಲ ಮಾರುಕಟ್ಟೆ ಕಂಪನಿಗಳಿಗೆ ನಿಗದಿಪಡಿಸಲಾದ ಎಥೆನಾಲ್ ಖರೀದಿ ಪ್ರಮಾಣವು ನಮ್ಮ ರಾಜ್ಯದ ಉತ್ಪಾದನಾ ಸಾಮರ್ಥ್ಯಕ್ಕಿಂತ ಗಮನಾರ್ಹವಾಗಿ ಕಡಿಮೆಯಾಗಿರುವುದಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದರೂ ಪರಿಗಣನೆಯಾಗದೇ ಇರುವುದರಿಂದ, ನಮ್ಮ ರೈತರು ಮಾರುಕಟ್ಟೆ ಏರಿಳಿತಗಳು ಮತ್ತು ಬೆಲೆ ಅನಿಶ್ಚಿತತೆಗೆ ಒಳಗಾಗಿರುತ್ತಾರೆ. ಆದ್ದರಿಂದ, ರಾಜ್ಯ ಸರ್ಕಾರದ ಕೋಟಾವನ್ನು ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಲಾಗುವುದು.

• ಜಿಲ್ಲಾ ಮಟ್ಟದಲ್ಲಿ ಕಾರ್ಖಾನೆವಾರು ಪ್ರತ್ಯೇಕ ತಂಡಗಳ ಮುಖಾಂತರ 2025-26ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನಲ್ಲಿ ಕನಿಷ್ಟ ತಿಂಗಳಿಗೆ ಎರಡು ಬಾರಿ ಸಕ್ಕರೆ ಇಳುವರಿಯನ್ನು ಪರಿಶೀಲಿಸಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದಾಗಿ 2022-23ನೇ ಸಾಲಿನಲ್ಲಿದ್ದ ಸಕ್ಕರೆ ಇಳುವರಿ ಪ್ರಮಾಣ ಶೇ.9.91 ರಿಂದ 2025-26ನೇ ಸಾಲಿನಲ್ಲಿ ಶೇ.11ಕ್ಕೆ ಗಣನೀಯವಾಗಿ ಏರಿಕೆಯಾಗಿರುತ್ತದೆ.

    For Latest News Updates, Join Our Whatsapp Community🚩
    ranjith
    ranjith
    Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
    RELATED ARTICLES

    LEAVE A REPLY

    Please enter your comment!
    Please enter your name here

    Most Popular