ಹೊಸದಾಗಿ ಲಾಂಚ್ ಆಗಿರುವ ಆಪಲ್ ಐಫೋನ್ 15 ಖರೀದಿಯ ಮೇಲೆ ರಿಲಯನ್ಸ್ ಜಿಯೋ ಬಂಪರ್ ಆಫರ್ ಘೋಷಣೆ ಮಾಡಿದೆ.
ರಿಲಯನ್ಸ್ ರಿಟೇಲ್ ಸ್ಟೋರ್‌ಗಳು, ರಿಲಯನ್ಸ್ ಡಿಜಿಟಲ್ ಆನ್‌ಲೈನ್ ಅಥವಾ ಜಿಯೋಮಾರ್ಟ್ ನಲ್ಲಿ ಜಿಯೋ ಐಫೋನ್ 15 ಖರೀದಿ ಮಾಡಿದರೆ ರೂ. 2,394 ಮೌಲ್ಯದ ಆರು ತಿಂಗಳ ಪ್ಲಾನ್ ಅನ್ನು ಉಚಿತವಾಗಿ ಬಳಕೆದಾರರಿಗೆ ನೀಡಲಿದೆ.
ರಿಲಯನ್ಸ್ ಜಿಯೋ, ಆಪಲ್ ಐಫೋನ್ 15 ಖರೀದಿಸುವವರಿಗೆ ರೂ. 399 ಪ್ಲಾನ್ ಅನ್ನು ಆರು ತಿಂಗಳುಗಳವರೆಗೆ ಉಚಿತವಾಗಿ ನೀಡಲಿದೆ. ಇದರ ಒಟ್ಟು ಮೌಲ್ಯ ರೂ. 2,394 ಗಳಾಗಲಿದ್ದು, ಬಳಕೆದಾರರಿಗೆ ಹೆಚ್ಚಿನ ಲಾಭವನ್ನು ಮಾಡಿಕೊಡಲಿದೆ.
ರಿಲಯನ್ಸ್ ಜಿಯೋ, ಆಪಲ್ ಐಫೋನ್ 15 ಖರೀದಿಸುವವರಿಗೆ ನೀಡುತ್ತಿರುವ ರೂ. 399 ಪ್ಲಾನ್ ನಲ್ಲಿ ಬಳಕೆದಾರರಿಗೆ ಪ್ರತಿ ನಿತ್ಯ 3 ಜಿಬಿ ಹೈ ಸ್ಪೀಡ್ ಡೇಟಾ ಬಳಕೆಗೆ ದೊರೆಯಲಿದ್ದು, ಜೊತೆಗೆ ಸಂಪೂರ್ಣ ಅನ್ ಲಿಮಿಟೆಡ್ ಕಾಲಿಂಗ್ ಸಹ ಸಿಗಲಿದೆ. ಅಲ್ಲದೇ ಪ್ರತಿನಿತ್ಯ 100 ಎಸ್ಎಂಎಸ್ ಗಳನ್ನು ಸಹ ಉಚಿತವಾಗಿ ಕಳುಹಿಸಬಹುದಾಗಿದೆ.
ಆದರೆ ರಿಲಯನ್ಸ್ ರಿಟೇಲ್ ಸ್ಟೋರ್, ರಿಲಯನ್ಸ್ ಡಿಜಿಟಲ್ ಆನ್‌ಲೈನ್ ಅಥವಾ ಜಿಯೋಮಾರ್ಟ್ ನಲ್ಲಿ ಜಿಯೋ ಐಫೋನ್ 15 ಖರೀದಿ ಮಾಡಿದರೆ ಮಾತ್ರವೇ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.
ಜಿಯೋ ಬಳಕೆದಾರರಲಲ್ಲದವರಿಗೂ ಈ ಯೋಜನೆಯ ಲಾಭವು ದೊರೆಯಲಿದ್ದು, ಇದಕ್ಕಾಗಿ ಅವರು ಹೊಸ ಜಿಯೋ ಸಿಮ್ ಖರೀದಿ ಮಾಡಬೇಕು, ಇಲ್ಲವೇ ಮೊಬೈಲ್ ನಂಬರ್ ಪೊರ್ಟಬಲಿಟಿ ಆಯ್ಕೆಯನ್ನು ತಮ್ಮದಾಗಿಸಿಕೊಳ್ಳಬೇಕಾಗಿದೆ.
ಈ ಪ್ಲಾನ್ ಸೆಪ್ಟೆಂಬರ್ 22ರಿಂದ ಆರಂಭವಾಗಲಿದ್ದು, ಐಫೋನ್ 15 ಖರೀದಿ ಮಾಡಿ ಜಿಯೋ ಸಿಮ್ ಅನ್ನು ಆಕ್ಟಿವ್ ಮಾಡಿದರೆ ಈ ಹೊಸ ಯೋಜನೆಯು 72 ಗಂಟೆಗಳ ಒಳಗೆ ನಿಮ್ಮ ಬಳಕೆಗೆ ಲಭ್ಯವಾಗಲಿದೆ. ಈ ಯೋಜನೆಯೂ ಕೇವಲ ಐಫೋನ್ 15 ನಲ್ಲಿ ಮಾತ್ರವೇ ಕಾರ್ಯನಿರ್ವಹಿಸಲಿದೆ.