ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಈ ವೇಳೆ ಹಲವು ಮಹತ್ವದ ನಿರ್ಣಯ ತೆಗೆದುಕೊಳ್ಳಲಾಯಿತು. ಹಲವು ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು. ಹೀಗಿದೆ ಸಚಿವ ಸಂಪುಟ ಸಭೆಯ ಹೈಲೆಟ್ಸ್.
ಕೆಕೆಆರ್ಡಿಬಿ ಅನುದಾನದಡಿ ಕಲಬುರಗಿ ವಿಶ್ವವಿದ್ಯಾಲಯದ ಆವರಣದಲ್ಲಿ ಜಿಟಿಟಿಸಿ ಬಹುಕೌಶಲ್ಯಾಭಿವೃದ್ಧಿ ಕೇಂದ್ರವನ್ನು ₹66.75 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ
ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಮಹಾತ್ಮ ಗಾ೦ಧಿ, ಜವಾಹರಲಾಲ್ ನೆಹರು, ಇಂದಿರಾ ಗಾಂಧಿ ಹಾಗೂ ರಾಜೀವ್ಗಾಂಧಿ ಅವರ ಪುತ್ಥಳಿಯನ್ನು ಸ್ಥಾಪಿಸಲು ನಿರ್ಧಾರ
ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಭವನ ನಿರ್ಮಾಣ ಕಾಮಗಾರಿಯನ್ನು ₹70.70 ಕೋಟಿ ವೆಚ್ಚದಲ್ಲಿ ಅನುಷ್ಠಾನ ಮಾಡಲು ಆಡಳಿತಾತ್ಮಕ ಅನುಮೋದನೆ
ಮೈಸೂರಿನಲ್ಲಿ ರೇಷ್ಮೆ ಗೂಡಿನ ಮಾರುಕಟ್ಟೆ ನಿರ್ಮಾಣ ಕಾಮಗಾರಿಯನ್ನು ನಬಾರ್ಡ್ ಸಹಯೋಗದೊಂದಿಗೆ ₹20 ಕೋಟಿ ವೆಚ್ಚದಲ್ಲಿ ಅನುಷ್ಠಾನ ಮಾಡಲು ಆಡಳಿತಾತ್ಮಕ ಅನುಮೋದನೆ
ಬೆಂಗಳೂರಿನ ಕೆಎಸ್ಡಿಎಲ್ ಸಂಸ್ಥೆಯ ಉತ್ಪಾದನಾ ಘಟಕಕ್ಕೆ ₹17.70 ಕೋಟಿ ಮೊತ್ತದಲ್ಲಿ ಸಾಬೂನು ತಯಾರಿಸುವ ಯಂತ್ರೋಪಕರಣಗಳ ಖರೀದಿಗೆ ಆಡಳಿತಾತ್ಮಕ ಅನುಮೋದನೆ
ಕೆಕೆಆರ್ಡಿಬಿ ವತಿಯಿಂದ ₹50 ಕೋಟಿ ವೆಚ್ಚದಲ್ಲಿ ಕಲಬುರಗಿಯಲ್ಲಿ ನೂತನ ಮೆಗಾಡೈರಿ ಸ್ಥಾಪನೆಗೆ ಆಡಳಿತಾತ್ಮಕ ಅನುಮೋದನೆ
ಕೆಕೆಆರ್ಡಿಬಿ ಅನುದಾನದಡಿ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿಯಲ್ಲಿ ₹10 ಕೋಟಿ ವೆಚ್ಚದಲ್ಲಿ ನೂತನ ಪ್ರಾದೇಶಿಕ ಸಹಕಾರ ಭವನ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ
ಚಿಕ್ಕಬಳ್ಳಾಪುರದ ನ೦ದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನೂತನ ಆಸ್ಪತ್ರೆ ಹಾಗೂ ಚಿಕ್ಕಬಳ್ಳಾಪುರದ ಜಿಲ್ಲಾಸ್ಪತ್ರೆಗೆ ಅವಶ್ಯವಿರುವ ಯಂತ್ರೋಪಕರಣ ಮತ್ತು ಪೀಠೋಪಕರಣಗಳನ್ನು ₹40 ಕೋಟಿ ವೆಚ್ಚದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ
ಹೊಳೆನರಸೀಪುರ ಪಟ್ಟಣದಲ್ಲಿ ತಾಲೂಕು ಪಂಚಾಯಿತಿ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿಯ ₹12.30 ಕೋಟಿ ಪರಿಷ್ಕೃತ ಅಂದಾಜಿಗೆ ಅನುಮೋದನೆ
ದೌರ್ಜನ್ಯ, ನಿರ್ಲಕ್ಷ್ಯ ಅಥವಾ ಶೋಷಣೆಗೆ ಒಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲದಲ್ಲಿ ನೆರವು ಮತ್ತು ರಕ್ಷಣೆ ಒದಗಿಸಿ ಭಯ ಮುಕ್ತ ವಾತಾವರಣವನ್ನು ಸೃಷ್ಟಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಕ್ಕ ಪಡೆಯನ್ನು ರಾಜ್ಯದ 30 ಜಿಲ್ಲೆ ಮತ್ತು 5 ಪೊಲೀಸ್ ಆಯುಕ್ತಾಲಯಗಳಲ್ಲಿ ಸ್ಥಾಪಿಸಿ, ಮಹಿಳೆಯರು ಮತ್ತು ಮಕ್ಕಳಿಗೆ ಕಾನೂನಿನ ಅರಿವು, ತಕ್ಷಣದ ರಕ್ಷಣೆ ಮತ್ತು ಅಗತ್ಯ ನೆರವು ನೀಡಲು ಉದ್ದೇಶಿಸಲಾಗಿದೆ.

